ಡ್ರಗ್ಸ್‌ ದಂಧೆ ತಡೆಗೆ ಕೈ ಜೋಡಿಸಿ


Team Udayavani, Aug 28, 2018, 12:46 PM IST

drugs-dande.jpg

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಇಡೀ ರಾಜ್ಯದಲ್ಲಿ ಮಾದಕ ವಸ್ತು ಜಾಲ ಮಟ್ಟಹಾಕಿ, ವಿದ್ಯಾರ್ಥಿ-ಯುವಕರು ಮಾದಕ ವ್ಯಸನಕ್ಕೆ ಬಲಿಯಾಗದಂತೆ ತಡೆಯಲು ಸಾರ್ವಜನಿಕರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಪೋಷಕರು ಪೊಲೀಸ್‌ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಮನವಿ ಮಾಡಿದ್ದಾರೆ.

ಬೆಂಗಳೂರು ನಗರ ಪೊಲೀಸ್‌ ವತಿಯಿಂದ ಸೋಮವಾರ ನಿಮ್ಹಾನ್ಸ್‌ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ “ಮಾದಕ ವಸ್ತುಗಳ ಬಳಕೆ ತಡೆಗಟ್ಟುವ ಸಮಾವೇಶ’ ಹಾಗೂ ಬೆಂಗಳೂರು ನಗರದ ಶಿಕ್ಷಕರು, ಪ್ರಾಂಶುಪಾಲರು ಮತ್ತು ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಮುಖ್ಯಸ್ಥರ ಜಾಗೃತಿ ಸಭೆ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿ-ಯುವಕರು ಮಾದಕ ಪದಾರ್ಥಗಳ ಚಟಕ್ಕೆ ಬಲಿಯಾಗದಂತೆ ತಡೆಯಲು ಪೊಲೀಸರು ಶ್ರಮಿಸುತ್ತಿದ್ದಾರೆ. ಇದು ಪೊಲೀಸರಿಂದ ಮಾತ್ರ ಸಾಧ್ಯವಾಗುವ ಕಾರ್ಯವಲ್ಲ. ಪೊಲೀಸರೊಂದಿಗೆ ಸಾರ್ವಜನಿಕರು, ಶಿಕ್ಷಣ ಸಂಸ್ಥೆಗಳು, ಪೋಷಕರು ಕೈ ಜೋಡಿಸಿದರೆ ಖಂಡಿತವಾಗಿ ಈ ಪಿಡುಗಿನಿಂದ ಕರ್ನಾಟಕ ಮತ್ತು ಬೆಂಗಳೂರನ್ನು ಮುಕ್ತ ಮಾಡಬಹುದು ಎಂದು ತಿಳಿಸಿದರು.

ಕಿರುಚಿತ್ರ ಪ್ರದರ್ಶನ: ಡ್ರಗ್ಸ್‌ ಚಟಕ್ಕೆ ಬಲಿಯಾಗಿ ದುರಂತ ಅಂತ್ಯ ಕಂಡ ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕರ ದಾರುಣ ಕಥನ ಹೇಳುವ ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ನಿರ್ಮಿಸಿದ “ಪರವಶ’ ಹಾಗೂ ಬೆಂಗಳೂರು ನಗರ ಪೊಲೀಸರು ಸಾದರಪಡಿಸಿದ “ವಿದಾಯ’ ಕಿರುಚಿತ್ರಗಳನ್ನು ಈ ವೇಳೆ ಪ್ರದರ್ಶಿಸಲಾಯಿತು. ಡ್ರಗ್ಸ್‌ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು “ಹಾರ್ಲಿ ಡೆವಿಡ್‌ಸನ್‌’ ತಂಡದ ಬೈಕ್‌ ರ್ಯಾಲಿಗೆ ಗೃಹ ಸಚಿವರು ಚಾಲನೆ ನೀಡಿದರು.

