ಅದೃಷ್ಟದ ಹಿಂದೆ ದಿಗಂತ್‌

Team Udayavani, Aug 30, 2018, 11:20 AM IST

fortuner.jpg

ದಿಗಂತ್‌ ನಾಯಕರಾಗಿ “ಫಾರ್ಚೂನರ್‌’ ಎಂಬ ಸಿನಿಮಾ ಸೆಟ್ಟೇರಿದ ವಿಚಾರವನ್ನು ನೀವು ಕೇಳಿರಬಹುದು. ನಂತರ ಆ ಚಿತ್ರ ಏನಾಯಿತೆಂಬ ಬಗ್ಗೆ ಮಾಹಿತಿಯೇ ಇರಲಿಲ್ಲ. ಈಗ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಅದರ ಮೊದಲ ಹಂತವಾಗಿ ಚಿತ್ರದ ಆಡಿಯೋ ಬಿಡುಗಡೆ ಇತ್ತೀಚೆಗೆ ನಡೆದಿದೆ. ಸಹಜವಾಗಿ ಸಿನಿಮಾದ ಟೈಟಲ್‌ ಕೇಳಿದಾಗ ಇದು ಫಾರ್ಚೂನರ್‌ ಕಾರಿನ ಸುತ್ತ ಸುತ್ತುವ ಕಥೆಯೇ ಎಂಬ ಭಾವನೆ ಬರದೇ ಇರದು.

ಆದರೆ, ಕಾರಿಗೂ ಈ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ. ಇಲ್ಲಿನ ಕಥೆ ನಾಯಕನ ಬದುಕಿನ ಅದೃಷ್ಟದ ಸುತ್ತ ಸುತ್ತುತ್ತದೆಯಂತೆ. ಮಂಜುನಾಥ್‌ ಈ ಚಿತ್ರದ ನಿರ್ದೇಶಕರು. ಚಿತ್ರಕ್ಕೆ ರಾಜೇಶ್‌ ಗೊಲೋಚ, ದಿಲೀಪ್‌ ಗೊಲೋಚ, ಭರತ್‌ ಗೊಲೋಚ ಬಂಡವಾಳ ಹೂಡುತ್ತಿದ್ದಾರೆ. ಚಿತ್ರದಲ್ಲಿ ಹಣ, ಅಂತಸ್ತು, ಅಹಂಕಾರದಿಂದ ಪ್ರೀತಿ ಪಡೆಯಲು ಸಾಧ್ಯವಿಲ್ಲ. ಗುಣ, ನಿಯತ್ತು ಹಾಗೂ ಶ್ರಮದಿಂದ ಮಾತ್ರ ಇದನ್ನು ಪಡೆಯಲು ಸಾಧ್ಯ ಎಂಬುದನ್ನು ಈ ಚಿತ್ರದಲ್ಲ ಹೇಳಲು ಹೊರಟಿದ್ದಾರಂತೆ.

ಇಲ್ಲಿ ಅದೃಷ್ಟ ನಾಯಕನ ಕೈ ಹಿಡಿಯುತ್ತಾ, ಕೈ ಕೊಡುತ್ತಾ ಎಂಬ ಅಂಶದೊಂದಿಗೆ ಕಥೆ ಸಾಗುತ್ತದೆಯಂತೆ. ಚಿತ್ರದಲ್ಲಿ ದಿಗಂತ್‌ ಶ್ರೀಮಂತ ಹುಡುಗನಾಗಿ ಕಾಣಿಸಿಕೊಂಡಿದ್ದಾರೆ. ಶಾಸಕನ ಮಗನಾಗಿ ಕಾಣಿಸಿಕೊಂಡಿರುವ ಅವರು, ಕಷ್ಟ, ಶ್ರಮದಿಂದ ಯಶಸ್ಸು ಸಿಕ್ಕಾಗ ಮಾತ್ರ ಬದುಕು ಹಸನಾಗಿರುತ್ತದೆ ಎಂದು ಸಂದೇಶ ಕೊಡುವ ಪಾತ್ರದಲ್ಲಿ ನಟಿಸಿದ್ದಾರಂತೆ. ಈ ಚಿತ್ರದಲ್ಲಿ ದಿಗಂತ್‌ ಬಿಂದಾಸ್‌ ಸ್ಟೆಪ್‌ ಕೂಡಾ ಹಾಕಿದ್ದಾರಂತೆ.

ನಾಯಕಿ ಸೋನುಗೌಡಗೆ ಇಲ್ಲಿ ಬೋಲ್ಡ್‌ ಪಾತ್ರ ಸಿಕ್ಕಿದೆಯಂತೆ. ನೆಗೆಟಿವ್‌ ಶೇಡ್‌ ಇರುವ ಪಾತ್ರವಾದರೂ ವಿಭಿನ್ನವಾಗಿದೆಯಂತೆ. ಸ್ವಾತಿ ಶರ್ಮಾ ಈ ಸಿನಿಮಾದಲ್ಲಿ ಮತ್ತೂಬ್ಬ ನಾಯಕಿ. ಇಲ್ಲಿ ಅವರು ಉತ್ತರ ಕರ್ನಾಟಕದ ಹುಡುಗಿಯಾಗಿ ನಟಿಸಿದ್ದಾರೆ. ಉಳಿದಂತೆ ನವೀನ್‌ ಕೃಷ್ಣ, ರಾಜೇಶ್‌ ನಟರಂಗ, ಕಲ್ಯಾಣಿ ನಟಿಸಿದ್ದಾರೆ. ಚಿತ್ರಕ್ಕೆ ಎಂ.ಎಸ್‌.ನರಸಿಂಹಮೂರ್ತಿ ಸಂಭಾಷಣೆ, ಪೂರ್ಣಚಂದ್ರ ತೇಜಸ್ವಿ ಸಂಗೀತ, ಮಧುಸೂದನ್‌ ಛಾಯಾಗ್ರಹಣ, ಗುರುಸ್ವಾಮಿ ಸಂಕಲನವಿದೆ. 

ಟಾಪ್ ನ್ಯೂಸ್

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

1-shami

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಆಕಾಶ್‌ ಬದಲು ಶಮಿಗೆ ಸ್ಥಾನ?

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆMangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

15

Sathish Ninasam: ಅಶೋಕನಿಗೆ ನೀನಾಸಂ ಸತೀಶ್‌ ಸಾಥ್‌

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Padubidri ಪಾದೆಬೆಟ್ಟು: ನೇಣು ಬಿಗಿದು ಯುವಕ ಆತ್ಮಹತ್ಯೆ

Padubidri ಪಾದೆಬೆಟ್ಟು: ನೇಣು ಬಿಗಿದು ಯುವಕ ಆತ್ಮಹತ್ಯೆ

1-hak

ಕೊಡವ ಕೌಟುಂಬಿಕ ಹಾಕಿಗೆ ಸರಕಾರದಿಂದ 1 ಕೋ. ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.