ಸಾಲಮನ್ನಾ ಸಾಧಕ-ಬಾಧಕ ಚಿಂತಿಸಿ: ರಮೇಶ
Team Udayavani, Aug 24, 2018, 5:16 PM IST
ಚಿಕ್ಕೋಡಿ: ಸರಕಾರಗಳು ಕೇವಲ ರಾಜಕಾರಣಕ್ಕಾಗಿ ಸಾಲ ಮತ್ತು ಬಡ್ಡಿ ಮನ್ನಾ ಮಾಡಿ ಹೋಗದೇ, ಬಜೆಟ್‌ನಲ್ಲಿ ಅದಕ್ಕೆ ಹಣ ತೆಗೆದಿಡುವ ಕೆಲಸ ಮಾಡಬೇಕು ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಹೇಳಿದರು. ತಾಲೂಕಿನ ಕೇರೂರ ಗ್ರಾಮದಲ್ಲಿ ಬಿಡಿಸಿಸಿ ಬ್ಯಾಂಕಿನ 88ನೇ ಶಾಖೆ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಸರಕಾರ ಸಾಲ ಮತ್ತು ಬಡ್ಡಿ ಮನ್ನಾ ಮಾಡುವ ಮೊದಲು ಅದರ ಸಾಧಕ, ಬಾಧಕಗಳನ್ನು ವಿಚಾರಣೆ ಮಾಡಬೇಕು. ಸರಕಾರ ಪ್ರತಿಯೊಂದರಲ್ಲಿಯೂ ರಾಜಕಾರಣ ಮಾಡುವುದನ್ನು ನಿಲ್ಲಿಸಬೇಕು. ಹಿಂದಿನ ಸರಕಾರ ಘೋಷಣೆ ಮಾಡಿರುವ ಸಾಲ ಬಡ್ಡಿ ಹಣ ಬೆಳಗಾವಿ ಜಿಲ್ಲೆಗೆ ಇನ್ನೂ 619ಕೋಟಿ ರೂ. ಮೊದಲು ಕೊಡಬೇಕು. ರೈತರ ಜೀವನದೊಂದಿಗೆ ಚೆಲ್ಲಾಟವಾಡುವುದನ್ನು ನಿಲ್ಲಿಸಬೇಕು ಎಂದು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬ್ಯಾಂಕಿನ ನಿರ್ದೇಶಕ ಡಿ.ಟಿ.ಪಾಟೀಲ ಮಾತನಾಡಿ, ಬಿಡಿಸಿಸಿ ಬ್ಯಾಂಕು ಕೇವಲ ಬೆಳೆ ಸಾಲಕ್ಕೆ ಸೀಮಿತವಾಗಿಲ್ಲ. ಉಳಿದ ರಾಷ್ಟ್ರೀಕೃತ ಬ್ಯಾಂಕಿನಂತೆ ವಿವಿಧ ರೂಪದ ಸಾಲಗಳನ್ನು ಕಡಿಮೆ ಬಡ್ಡಿ ದರದಲ್ಲಿ ನೀಡಲಾಗುತ್ತಿದ್ದು, ಈ ಭಾಗದ ರೈತರು ಇದರ ಲಾಭ ಪಡೆದುಕೊಳ್ಳಬೇಕು ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ನಿರ್ದೇಶಕ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ಈ ಭಾಗದ ರೈತರು ಬ್ಯಾಂಕಿನಿಂದ ದೊರೆಯುವ ಸಾಲ ಸೌಲಭ್ಯ ಪಡೆದುಕೊಂಡು ಕೃಷಿ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಂಡು ಮಿಶ್ರ ಬೆಳೆ ಬೆಳೆಯುವ ಮುಖಾಂತರ ಹೆಚ್ಚಿನ ಲಾಭ ಪಡೆಯಲು ಮುಂದಾಗಬೇಕು ಎಂದು ಹೇಳಿದರು.
ಚಿಕ್ಕೋಡಿಯ ಸಂಪಾದನಾ ಚರಮೂರ್ತಿಮಠದ ಸಂಪಾದನಾ ಮಹಾಸ್ವಾಮಿಗಳು ಶಾಖೆ ಉದ್ಘಾಟಿಸಿದರು. ಮಾಜಿ ಶಾಸಕರಾದ ಬಾಳಾಸಾಹೇಬ ವಡ್ಡರ, ದತ್ತು ಹಕ್ಯಾಗೋಳ, ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಸುರೇಶ ಅಳಗುಂಡಿ, ಸುರೇಶ ಬೆಲ್ಲದ, ಅನ್ನಾಸಾಬ ಕೋಳಿ, ಮಲ್ಲಿಕಾರ್ಜುನ ಪಾಟೀಲ, ಚನಗೌಡ ಪಾಟೀಲ, ಎಂ.ಎ.ಪಾಟೀಲ, ಶೇಖರ ಪಾಟೀಲ, ಹರೀಶ ಇನಾಮದಾರ, ಮಹಾಂತೇಶ ಪಾಟೀಲ, ಟಿಸಿಒ ಎಂ.ಬಿ.ಖಟಾವಕರ, ಪಿ.ಡಿ.ನವಲೆ, ವಿ.ಎಸ್.ಮಾಳಿಂಗೆ, ಅನೀಲ ಅಂಬಿ ಮುಂತಾದವರು ಉಪಸ್ಥಿತರಿದ್ದರು. ಎ.ಸಿ.ಕಲ್ಮಟ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸರ್ಕಾರ ಮತ್ತು ವಿಜಯೇಂದ್ರ ನಡುವೆ ಉತ್ತಮ ಅಡ್ಜಸ್ಟ್‌ಮೆಂಟ್ ಇದೆ: ಯತ್ನಾಳ್ ಆರೋಪ
Hubli: ಕಸದ ವಾಹನಕ್ಕೆ ಸ್ಕೂಟಿ ಡಿಕ್ಕಿ: ಓರ್ವ ವಿದ್ಯಾರ್ಥಿ ಸಾವು, ಮತ್ತೋರ್ವ ಗಂಭೀರ
BJP ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಗೊತ್ತಿಲ್ಲ: ಸಚಿವ ಜೋಶಿ
BJP ರಾಜ್ಯಾಧ್ಯಕ್ಷರ ನೇಮಕ ಹೈಕಮಾಂಡ್ ನಿರ್ಧಾರ: ಅರವಿಂದ ಬೆಲ್ಲದ
Hubli: ಮೀಟರ್ ಬಡ್ಡಿಗೆ ಮನನೊಂದು ಲಾರಿ ಚಕ್ರದಡಿ ಬಿದ್ದು ವ್ಯಕ್ತಿ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.