ವಿಮಾನ ನಿಲ್ದಾಣ ಭದ್ರತೆಗೆ ಸೂಚನೆ
Team Udayavani, Aug 25, 2018, 10:35 AM IST
ಕಲಬುರಗಿ: ನಗರದ ಹೊರವಲಯದ ಸೇಡಂ ರಸ್ತೆಯ ಶ್ರೀನಿವಾಸ ಸರಡಗಿ ಹತ್ತಿರ ನಿರ್ಮಾಣವಾಗಿರುವ ಕಲಬುರಗಿ
ವಿಮಾನ ನಿಲ್ದಾಣದಲ್ಲಿ ಆ. 26ರಂದು ಟ್ರೈಯಲ್ ಲ್ಯಾಂಡಿಂಗ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿರುವುದರಿಂದ ವಿಮಾನ ನಿಲ್ದಾಣಕ್ಕೆ ಸೂಕ್ತ ಬಂದೋಬಸ್ತ್ ಕಲ್ಪಿಸುವಂತೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದರು.
ಕಲಬುರಗಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿ, ವಿಮಾನ ನಿಲ್ದಾಣದ ರನ್‌ವೇ ಮೇಲೆ ವಿಮಾನ ಇಳಿಯುವಾಗ ಅಥವಾ ಹಾರುವಾಗ ಯಾವುದೇ ತರಹದ ಅಡಚಣೆಯಾಗದಂತೆ ನೋಡಿಕೊಳ್ಳಲು ಪೊಲೀಸರನ್ನು ನಿಯೋಜಿಸಬೇಕು ಎಂದರು.
ಹೈದ್ರಾಬಾದ್‌ನಿಂದ ಡೈಮಂಡ್ ಡಿಎ 40 ಹಾಗೂ ಡೈಮಂಡ್ ಡಿಎ 42 ಎನ್ನುವ ಎರಡು ವಿಮಾನಗಳು ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿವೆ. ಈ ವಿಮಾನಗಳು ನಾಲ್ಕು ಪ್ರಯಾಣಿಕರನ್ನು ಹೊತ್ತೂಯ್ಯುವ ಲಘು ವಿಮಾನಗಳಾಗಿದ್ದು, ಆ. 26ರಂದು ಬೆಳಗ್ಗೆ 10:30 ರಿಂದ 11 ರೊಳಗಾಗಿ ಆಗಮಿಸಲಿವೆ. ವಿಮಾನ ನಿಲ್ದಾಣದಲ್ಲಿ ಅಂಬ್ಯುಲೆನ್ಸ್ ಹಾಗೂ ಅಗ್ನಿಶಾಮಕ ದಳದವರು ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಹೈದ್ರಾಬಾದನ ಏಶಿಯಾ ಫೆಸಿಫಿಕ್ ಫ್ಲೆಟ್ ಟ್ರೇನಿಂಗ್ ಅಕಾಡೆಮಿ ತಂಡದವರು ವಿಮಾನದ ಟ್ರೈಯಲ್ ಲ್ಯಾಂಡಿಂಗ್‌ಗೂ ಮುಂಚೆ ರನ್‌ವೇ ಮೇಲೆ ಫಾರೆನ್ ಆಬೆಕ್ಟ್ ಡ್ಯಾಮೇಜ್ ಕುರಿತು ಪರಿಶೀಲನೆ ಕೈಗೊಳ್ಳಬೇಕು ಹಾಗೂ
ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ತಯಾರಿ ನಡೆಸಬೇಕು ಎಂದು ವಿವರಿಸಿದರು.
ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವಿಮಾನ ನಿಲ್ದಾಣಕ್ಕೆ ಆಗಮಿಸುವ ಗಣ್ಯರ ವಾಹನಗಳು ನಿಲ್ಲಲು ಅನುಕೂಲವಾಗುವ ಹಾಗೆ ವಾಹನ ನಿಲುಗಡೆಗೆ ಸ್ಥಳಾವಕಾಶ ಕಲ್ಪಿಸಬೇಕು. ಇದಕ್ಕಾಗಿ ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಆ. 26ರಂದು ಬೆಳಗ್ಗೆ 10:30 ಕ್ಕೆ ವಿಮಾನದ ಟ್ರೆ„ಯಲ್ ರನ್ ಕಾರ್ಯಕ್ರಮ ನಡೆಯಲಿದೆ. ನಗರದ ಎಲ್ಲ ಸಾರ್ವಜನಿಕರಿಗೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ಸಾರ್ವಜನಿಕರು ಬೆಳಗಿನ 10:30 ರೊಳಗಾಗಿ ಶ್ರೀನಿವಾಸ ಸರಡಗಿ ರಸ್ತೆ ಮೂಲಕ ವಿಮಾನ ನಿಲ್ದಾಣದ ಮುಖ್ಯ ಪ್ರವೇಶ ದ್ವಾರವನ್ನು ಪ್ರವೇಶಿಸಬೇಕು.
