Blackmail,Rape: ವಿದ್ಯಾರ್ಥಿನಿ ಆತ್ಮಹತ್ಯೆ, ಮಹಿಳೆ ಸಹಿತ ಮೂವರ ಸೆರೆ
Team Udayavani, Aug 24, 2018, 4:42 PM IST
ಜಿಂದ್ : ಪದವಿ ತರಗತಿಯ ವಿದ್ಯಾರ್ಥಿನಿಯೋರ್ವಳನ್ನು ಬ್ಲಾಕ್ ಮೇಲ್ ಮಾಡಿ ಆಕೆಯ ಮೇಲೆ ಹಲವು ತಿಂಗಳ ಕಾಲ ಅತ್ಯಾಚಾರ ನಡೆಸಿ ಆಕೆ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣರಾದ ಆರೋಪದ ಮೇಲೆ ಪೊಲೀಸರು ಓರ್ವ ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.
ತನ್ನ ಸಾವಿಗೆ ಈ ಮೂವರು ಕಾರಣರೆಂದು ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿಯು ಆತ್ಮಹತ್ಯೆ ಮಾಡಿಕೊಂಡಿದ್ದಳು. ಘಟನೆಯ ಬಗ್ಗೆ ಆಕೆಯ ತಂದೆ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದರು.
ವಿದ್ಯಾರ್ಥಿನಿಯ ತಂದೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಘಟನೆಯಯನ್ನು ಈ ರೀತಿ ವಿವರಿಸಿದ್ದಾರೆ : “ಮೂವರು ಬಂಧಿತರಲ್ಲಿ ಓರ್ವಳಾಗಿರುವ ಮಹಿಳೆಯು ನನ್ನ ಮಗಳ ಸ್ನೇಹಿತೆಯಾಗಿದ್ದು ಆಕೆಯು ನನ್ನ ಮಗಳ ಫೋಟೋಗಳನ್ನು ತನ್ನ ಸಹಚರರಲ್ಲಿ ಹಂಚಿಕೊಂಡಿದ್ದಳು. ಅವರು ಈ ಫೋಟೋಗಳನ್ನು ಸಾಫ್ಟ್ ವೇರ್ ಮೂಲಕ ತಿರುಚಿ ನನ್ನ ಮಗಳನ್ನು ಸೆಕ್ಸ್ ಗಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದರು. ಸೆಕ್ಸ್‌ಗೆ ಒಪ್ಪದಿದ್ದಲ್ಲಿ (ತಿರುಚಲ್ಪಟ್ಟ) ಫೋಟೋಗಳನ್ನು ಬಹಿರಂಗ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದರ ಪರಿಣಾಮವಾಗಿ ಅವರು ನನ್ನ ಮಗಳನ್ನು ಅನೇಕ ಬಾರಿ ಹಲವು ತಿಂಗಳ ಕಾಲ ರೇಪ್ ಮಾಡಿದರು’.
ಪೊಲೀಸರು ಮರಣೋತ್ತರ ಪರೀಕ್ಷೆಯ ಬಳಿಕ ಶವವನ್ನು ಸಂಬಂಧಿಕರಿಗೆ ಬಿಟ್ಟುಕೊಟ್ಟಿದ್ದಾರೆ. ವಿದ್ಯಾರ್ಥಿನಿ ಬರೆದಿಟ್ಟಿರುವ ಡೆತ್ ನೋಟಿನ ಸಾಚಾತನವನ್ನು ಅರಿಯಲು ಅದನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಡಿವೈಎಸ್ಪಿ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.