ಜಾಗೃತಿ ಗೀತೆ ರಚಿಸಿದ ಸುಬ್ರಹ್ಮಣ್ಯಗೆ ಬಹುಮಾನ


Team Udayavani, Aug 23, 2018, 11:19 AM IST

blore-4.jpg

ಬೆಂಗಳೂರು: ಸರಗಳ್ಳರ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ವಿಡಿಯೋ ಗೀತೆ ರಚಿಸಿದ್ದ ಬೈಯ ಪ್ಪನಹಳ್ಳಿ ಪೊಲೀಸ್‌ ಠಾಣೆಯ ಸಿಬ್ಬಂದಿ ಸುಬ್ರಹ್ಮಣ್ಯ ಶಾನುಭೋಗ ಅವರ ಕಾರ್ಯಕ್ಕೆ ಇಲಾಖೆಯ ಉನ್ನತ ಅಧಿಕಾರಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇದೇ ವೇಳೆ ನಗರವನ್ನು ಕಾಡುತ್ತಿರುವ “ಡ್ರಗ್‌ ಮಾಫಿಯಾ’ ಕುರಿತು ಜಾಗೃತಿ ವಿಡಿಯೋ ಗೀತೆ ಒಂದನ್ನು ರಚಿಸುವಂತೆ ನಗರ ಪೊಲೀಸ್‌ ಆಯುಕ್ತರು ಸುಬ್ರಹ್ಮಣ್ಯ ಅವರಿಗೆ ಸೂಚಿಸಿದ್ದಾರೆ.

ಸುಬ್ರಹ್ಮಣ್ಯ ಅವರೇ ಜಾಗೃತಿ ಗೀತೆ ರಚಿಸಿ ಹಾಡಿದ ಕುರಿತು “ಉದಯವಾಣಿ’ ವರದಿ ಪ್ರಕಟಿಸಿತ್ತು. ಬಳಿಕ ಸುಬ್ರಹ್ಮಣ್ಯ ಅವರ ಕಾರ್ಯ ವನ್ನು ಮುಕ್ತ ಕಂಠದಿಂದ ಶ್ಲಾಘಿಸಿರುವ ನಗರ ಪೊಲೀಸ್‌ ಆಯುಕ್ತ ಟಿ.ಸುನೀಲ್‌ಕುಮಾರ್‌, ಸುಬ್ರಹ್ಮಣ್ಯ ಅವರಿಗೆ 10 ಸಾವಿರ ರೂ. ಪ್ರೋತ್ಸಾಹ ಧನ ನೀಡಿ ಅಭಿನಂದಿಸಿದ್ದಾರೆ. ಜತೆಗೆ ಮಾದಕ ವಸ್ತು ಸೇವನೆಯಿಂದ ಉಂಟಾಗುವ ದುಷ್ಪರಿಣಾಮ ಗಳ ಕುರಿತ ವಿಡಿಯೋ ಗೀತೆ ಸಿದ್ಧಪಡಿಸುವಂತೆ ಸೂಚಿಸಿದ್ದಾರೆ.

ನಗರ ಪೊಲೀಸ್‌ ಆಯುಕ್ತರು, ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತರ ಸೂಚನೆ ಮೇರೆಗೆ ಕಾರ್ಯೋನ್ಮುಖರಾಗಿರುವ ಸುಬ್ರಹ್ಮಣ್ಯ, ಇದೀಗ ಮಾದಕ ವಸ್ತು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಗೀತೆ ರಚಿಸಲು ಸಿದ್ಧತೆ ನಡೆಸಿದ್ದಾರೆ.
 