ಡ್ರಗ್ಸ್‌ ಹಾವಳಿ ಬಗ್ಗೆ ಜಾಗೃತಿ ಮೂಡಿಸಲು ಬೆಂಗಳೂರು ನಗರ ಪೊಲೀಸರು ಸಿದ್ಧಪಡಿಸಿರುವ ಭಿತ್ತಿಪತ್ರ, ಸಿ.ಡಿ.ಗಳನ್ನು ಇದೇ ವೇಳೆ ಪರಮೇಶ್ವರ ಬಿಡುಗಡೆಗೊಳಿಸಿದರು. ಕರ್ನಾಟಕ ಚಿತ್ರಕಲಾ ಪರಿಷತ್‌ ವತಿಯಿಂದ ಚಿತ್ರಕಲಾ ಪ್ರದರ್ಶನ ಏರ್ಪಡಿಸಲಾಗಿತ್ತು. ವಿವಿಧ ಕಾಲ ತಂಡಗಳ ಕಲಾವಿದರು ನೃತ್ಯ, ಬೀದಿ ನಾಟಕ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ನಿಮ್ಹಾನ್ಸ್‌ ನಿರ್ದೇಶಕ ಡಾ.ಬಿ.ಎನ್‌.ಗಂಗಾಧರ, ನಗರ ಪೊಲೀಸ್‌ ಆಯುಕ್ತ ಟಿ. ಸುನೀಲ್‌ ಕುಮಾರ್‌, ಹಿರಿಯ ಪೊಲೀಸ್‌ ಅಧಿಕಾರಿಗಳು ಉಪಸ್ಥಿತರಿದ್ದರು. 

ಮಹಿಳೆಯರ “ಡಿ ಅಡಿಕ್ಷನ್‌’ ವಾರ್ಡ್‌: ಇತ್ತೀಚಿನ ವರ್ಷಗಳಲ್ಲಿ ಮಾದಕ ವ್ಯಸನಕ್ಕೆ ಬಲಿಯಾಗುವ ಹೆಣ್ಣು ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅವರಿಗಾಗಿ ಪ್ರತ್ಯೇಕ “ಡಿ-ಅಡಿಕ್ಷನ್‌’ ವಾರ್ಡ್‌ ಸ್ಥಾಪಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ನಿಮ್ಹಾನ್ಸ್‌ ನಿರ್ದೇಶಕ ಡಾ. ಬಿ.ಎನ್‌. ಗಂಗಾಧರ ಹೇಳಿದರು.

ನಾಲ್ಕು ವರ್ಷಗಳ ಹಿಂದೆ ನಿಮ್ಹಾನ್ಸ್‌ನಲ್ಲಿ ಪುರುಷರಿಗಾಗಿ 60 ಹಾಸಿಗೆಗಳ ಡಿ-ಅಡಿಕ್ಷನ್‌ ವಾರ್ಡ್‌ ಸ್ಥಾಪಿಸಲಾಗಿದೆ. ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಮಹಿಳೆಯರಿಗಾಗಿ ಕನಿಷ್ಟ 25 ಹಾಸಿಗೆಗಳ ಡಿ-ಅಡಿಕ್ಷನ್‌ ವಾರ್ಡ್‌ ಸ್ಥಾಪಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

10 ವರ್ಷಗಳ ಹಿಂದೆ ಕುಡಿತ ಅಥವಾ ಮಾದಕ ಪದಾರ್ಥಗಳ ವ್ಯಸನಕ್ಕೆ ಬಲಿಯಾಗುವವರ ಸರಾಸರಿ ವಯಸ್ಸು 35 ವರ್ಷ ಆಗಿತ್ತು. ಆದರೆ, ಅದು ಈಗ 25 ವರ್ಷಕ್ಕೆ ಇಳಿದಿದೆ. ಚಿಕ್ಕ ವಯಸ್ಸಿನವರೇ ಮಾದಕ ವ್ಯವನಿಗಳಾಗುತ್ತಿದ್ದು, ಮಾದಕ ಪದಾರ್ಥಗಳನ್ನು ಮೊದಲ ಬಾರಿ ಪ್ರಯೋಗ ಮಾಡುವವರಲ್ಲಿ ಹದಿಹರೆಯದವರ ಸಂಖ್ಯೆಯೇ ಹೆಚ್ಚು ಎಂದು ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.