ಸ್ವಯಂ ಉದ್ಯೋಗ ಹೊಂದಲು ಕರೆ
Team Udayavani, Aug 23, 2018, 5:17 PM IST
ಶಿರೂರ: ವಲಯ ವ್ಯಾಪ್ತಿಯ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮಹಿಳಾ ಸಂಘಗಳ ಪದಾಧಿಕಾರಿಗಳಿಗೆ ಬಲವರ್ಧನೆ ತರಬೇತಿ ಕಾರ್ಯಾಗಾರ ಮತ್ತು ಸದಸ್ಯರೆಯರಿಗೆ ಗ್ರೀನ್ ವೇ ಜಂಬೂ ಒಲೆಗಳ ವಿತರಣಾ ಕಾರ್ಯಕ್ರಮ ನಡೆಯಿತು. ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹೇಶ ಎಂ.ಡಿ. ಒಲೆ ವಿತರಿಸಿ ಮಾತನಾಡಿದ ಅವರು, ಇಂದಿಗೂ ಹಳ್ಳಿಗಳಲ್ಲಿ 70ಕ್ಕೂ ಹೆಚ್ಚು ಕುಟುಂಬಗಳು ಒಲೆಗೆ ಸೌಧೆ ಬಳಸುವುದರಿಂದ ಅರಣ್ಯ ಹಾಗೂ ಪರಿಸರ ಹಾಳಾಗುತ್ತದೆ. ಇವುಗಳನ್ನು ತಪ್ಪಿಸಲು ಗ್ರೀನ್‌ವೇ ಜಂಬೂ ಒಲೆ ಸಹಕಾರಿಯಾಗುತ್ತದೆ ಎಂದರು.
ಪರಿಸರ ರಕ್ಷಣೆ ಮಾಡುವುದರ ಜತೆಯಲ್ಲಿ ಅರಣ್ಯ ಹಾಗೂ ಪರಿಸರ ಹಾಳಾಗದಂತೆ ಎಚ್ಚರ ವಹಿಸುವಂತೆ ಕೋರಿದರು. ಭವಿಷ್ಯದಲ್ಲಿ ಎದುರಾಗುವ ಅನಾಹುತ ತಡೆಗೆ ಮುಂದಾಗಬೇಕು ಎಂದು ಕರೆ ನೀಡಿದರು. ವಲಯ ಮೇಲ್ವಿಚಾರಕ ಹನಮಂತ ಪಿ.ಎಸ್. ಮಾತನಾಡಿ, ಈಗಾಗಲೇ 20ಕ್ಕೂ ಹೆಚ್ಚು ಮಹಿಳೆಯರಿಗೆ ವಿತರಿಸಲಾಗಿದೆ. ವಲಯದಲ್ಲಿ 200ಕ್ಕೂ ಹೆಚ್ಚು ಒಲೆ ವಿತರಿಸುವ ಗುರಿಯಿದೆ ಎಂದರು. ತಾಲೂಕು ಯೋಜನಾ ಅಧಿಕಾರಿ ಜ್ಯೋತಿ ಜೋಳದ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿರೂರ ಮಹಿಳಾ ಒಕ್ಕೂಟದ ಅಧ್ಯಕ್ಷೆ ಯಮನಕ್ಕಾ ರಾಮಣ್ಣವರ, ಸೇವಾ ಪ್ರತಿನಿಧಿ ಗಳಾದ ಬಸಮ್ಮ ಖಾನಾಪುರ, ಚೆನ್ನಮ್ಮ ವಡ್ಡರ, ಐನಾವತಿ ವಾಲಿಕಾರ, ಸಿದ್ದಪ್ಪ ಹಳ್ಳೂರ, ಅನಸೂಯಾ ಮುತ್ತನ್ನವರ, ಪ್ರೇಮಾ ದೊಡಮನಿ, ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.