ರಾಜಧಾನಿಗೆ ಪಿಡುಗಾಗಿ ಪರಿಣಮಿಸಿರುವ “ಡ್ರಗ್‌ ಮಾಫಿಯಾ’ ಕುರಿತು ಜನರಲ್ಲಿ, ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಸಾಮಾಜಿಕ ಸಂದೇಶವುಳ್ಳ ಗೀತೆ ರಚಿಸಿ ವಿಡಿಯೋ ಸಿದ್ಧಪಡಿಸುವಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಸುಬ್ರಹ್ಮಣ್ಯ ಅವರಿಗೆ ಸೂಚಿಸಿದ್ದಾರೆ. ಮುಖ್ಯವಾಗಿ ಮಾದಕ ವಸ್ತು ಮಾರಾಟಗಾರರ ಕಾರ್ಯಶೈ ಲಿ, ಮಾದಕ ವಸ್ತು ಸೇವನೆಗೆ ದಾಸರಾಗಿ ಸಂಕಷ್ಟಕ್ಕೆ ಸಿಲುಕುವುದು, ಬಳಿಕ ವ್ಯಸನ ಮುಕ್ತ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುವಂತಾಗುವುದು, ಹೀಗೆ ಎಲ್ಲ ಆಯಾಮಗಳನ್ನು ಗೀತೆ ಒಳಗೊಂಡಿ ರಬೇಕು ಎಂದು ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಮಾದಕ ವಸ್ತುಗಳ ಸೇವನೆಯಿಂದ ಮಕ್ಕಳನ್ನು ದೂರ ಇರಿಸುವ ಬಗ್ಗೆ ಪೋಷಕರು ವಹಿಸಬೇಕಾದ ಎಚ್ಚರಿಕೆ ಕ್ರಮಗಳು. ದಂಧೆ ನಿಯಂತ್ರಿಸಲು ಸಾರ್ವಜನಿಕರು ಪೊಲೀಸ್‌ ಇಲಾಖೆ ಜತೆ ಕೈ ಜೋಡಿಸುವ ಅವಕಾಶಗಳು. ಶಾಲೆ, ಕಾಲೇಜುಗಳು ವಹಿಸಬೇಕಾದ ಕ್ರಮಗಳ ಬಗ್ಗೆಯೂ ಗೀತೆಯಲ್ಲಿ ಮಾಹಿತಿ ಇರಲಿದೆ ಎನ್ನಲಾಗಿದೆ.

ಇಲಾಖೆಯಿಂದಲೇ ವೆಚ್ಚ: ಮಾದಕ ವಸ್ತು ಮಾರಾಟ ಜಾಲದ ಬಗ್ಗೆ ಸುಬ್ರಹ್ಮಣ್ಯ ಅವರು ಸಿದ್ಧಪಡಿಸುವ ವಿಡಿಯೋ ಗೀತೆಯ ಚಿತ್ರೀಕರಣ, ಆಡಿಯೋ ರೆಕಾರ್ಡಿಂಗ್‌ ಸೇರಿ ಎಲ್ಲ ವೆಚ್ಚವನ್ನು ನಗರ ಪೊಲೀಸ್‌ ವಿಭಾಗವೇ ಭರಿಸಲಿದೆ. ಅಲ್ಲದೆ, ಈ ಗೀತೆಯನ್ನು ಇಲಾಖೆ ವತಿಯಿಂದಲೇ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಉದಯವಾಣಿ ವಿಶೇಷ ವರದಿ ಪ್ರಕಟಿಸಿತ್ತು
ನಗರದ ಜನತೆಗೆ ತಲೆನೋವಾಗಿ ಪರಿಣಮಿಸಿರುವ ಸರಗಳ್ಳರ ಹಾವಳಿ, ಕಳ್ಳರ ಅಪರಾಧ ಶೈಲಿ, ಸಾರ್ವಜನಿಕರು ವಹಿಸಬೇಕಾದ ಜಾಗರೂಕತೆ ಕುರಿತು ಸುಬ್ರಹ್ಮಣ್ಯ ಅವರು ಸಾಹಿತ್ಯ ಬರೆದು ಸ್ವತಃ ಹಾಡಿದ ವಿಡಿಯೋ ಗೀತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಈ ಕುರಿತು ಆ.20 ರಂದು “ಸರಗಳ್ಳರಿದ್ದಾರೆ ಜೋಕೆ; ನೀವು ಹುಷಾರಾ ಗಿದ್ರೆ ಓಕೆ’ ಎಂಬ ಶೀರ್ಷಿಕೆಯಡಿ “ಉದಯವಾಣಿ’ ವಿಶೇಷ ವರದಿ ಪ್ರಕಟಿಸಿತ್ತು.

ಟಾಪ್ ನ್ಯೂಸ್

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.