ವೈಯಕ್ತಿಕ ಸಿಟ್ಟಿಗೆ ಬೆದರಿಕೆ ಕರೆ!


Team Udayavani, Aug 30, 2018, 12:35 PM IST

viyaktika.jpg

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಹುಸಿ ಬಾಂಬ್‌ ಬೆದರಿಕೆ ಕರೆ ಮಾಡಿದ ಉಡುಪಿ ಮೂಲದ ಆರೋಪಿಯನ್ನು ಕೊನೆಗೂ ಏರ್‌ಪೋರ್ಟ್‌ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಉಡುಪಿ ಜಿಲ್ಲೆಯ ಮಣಿಪಾಲ ನಿವಾಸಿ ಆದಿತ್ಯ ರಾವ್‌ (34) ಬಂಧಿತ ಆರೋಪಿ. ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸಕ್ಕೆ ಅರ್ಜಿ ಹಾಕಿದ್ದು, ಕೆಲಸ ಸಿಗದಿರುವ ಹಿನ್ನೆಲೆಯಲ್ಲಿ ನೊಂದುಕೊಂಡಿದ್ದ. ಬಳಿಕ ಟಾಯ್ಲೆಟ್‌ಗೆ ಹೋಗುವ ವೇಳೆ ಲಗೇಜ್‌ ಇಡುವ ಸ್ಥಳದಲ್ಲಿ ಶುಲ್ಕ ಕೇಳಲಾಗಿತ್ತು.

ಅದು ಆತನಿಗೆ ಇನ್ನಷ್ಟು ಸಿಟ್ಟು ಹೆಚ್ಚಿಸಿ, ಬೆದರಿಕೆ ಕರೆ ಮಾಡಿದ್ದಾಗಿ ಆದಿತ್ಯ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ 15 ದಿನಗಳಲ್ಲಿ ನಾಲ್ಕು ಬಾರಿ ವಿಮಾನ ನಿಲ್ದಾಣಕ್ಕೆ ಕರೆ ಮಾಡಿದ್ದ ಆರೋಪಿ, ಒಮ್ಮೆ ರೈಲ್ವೆ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದಾನೆ ಎಂದು ಏರ್‌ಪೋರ್ಟ್‌ ಠಾಣೆ ಪೊಲೀಸರು ತಿಳಿಸಿದ್ದಾರೆ. 

ಮಣಿಪಾಲ ಮೂಲದ ಆರೋಪಿ ಆದಿತ್ಯನ ತಂದೆ ನಿವೃತ್ತ ಬ್ಯಾಂಕ್‌ ಉದ್ಯೋಗಿಯಾಗಿದ್ದು, ಸಹೋದರ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಮೈಸೂರಿನಲ್ಲಿ ಬಿಇ ಮೆಕಾನಿಕಲ್‌ ಎಂಜಿನಿಯರ್‌ ಹಾಗೂ ಎಂಬಿಎ ಪದವಿ ಪಡೆದಿರುವ ಆರೋಪಿ ಅವಿವಾಹಿತ. 7-8 ತಿಂಗಳ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದ ಈತ ಪಿಜಿಯಲ್ಲಿ ವಾಸವಾಗಿದ್ದ.

ಒಂದೂವರೆ ತಿಂಗಳ ಹಿಂದೆ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ದ. ಅರ್ಜಿ ಪರಿಶೀಲಿಸಿದ ಅಧಿಕಾರಿಗಳು ಅಫಿಡವಿಟ್‌ ತರಲು ಸೂಚಿಸಿದ್ದರು. ಅದರಂತೆ ಅಫಿಡವಿಟ್‌ ಸಲ್ಲಿಸಿದ್ದ. ಆದರೆ, ಕೆಲಸ ಕೊಟ್ಟಿರಲಿಲ್ಲ. ಇದರಿಂದ ಬೇಸತ್ತ ಆರೋಪಿ, ತನಗೆ ಅನಗತ್ಯ ತೊಂದರೆ ಕೊಟ್ಟ ಅಧಿಕಾರಿಗಳಿಗೆ ಬುದ್ದಿ ಕಲಿಸಬೇಕೆಂದು ಬೆದರಿಕೆ ಕರೆ ಮಾಡಿದ್ದಾನೆ ಎನ್ನಲಾಗಿದೆ.

ಆ.20ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಕರೆ ಮಾಡಿ ವಿಮಾನ ನಿಲ್ದಾಣದ ಪಾರ್ಕಿಂಗ್‌ ಸ್ಥಳದಲ್ಲಿ ಬಾಂಬ್‌ ಇಟ್ಟಿದ್ದೇನೆ ಎಂದಿದ್ದ. ಕೆಲ ಹೊತ್ತಿನ ಬಳಿಕ ಪಾರ್ಕಿಂಗ್‌ಗೆ ಹೋಗುವ ಸ್ಥಳದಲ್ಲಿ ಬಾಂಬ್‌ ಇಟ್ಟಿದ್ದು, 11 ಗಂಟೆಗೆ ಸ್ಫೋಟಗೊಳ್ಳಲಿದೆ ಎಂದು ಬೆದರಿಕೆ ಹಾಕಿದ್ದ.

ಆ.27ರಂದು ತನ್ನ ಮೊಬೈಲ್‌ ನಂಬರ್‌ನಿಂದಲೇ ಏರ್‌ಏಷ್ಯಾ ಕೌಂಟರ್‌ ನಂಬರ್‌ಗೆ ಫೋನ್‌ ಮಾಡಿ ಕೊಚ್ಚಿ ಹಾಗೂ ಹೈದರಾಬಾದ್‌ ವಿಮಾನದಲ್ಲಿ ಬಾಂಬ್‌ ಇಟ್ಟಿದ್ದೇನೆ ಎಂದಿದ್ದ. ಕೆಲ ಹೊತ್ತಿನ ಬಳಿಕ ಮತ್ತೂಮ್ಮೆ ಕರೆ ಮಾಡಿ ಸ್ಫೋಟಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದ ಎಂದು ಪೊಲೀಸರು ತಿಳಿಸಿದರು.

