ಪ್ರಕೃತಿ ವಿಕೋಪಕ್ಕೆ ದೇವರಿಂದಲೇ ಪರಿಹಾರ
Team Udayavani, Aug 25, 2018, 12:51 PM IST
ಬೆಂಗಳೂರು: ಪ್ರಕೃತಿ ವಿಕೋಪಗಳಾದಾಗ ಮನುಷ್ಯರಿಗಿಂತ ದೇವರಿಂದಲೇ ಪರಿಹಾರ ಸಾಧ್ಯ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಕೊಡಗು ನೆರೆ ಸಂತ್ರಸ್ಥರಿಗೆ ಹಂಚಿಕೆ ಮಾಡಲು ತಮ್ಮ ಸ್ವಂತ ವೆಚ್ಚದಲ್ಲಿ ಪರಿಹಾರ ಸಾಮಗ್ರಿಗಳನ್ನು ಕೊಂಡೊಯ್ದ ವಾಹನಕ್ಕೆ ಚಾಲನೆ ನೀಡಿ ನಂತರ ಮಾತನಾಡಿದರು.
ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯಕ್ಕೆ ಬಂದಿರುವ ಕಷ್ಟ ಪರಿಹಾರ ಮಾಡುವಂತೆ ಕೇಳಿಕೊಳ್ಳಲು ದೇವರ ಬಳಿ ಹೋಗಿದ್ದಾರೆ. ಪ್ರಕೃತಿ ವಿಕೋಪದಂತಹ ಘಟನೆಗಳಿಗೆ ಮನುಷ್ಯರಿಗಿಂತ ದೇವರಿಂದ ಮಾತ್ರ ಪರಿಹಾರ ಸಾಧ್ಯ. ರಾಜಸ್ಥಾನದ ದೇವಸ್ಥಾನಗಳಿಗೆ ಭೇಟಿ ನೀಡಿ, ಅಜೆರ್ ದರ್ಗಾಕ್ಕೂ ಭೇಟಿ ನೀಡಿದ್ದಾರೆ. ದೇವಸ್ಥಾನಗಳಿಗೆ ಭೇಟಿ ನೀಡಿರುವುದು ತಪ್ಪಲ್ಲ ಎಂದು ತಿಳಿಸಿದರು.
ರಾಜ್ಯ ಸರ್ಕಾರ ಪತನವಾಗುವುದನ್ನು ತಪ್ಪಿಸುವಂತೆ ದೇವರಲ್ಲಿ ಮೊರೆ ಹೋಗಿದ್ದಾರೆ ಎಂಬ ಮಾತನ್ನು ತಳ್ಳಿ ಹಾಕಿದ ಅವರು, ರಾಜ್ಯ ಸರ್ಕಾರ ಸುಭದ್ರವಾಗಿದ್ದು, ಐದು ವರ್ಷ ಯಾವುದೇ ತೊಂದರೆಯಿಲ್ಲ. ಇದೇ ವೇಳೆ, ಕೊಡಗಿನ ನೆರೆ ಸಂತ್ರಸ್ಥರಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ವತಿಯಿಂದ 10 ಕೆಜಿ ಅಕ್ಕಿ, 1 ಕೆಜಿ ಸಕ್ಕರೆ, 1ಕೆಜಿ ಬೇಳೆ, 1 ಕೆಜಿ ಅಡುಗೆ ಎಣ್ಣೆ ವಿತರಿಸಲು ನಿರ್ಧರಿಸಲಾಗಿದೆ ಎಂದರು.
ವೈಯಕ್ತಿಕವಾಗಿ ಅಗತ್ಯ ವಸ್ತುಗಳಾದ 5000 ಬ್ಲಾಂಕೆಟ್ಸ್, 3 ಸಾವಿರ ನೈಟಿ, 2500 ಬಕೆಟ್ ಮತ್ತು ಮಗ್ಗಳನ್ನು ಕಳುಹಿಸಿ ಕೊಟ್ಟಿದ್ದೇನೆ. ಎರಡು ದಿನ ಮಡಿಕೇರಿಯಲ್ಲಿಯೇ ವಾಸ್ತವ್ಯ ಹೂಡಿ, ಅಲ್ಲಿನ ನಿರಾಶ್ರಿತರ ಅಗತ್ಯಗಳನ್ನು ನೋಡಿಕೊಂಡು ಅಗತ್ಯ ವಸ್ತುಗಳನ್ನು ಕಳುಹಿಸಿಕೊಡಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.