ಕೊಡಗು ನೆರೆಸಂತ್ರಸ್ತರಿಗೆ ಶುದ್ಧ ಕುಡಿಯುವ ನೀರು ಸಂಗ್ರಹ
Team Udayavani, Aug 30, 2018, 2:12 PM IST
ಕೈರಂಗಳ: ನೆರೆಸಂತ್ರಸ್ತರಿಗೆ ಕುಡಿಯುವ ನೀರಿನ ಆವಶ್ಯಕತೆ ಇದ್ದುದರ ಬಗ್ಗೆ ಅರಿತುಕೊಂಡು ಸ್ಥಳೀಯ ಅನೇಕ ಸಂಘಟನೆಗಳು ಒಟ್ಟು ಸೇರಿ ಶುದ್ಧ ಕುಡಿಯುವ ನೀರನ್ನು ಸಂಗ್ರಹಿಸಿದ್ದು, ಶಾಲಾ ವಿದ್ಯಾರ್ಥಿಗಳ ಪರಿಶ್ರಮದಿಂದ ಕೊಡಗಿನ ಕಲ್ಲಗುಂಡಿ, ಸಂಪಾಜೆ, ಅರಂತೋಡು ಸಂತ್ರಸ್ತರ ಪರಿಹಾರ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ ಎಂದು ಶಾರದಾಗಣಪತಿ ವಿದ್ಯಾಕೇಂದ್ರದ ಸಂಚಾಲಕ ಟಿ.ಜಿ. ರಾಜಾರಾಮ ಭಟ್ ತಿಳಿಸಿದರು.
ಕೈರಂಗಳ ಪುಣ್ಯಕೋಟಿ ನಗರದ ಶಾರದಾಗಣಪತಿ ವಿದ್ಯಾಕೇಂದ್ರ ಮತ್ತು ಸ್ಥಳೀಯ ಸಂಘಟನೆಗಳ ಸಹಕಾರದಿಂದ ಕೊಡಗು ನೆರೆಸಂತ್ರಸ್ತರಿಗೆ ಶುದ್ಧ ಕುಡಿಯುವ ನೀರು ಕಳುಹಿಸಿಕೊಡಲಾಯಿತು. ಪ್ರಾಕೃತಿಕ ವಿಕೋಪಗಳು ನಡೆದಾಗ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳು ಹೆಚ್ಚಿದ್ದು, ಆ ನಿಟ್ಟಿನಲ್ಲಿ ಸಂತ್ರಸ್ತರಿಗೆ ಶುದ್ಧ ಕುಡಿಯುವ ನೀರು ಸಂಜೀವಿನಿಯಾಗಲಿದೆ. ಸಮಾಜದ ಕಷ್ಟಗಳಿಗೆ ಎಂದಿಗೂ ಸ್ಪಂದಿಸಲು ನಾವುಗಳು ಸಿದ್ಧ ಎಂದರು.
ಸಂಸ್ಥೆಯ ಪ್ರಾಂಶುಪಾಲೆ ದಿವ್ಯದೀಪಾ, ಉಪನ್ಯಾಸಕರಾದ ಶ್ರೀಹರಿ, ಸೋಮಶೇಖರ್, ಯೋಗಿತಾ, ಸ್ಥಳೀಯ ಮುಖಂಡರಾದ ವಿಜೇಶ್ ನಾಯ್ಕ, ಜಯಂತ್ ಪಾದಲ್ಪಾಡಿ, ಉದಯ ಪಾದಲ್ಪಾಡಿ, ಸಂತೋಷ್, ಸುಖೇಶ್, ಹರೀಶ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.