ಭದ್ರತಾ ಸಿಬ್ಬಂದಿಗಳಿಂದ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳುವುದರಿಂದ ಸಾರ್ವಜನಿಕರು ಯಾವುದೇ ತರಹದ ವಸ್ತುಗಳನ್ನು ಕೊಂಡೊಯ್ಯಬಾರದು ಹಾಗೂ ಸಾರ್ವಜನಿಕರಿಗಾಗಿ ನಿಗದಿಪಡಿಸಿದ ಸ್ಥಳದಲ್ಲಿಯೇ ನಿಂತು ವಿಮಾನ ಹಾರಾಟ ವೀಕ್ಷಿಸಬೇಕೆಂದು ಮನವಿ ಮಾಡಿದರು. ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ, ಸಂಸದ ಖರ್ಗೆ ಅವರ ಆಪ್ತ ಕಾರ್ಯದರ್ಶಿ ಶಿವಣ್ಣ, ಐಎಎಸ್ ಪ್ರೊಬೇಷನರಿ ಅಧಿಕಾರಿ ಲೋಖಂಡೆ ಸ್ನೇಹಲ್ ಸುಧಾಕರ, ಏಶಿಯಾ ಫೆಸಿಫಿಕ್ ಫ್ಲೆ„ಟ್ ಟ್ರೇನಿಂಗ್ ಅಕಾಡೆಮಿಯ
ಅಮಿತ್‌ಸಿಂಗ್, ಮೊಹ್ಮದ ಫೈಸಲ್, ಕ್ಯಾಪ್ಟನ್ ಶಾಮ್, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಮುಖಾ¤ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಎಂ.ಕೆ. ಪಾಟೀಲ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.
ನಾಳೆ ವಿಮಾನ ಹಾರಿಸುತ್ತೇವೆ
ಕಲಬುರಗಿ: ಬಹಳ ದಿನಗಳಿಂದ ಮುಂದೂಡುತ್ತಲೇ ಬರಲಾಗುತ್ತಿರುವ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಆ. 26ರಂದು ಪ್ರಾಯೋಗಿಕ (ಪರೀಕ್ಷಾರ್ಥ)ವಾಗಿ ವಿಮಾನ ಹಾರಾಟ ನಡೆಸಲಾಗುತ್ತದೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಚಾರ ನಿಮಿತ್ತ ನಗರಾಕ್ಕಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪರೀಕ್ಷಾರ್ಥ ವಿಮಾನ ಹಾರಾಟ ಮಾಡುವುದು ದೊಡ್ಡದಲ್ಲ. ಉಡಾನ್ ಯೋಜನೆ ಅಡಿ ಸೇರಿಸುವಂತೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಉಡಾನ್ ಯೋಜನೆ ಅಡಿ ಸೇರಿದರೆ ಅನುಕೂಲವಾಗುತ್ತದೆ ಎಂದರು.
ಕಲಬುರಗಿ ವಿಮಾನ ನಿಲ್ದಾಣದ ಬಹುತೇಕ ಕಾಮಗಾರಿ ತಮ್ಮ ಸರ್ಕಾರದ ಅವಧಿಯಲ್ಲಿಯೇ ಮುಗಿದಿದೆ. ಬಿಜೆಪಿ ಸರ್ಕಾರದಲ್ಲಿ ಕೊಟ್ಟ ನಿಲ್ದಾಣ ನಿರ್ಮಾಣ ಕಾರ್ಯದ ಏಜೆನ್ಸಿ ಏನು ಕೆಲಸ ಮಾಡಿದೆ ಎಂಬುದು ಎಲ್ಲರಿಗೂ ಗೊತ್ತು. ಕಲಬುರಗಿ-ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಏಕಕಾಲದಲ್ಲಿಯೇ ಚಾಲನೆ ನೀಡಲಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಏಲ್ಲಿದೆ? ನಾವು ಬಿಜೆಪಿಯವರ ಹಾಗೆ
ಬರೀ ಮಾತನಾಡುವುದಿಲ್ಲ. ಕೆಲಸ ಮಾಡಿದ ಮೇಲೆ ಹೇಳುತ್ತೇವೆ ಎಂದರು. ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ, ಮಾಜಿ ಶಾಸಕ ಬಿ.ಆರ್. ಪಾಟೀಲ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.