ಲಗೇಜ್‌ ಇಡೋಕೆ ದುಡ್ಡು!: ಕೆಲ ದಿನಗಳ ಹಿಂದೆ ರೈಲು ನಿಲ್ದಾಣಕ್ಕೆ ಬಂದಿದ್ದ ಆರೋಪಿ ಶೌಚಾಲಯಕ್ಕೆ ಹೋಗಲು ತನ್ನ ಬ್ಯಾಗ್‌ನ್ನು ಲಗೇಜ್‌ ರೂಮ್‌ನಲ್ಲಿ ಇಡಲು ಹೋಗಿದ್ದ. ಈ ವೇಳೆ ಕೊಠಡಿ ಸಿಬ್ಬಂದಿ ಹಣ ಪಾವತಿಸಬೇಕೆಂದು ಹೇಳಿದ್ದರು. ಇದಕ್ಕೆ ಆಕ್ಷೇಪಿಸಿದ ಆದಿತ್ಯ ಕೇವಲ 10 ನಿಮಿಷಕ್ಕೆ ಹತ್ತಾರು ರೂ. ಪಾವತಿಸಬೇಕಾ ಎಂದು ಪ್ರಶ್ನಿಸಿದಲ್ಲದೆ ಗಲಾಟೆ ಮಾಡಿಕೊಂಡಿದ್ದ.

ಇದರಿಂದ ಅಸಮಾಧಾನಗೊಂಡಿದ್ದ ಆರೋಪಿ ಆ.27ರಂದು ರೈಲ್ವೆ ನಿಲ್ದಾಣದ ನಿಯಂತ್ರಣ ಕೊಠಡಿಗೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಕರೆ ಮಾಡಿ ನಿಲ್ದಾಣದ ಪಾರ್ಸ್‌ಲ್‌ ಕೊಠಡಿಗೆ ಬಾಂಬ್‌ ಇಟ್ಟಿದ್ದೇನೆ. ಇನ್ನು ಕೆಲವೇ ಕ್ಷಣಗಳಲ್ಲಿ ಸ್ಫೋಟಗೊಳ್ಳಲಿದೆ ಎಂದು ಕರೆ ಸ್ಥಗಿತಗೊಳಿಸಿದ್ದ ಎಂದು ಪೊಲೀಸರು ತಿಳಿಸಿದರು.

ಕಳ್ಳತನ ಆರೋಪ: ಇದಕ್ಕೂ ಮೊದಲು ಆರೋಪಿ ಆದಿತ್ಯ ಜಯನಗರದ ಖಾಸಗಿ ಇನ್‌ಶ್ಯೂರೆನ್ಸ್‌ ಕಂಪನಿಯಲ್ಲಿ ಸೆಲ್ಸ್‌ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಮಾಡುತ್ತಿದ್ದ. ಈ ವೇಳೆ ಸಹೋದ್ಯೋಗಿಯ ಲ್ಯಾಟ್‌ಟಾಪ್‌ ಕಳವು ಮಾಡಿ ಸಿಕ್ಕಿ ಬಿದ್ದಿದ್ದು, ಕೆಲಸದಿಂದ ವಜಾ ಮಾಡಿದ್ದರು. ಈ ಸಂಬಂಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮತ್ತೂಂದೆಡೆ ತಾನೂ ವಾಸವಾಗಿದ್ದ ಪಿಜಿಯೊಂದರಲ್ಲಿ ಲ್ಯಾಪ್‌ಟಾಪ್‌ಗ್ಳನ್ನು ಕಳವು ಮಾಡಿದ್ದ. ಈ ಸಂಬಂಧ ಸುದ್ದಗುಂಟೆ ಪಾಳ್ಯ ಪೊಲೀಸರು ಕಳವು ಪ್ರಕರಣ ದಾಖಲಿಸಿ ಬಂಧಿಸಿದ್ದರು.

ನನಗೆ ಬೇಕಿತ್ತು ಮಾಡಿದ್ದೇನೆ ಅಷ್ಟೇ!: ಆರೋಪಿ ಆದಿತ್ಯ ವಿಚಾರಣೆಗೆ ಸಹಕಾರ ನೀಡುತ್ತಿಲ್ಲ. ಎರಡೆರಡು ಪದವಿ ಪಡೆದಿರುವ ಈತ ಸುಲಲಿತವಾಗಿ ಇಂಗ್ಲಿಷ್‌ ಮಾತನಾಡುತ್ತಾನೆ. ಕಳವು, ಹುಸಿ ಬಾಂಬ್‌ ಕರೆ ಕುರಿತು ಪ್ರಶ್ನಿಸಿದರೆ, ನನ್ನ ಜೀವನಕ್ಕೆ ಬೇಕಿತ್ತು ಅದಕ್ಕೆ ಲ್ಯಾಪ್‌ಟಾಪ್‌ ಕಳವು ಮಾಡಿ ಮಾರಾಟ ಮಾಡಿದ್ದೆ. ಕೆಲಸ ಕೊಡದಕ್ಕೆ, ಅವಮಾನ ಮಾಡಿದಕ್ಕೆ ವಿಮಾನ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದೇನೆ ಎಂದಷ್ಟೇ ಹೇಳುತ್ತಾನೆ. ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಾನೆ ಎಂದು ಪೊಲೀಸರು ತಿಳಿಸಿದರು.

ಟಾಪ್ ನ್ಯೂಸ್

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.