ಇಂದು ವಿವಿಧೆಡೆ ಬ್ರಹ್ಮ ಶ್ರೀ ನಾರಾಯಣ ಗುರು ಜನ್ಮ ದಿನಾಚರಣೆ
Team Udayavani, Aug 27, 2018, 10:38 AM IST
ಮಹಾನಗರ : ದ.ಕ. ಜಿಲ್ಲಾಡಳಿತ, ಜಿ.ಪಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಆ. 27ರಂದು ಬ್ರಹ್ಮ ಶ್ರೀನಾರಾಯಣ ಗುರು ಜಯಂತಿ ಕುದ್ರೋಳಿಯ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಸಚಿವ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.
ದ.ಕ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸಂಸದ ನಳಿನ್, ಶಾಸಕರಾದ ಉಮಾನಾಥ ಎ. ಕೋಟ್ಯಾನ್, ಡಾ| ಭರತ್ ಶೆಟ್ಟಿ ವೈ., ರಾಜೇಶ್ ನಾೖಕ್ ಉಳಿಪಾಡಿ, ಹರೀಶ್ ಪೂಂಜ, ಸಂಜೀವ ಮಠಂದೂರು, ಎಸ್. ಅಂಗಾರ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜಾ, ಕೋಟ ಶ್ರೀನಿವಾಸ ಪೂಜಾರಿ, ಕೆ. ಪ್ರತಾಪಚಂದ್ರ ಶೆಟ್ಟಿ, ಹರೀಶ್ ಕುಮಾರ್, ಎಸ್.ಎಲ್. ಭೋಜೇಗೌಡ, ಆಯನೂರು ಮಂಜುನಾಥ್, ಮೇಯರ್ ಕೆ. ಭಾಸ್ಕರ್ ಮುಖ್ಯ ಅತಿಥಿಗಳಾಗಿರುತ್ತಾರೆ. ಸಂತ ಅಲೋಶಿಯಸ್ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕ ಡಾ| ಗಣೇಶ್ ಅಮೀನ್ ಸಂಕಮಾರ್ ಅವರು ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿಯ ಸಂದೇಶ ನೀಡಲಿದ್ದಾರೆ.
ಉಳ್ಳಾಲ
ಸೋಮೇಶ್ವರ ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರದಲ್ಲಿ ಗುರುಗಳ ದಿನಾಚರಣೆ ಜರಗಲಿದೆ ಎಂದು ಕೊಲ್ಯ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಆನಂದ್ ಎಸ್. ಕೊಂಡಾಣ ತಿಳಿಸಿದ್ದಾರೆ.
ಹಳೆಯಂಗಡಿ
ಇಲ್ಲಿನ ಬಿಲ್ಲವ ಸಮಾಜ ಸೇವಾ ಸಂಘ ಹಾಗೂ ಯುವವಾಹಿನಿ ಘಟಕದ ಸಂಯುಕ್ತ ಆಶ್ರಯದಲ್ಲಿ ಬೆಳಗ್ಗೆ 7ರಿಂದ ಪಂಚಾಮೃತ ಅಭಿಷೇಕ, 8ರಿಂದ ಭಜನೆ, 11ಕ್ಕೆ ಸಭಾ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ, ಬಹುಮಾನ ವಿತರಣೆ, ದಿ| ದಾಮೋದರ ಸುವರ್ಣರ ಸ್ಮರಣಾರ್ಥವಾಗಿ ನಿರ್ಮಿಸಿದ ಶ್ರೀ ಗುರು ಪ್ರಸಾದಾಲಯದ ಉದ್ಘಾಟನೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಚಂದ್ರಶೇಖರ ನಾನಿಲ್ ತಿಳಿಸಿದ್ದಾರೆ.
ಗುತ್ತಕಾಡು
ಬ್ರಹ್ಮ ಶ್ರೀ ನಾರಾಯಣಗುರು ಧರ್ಮಪರಿಪಾಲನ ಸಮಿತಿ ಗುತ್ತಕಾಡು ತಾಳಿಪಾಡಿ ಇದರ ಆಶ್ರಯದಲ್ಲಿ ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ, ಕಲಶ ಪೂಜೆ ಅಭಿಷೇಕ, ನೂತನ ಪಲ್ಲಕ್ಕಿಯ ಸಮರ್ಪಣೆ ನಡೆಯಲಿದೆ. ಬೆ. 10ರಿಂದ ಬರ್ಕೆ ತಾಳಿಪಾಡಿ ಸಂಪ ಪೂಜಾರ್ತಿ ಅವರ ಮನೆಯಲ್ಲಿ ಭಜನೆ, ಶ್ರೀಗುರು ಪಾದುಕೆಯ ಪೂಜೆಯ ಬಳಿಕ ನೂತನ ಪಲ್ಲಕ್ಕಿಯಲ್ಲಿ ಗುರು ಭಾವಚಿತ್ರ ಹಾಗೂ ಶ್ರೀ ಗುರು ಪಾದುಕೆಯ ಮೆರವಣಿಗೆ ಗುರು ಮಂದಿರ ತಲುಪಿ ಬಳಿಕ ಅಲಂಕಾರ ಪೂಜೆ, ಪಾದ ಪೂಜೆ, ಸಂಜೆ ಭಜನೆ ನಡೆಯಲಿದೆ.
ಸಸಿಹಿತ್ಲು
ಇಲ್ಲಿನ ಸಸಿಹಿತ್ಲುವಿನ ಅಗ್ಗಿದಕಳಿಯದ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದಲ್ಲಿ ನಾರಾಯಣ ಗುರು ಮಂದಿರದಲ್ಲಿ ಇಂದು ಗುರುಗಳ ಜನ್ಮದಿನಾಚರಣೆ ಅಂಗವಾಗಿ ಭಜನ ಸಂಕೀರ್ತನೆ ಹಾಗೂ ಗ್ರಾ.ಪಂ.ನ ಸ್ವಚ್ಛತಾ ಕಾರ್ಮಿಕರನ್ನು ವಿಶೇಷವಾಗಿ ಸಮ್ಮಾನಿಸಲಾಗುವುದು ಎಂದು ಸಂಘದ ಅಧ್ಯಕ್ಷ ಪ್ರಕಾಶ್‌ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮೂಲ್ಕಿ
ಕಾರ್ನಾಡು ಸದಾಶಿವ ರಾವ್ ನಗರದ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಆಶ್ರಯದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಗುರುಗಳ ಜನ್ಮದಿನಾ ಚ ರಣೆ ನಡೆಯಲಿದೆ. ಬೆಳಗ್ಗೆ 7 ಗಂಟೆಗೆ ಭಜನೆ, ಮಧ್ಯಾಹ್ನ ಮಹಾಪೂಜೆ ಮತ್ತು ಸಭಾ ಕಾರ್ಯಕ್ರಮ ನಡೆಯಲಿದೆ. ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಇಂದು ಮಹಾಪೂಜೆ, ಸಭಾ ಕಾರ್ಯಕ್ರಮ,ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.