ತರಬೇತುದಾರರಿಗೂ ನಗದು ಪುರಸ್ಕಾರ
Team Udayavani, Aug 30, 2018, 12:35 PM IST
ಬೆಂಗಳೂರು: ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ರಾಜ್ಯದ ಕ್ರೀಡಾಪಟುಗಳು ಪದಕ ಗೆಲ್ಲುವ ನಿಟ್ಟಿನಲ್ಲಿ ತರಬೇತಿ ನೀಡುವ ತರಬೇತಿದಾರರಿಗೂ ನಗದು ಪುರಸ್ಕಾರ ನೀಡುವ ನಿಟ್ಟಿನಲ್ಲಿ ನಿಯಮಗಳಲ್ಲಿ ಬದಲಾವಣೆ ಮಾಡುವಂತೆ ಉಪ ಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವ ಡಾ.ಜಿ.ಪರಮೇಶ್ವರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕರ್ನಾಟಕ ಕ್ರೀಡಾ ಪ್ರಾಧಿಕಾರದ 34ನೇ ಆಡಳಿತ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಕ್ರಿಯಾ ಯೋಜನೆಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಒಲಿಂಪಿಕ್ಸ್, ಏಷ್ಯನ್ ಗೇಮ್ಸ್ ರೀತಿಯ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುವಿನ ಗೆಲುವಿನ ಹಿಂದೆ ತರಬೇತುದಾರರ ಶ್ರಮ ಇರುತ್ತದೆ. ಹೀಗಾಗಿ ಕ್ರೀಡಾ ಇಲಾಖೆಯಿಂದ ನೇಮಕಗೊಳ್ಳುವ ತರಬೇತುದಾರರಿಗೂ ನಗದು ಬಹುಮಾನ ನೀಡುವುದು ಸೂಕ್ತ. ಚಿನ್ನ ಗೆದ್ದರೆ ತರಬೇತುದಾರರಿಗೆ 10 ಲಕ್ಷ ಬಹುಮಾನ ನೀಡಲು ನಿಯಮದಲ್ಲಿ ಬದಲಾವಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕಂಠೀರವ ಕ್ರೀಡಾಂಗಣದಲ್ಲಿರುವ ಫುಟ್ಬಾಲ್ ಅಂಕಣವನ್ನು ಅಭಿವೃದ್ಧಿ ಪಡಿಸಿರುವ ಜಿಂದಾಲ್ ಸಂಸ್ಥೆಗೆ ನೀಡಿರುವ ಗುತ್ತಿಗೆಯನ್ನು ಕೇವಲ ಒಂದು ವರ್ಷ ಮುಂದುವರಿಸುವಂತೆ ಸೂಚಿಸಿದ್ದು, ವರ್ಷದ ನಂತರ ಸರ್ಕಾರದ ವಶಕ್ಕೆ ಪಡೆದು, ಮೈದಾನವನ್ನು ರಿಯಾಯ್ತಿ ದರದಲ್ಲಿ ನೀಡಬಹುದು ಎಂದು ಪರಮೇಶ್ವರ್ ಅಭಿಪ್ರಾಯ ಪಟ್ಟಿದ್ದಾರೆ. ಇದಲ್ಲದೆ ಕ್ರೀಡಾ ಇಲಾಖೆಗೆ 16 ಕೋಟಿ ರೂ. ನೀಡುವಂತೆ ಹಣಕಾಸು ಇಲಾಖೆಗೆ ಸೂಚಿಸಿದರು. ಸಭೆಯಲ್ಲಿ ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.