ಮಾರ್ಚ್ ವೇಳೆಗೆ ಸಿಗ್ನಲ್ ಮುಕ್ತ ಮಾರ್ಗ
Team Udayavani, Aug 24, 2018, 11:46 AM IST
ಬೆಂಗಳೂರು: ಸಿಲ್ಕ್ಬೋರ್ಡ್ ಜಂಕ್ಷನ್‌ನಿಂದ ನಾಯಂಡಹಳ್ಳಿ ಜಂಕ್ಷನ್‌ವರೆಗಿನ ಸಿಗ್ನಲ್ ಫ್ರೀ ಕಾರಿಡಾರ್ ಯೋಜನೆ 2019ರ ಮಾರ್ಚ್ ವೇಳೆಗೆ ಪೂರ್ಣಗೊಳ್ಳಲಿದ್ದು, ಯೋಜನೆಯಿಂದ ಹೆಚ್ಚಿನ ಜನರಿಗೆ ಅನುಕೂಲವಾಗಲಿದೆ ಎಂದು ಮೇಯರ್ ಆರ್.ಸಂಪತ್‌ರಾಜ್ ಹೇಳಿದರು.
ಹೊಸಕೆರೆಹಳ್ಳಿ ಬಳಿಯ ಮುತ್ತುರಾಜ ಜಂಕ್ಷನ್‌ನಲ್ಲಿ ನಡೆಯುತ್ತಿರುವ ಅಂಡರ್‌ಪಾಸ್ ಕಾಮಗಾರಿಯನ್ನು ಗುರುವಾರ ಪರಿಶೀಲಿಸಿದ ಅವರು, ಸಂಚಾರ ದಟ್ಟಣೆ ನಿವಾರಣೆಗಾಗಿ ಸಿಗ್ನಲ್ ಫ್ರೀ ಕಾರಿಡಾರ್ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ತಾಂತ್ರಿಕ ಕಾರಣಗಳಿಂದ ಯೋಜನೆ ವಿಳಂಬವಾಗುತ್ತಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ವಾಹನಗಳ ಸಂಚಾರಕ್ಕಾಗಿ ಒಟ್ಟು 153 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಕೈಗೆತ್ತಿಕೊಂಡಿದ್ದು, ನಾಯಂಡ ಹಳ್ಳಿ ಜಂಕ್ಷನ್‌ನಿಂದ ಸಿಲ್ಕ… ಬೋರ್ಡ್ ಜಂಕ್ಷನ್‌ನವರೆಗೆ ಡಾಲರ್ಸ್ ಕಾಲೋನಿ, ಕೆಇಬಿ ಜಂಕ್ಷನ್, ಮತ್ತುರಾಜ್ ಜಂಕ್ಷನ್, ಕತ್ತರಿಗುಪ್ಪೆ ಜಂಕ್ಷನ್, ಜೇಡಿಮರ ಜಂಕ್ಷನ್ ಗಳಲ್ಲಿ ಯೋಜನೆ ಕೈಗೆತ್ತಿಕೊಂಡಿದ್ದು, ಕಾಮಗಾರಿ ಪೂರ್ಣಗೊಂಡರೆ 16 ಕಿ.ಮೀ ಉದ್ದದ ರಸ್ತೆ ಸಿಗ್ನಲ್ ಮುಕ್ತವಾಗಲಿದೆ ಎಂದು ಮಾಹಿತಿ ನೀಡಿದರು.
ಮುತ್ತುರಾಜ ಜಂಕ್ಷನ್‌ನಲ್ಲಿ ಸುಮಾರು 18 ಕೋಟಿ ರೂ. ವೆಚ್ಚದಲ್ಲಿ ಕೆಳ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಬೃಹತ್ ಬಂಡೆ ಸಿಕ್ಕಿದರಿಂದ ಕಾಮಗಾರಿ ವಿಳಂಬವಾಗಿದೆ. ಬಂಡೆ ತೆರವುಗೊಳಿಸಲು ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದ್ದು, ಬಂಡೆ ತೆರವುಗೊಳಿಸಿದ ನಂತರ ಕಾಮಗಾರಿ ಚುರುಕುಗೊಳ್ಳಲಿದೆ ಎಂದು ಸಂಪತ್‌ರಾಜ್ ಭರವಸೆ ವ್ಯಕ್ತಪಡಿಸಿದರು.
