ಜಮ್ಮು : ಇಬ್ಬರು ಉಗ್ರರ ಹತ್ಯೆ, ಭಾರೀ ಶಸ್ತ್ರಾಸ್ತ್ರ, ಮದ್ದುಗುಂಡು ವಶ
Team Udayavani, Aug 29, 2018, 12:03 PM IST
ಜಮ್ಮು : ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಇಂದು ಬುಧವಾರ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಇಬ್ಬರು ಹಿಜ್ಬುಲ್ ಮುಜಾಹಿದೀನ್ ಉಗ್ರರನ್ನು ಹೊಡೆದುರುಳಿಸಿದರು.
ಹತ ಉಗ್ರರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡವು.
ಅನಂತನಾಗ್ ನ ಮುನಿವರ್ದ ಗ್ರಾಮದಲ್ಲಿ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಖಚಿತ ಗುಪ್ತಚರ ಮಾಹಿತಿಯನ್ನು ಅನುಸರಿಸಿ ಜಮ್ಮು ಕಾಶ್ಮೀರ ಪೊಲೀಸರು, ಸೇನೆ ಮತ್ತು ಸಿಆರ್‌ಪಿಎಫ್ ದಳದವರು ಇಂದು ಮುಂಜಾನೆ ಈ ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಹಿಜ್ಬುಲ್ ಉಗ್ರರ ಹತ್ಯೆಗೈದರೆಂದು ಸೇನೆಯ ಅಧಿಕೃತ ಪ್ರಕಟನೆ ತಿಳಿಸಿದೆ.
ಈ ಪ್ರದೇಶದಲ್ಲಿ ಇನ್ನಷ್ಟು ಸಂಖ್ಯೆಯಲ್ಲಿ ಅಡಗಿಕೊಂಡಿರಬಹುದಾದ ಉಗ್ರರಿಗಾಗಿ ಇನ್ನಷ್ಟು ಶೋಧ ಕಾರ್ಯ ನಡೆಸಲು ಭದ್ರತಾ ಪಡೆಗಳು ಈ ಪ್ರದೇಶವನ್ನು ಎಲ್ಲ ಕಡೆಯಿಂದ ಸುತ್ತುವರಿದಿರುವುದಾಗಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.