ಉಳಿದ ಜಂಕ್ಷನ್‌ಗಳಲ್ಲಿ ಕಾಮಗಾರಿ ವೇಳೆ ಹೆಚ್ಚುವರಿ ಸಿಬ್ಬಂದಿ ಮತ್ತು ಯಂತ್ರೋಪಕರಣ ಬಳಸಿ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಿದ್ದು, ಮುತ್ತು ರಾಜ ಜಂಕ್ಷನ್ ಅಂಡರ್‌ಪಾಸ್ ಕಾಮಗಾರಿ 4 ತಿಂಗಳಲ್ಲಿ ಪೂರ್ಣಗೊಳಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ. ಕತ್ತರಿಗುಪ್ಪೆ ಹಾಗೂ ಜೇಡಿಮರ ಕಾಮಗಾರಿಗಳನ್ನೂ ಶೀಘ್ರ ಪೂರ್ಣಗೊಳಿಸುವಂತೆ ಅವರಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಮುಂದಿನ ವಾರದಿಂದ ಒತ್ತುವರಿ ತೆರವು: ಮೇಯರ್ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಮರುಚಾಲನೆ ನೀಡಲು ಪಾಲಿಕೆ ನಿರ್ಧರಿಸಿದ್ದು, ಮುಂದಿನ ಒಂದು ವಾರದೊಳಗೆ ಕಾರ್ಯಾಚರಣೆ ಆರಂಭಿಸಲು ಸಿದ್ಧತೆ ನಡೆಸಿದೆ.
ನಗರಾಭಿವೃದ್ಧಿ ಸಚಿವ ಜಿ.ಪರಮೇಶ್ವರ್ ಪಾಲಿಕೆಗೆ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಭೂ ಮಾಪನಾಧಿಕಾರಿಗಳು ಸರ್ವೆ ನಡೆಸಿ ವರದಿ ನೀಡಿದ್ದಾರೆ. ಮೂರು ದಿನಗಳಲ್ಲಿ ಸರ್ವೆಯ ಸಂಪೂರ್ಣ ವರದಿ ಕೈಸೇರಲಿದ್ದು, ನಗರಾಭಿವೃದ್ಧಿ ಸಚಿವರೊಂದಿಗೆ ಚರ್ಚಿಸಿ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಮೇಯರ್ ಸಂಪತ್‌ರಾಜ್ ತಿಳಿಸಿದ್ದಾರೆ.
ಈಗಾಗಲೇ ನಗರದ 400ಕ್ಕೂ ಹೆಚ್ಚು ಸ್ಥಳಗಳಲ್ಲಿ ಕಂದಾಯ ಇಲಾಖೆಯ ಭೂ ಮಾಪನ ಅಧಿಕಾರಿಗಳು ಒತ್ತುವರಿ ಗುರುತಿಸಿದ್ದಾರೆ. ಆದರೆ, ತೆರವು ಕಾರ್ಯಾಚರಣೆಗೆ ಗುರುತು ಮಾಡಿಕೊಡದ ಕಾರಣ ಕಾರ್ಯಾಚರಣೆಗೆ ಹಿನ್ನಡೆಯಾಗಿದೆ. ವರದಿ ಬಂದ ಕೂಡಲೇ ಸಚಿವರೊಂದಿಗೆ ಚರ್ಚಿಸಿ ಒತ್ತುವರಿ ತೆರವು ಆರಂಭಿಸಲಾಗುವುದು ಎಂದು ಹೇಳಿದರು.
728 ಪ್ರಕರಣ ಬಾಕಿ: ಪಾಲಿಕೆಯ ಮಾಹಿತಿಯಂತೆ ನಗರದಲ್ಲಿ ಒಟ್ಟು 1,953 ರಾಜಕಾಲುವೆ ಒತ್ತುವರಿ ಪ್ರಕರಣಗಳಿದ್ದು, 2016ಕ್ಕೆ ಮೊದಲೇ 820ಕ್ಕೂ ಹೆಚ್ಚು ಪ್ರಕರಣಗಳಲ್ಲಿನ ಒತ್ತುವರಿಯನ್ನು ಪಾಲಿಕೆ ತೆರವುಗೊಳಿಸಿತ್ತು. ಮುಖ್ಯಮಂತ್ರಿಗಳ ನಿರ್ದೇಶನದ ನಂತರದಲ್ಲಿ 405 ಪ್ರಕರಣಗಳಲ್ಲಿ ಮಾತ್ರ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿರುವ ಬಿಬಿಎಂಪಿ, ಒತ್ತುವರಿಯಿಂದ ತೀವ್ರ ಸಮಸ್ಯೆಯಾಗುತ್ತಿರುವ ಕಡೆಗಳಲ್ಲಿ ಕಾರ್ಯಾಚರಣೆಗೆ ಮುಂದಾಗಿಲ್ಲ. ಪ್ರಭಾವಿಗಳ ಪ್ರಕರಣಗಳಲ್ಲಿ ಪಾಲಿಕೆ ಮೌನವಹಿಸಿದ್ದು, ಇನ್ನೂ 728 ಪ್ರಕರಣಗಳಲ್ಲಿ ತೆರವು ಬಾಕಿಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್
Fraud Case: ಟೆಕಿಗೆ ವಂಚನೆ ಕೇಸ್; ಆರೋಪಿ ಪತ್ತೆಗೆ ತಂಡ ರಚನೆ
New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ
Fraud case: ಚಿನ್ನಾಭರಣ ವಂಚನೆ ಕೇಸ್; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.