ಬಿಹಾರ ಎನ್‌ಡಿಎ ಸೀಟು ಹಂಚಿಕೆ ಫೈನಲ್‌:40 ರಲ್ಲಿ ಬಿಜೆಪಿಗೆ 20 ಮಾತ್ರ


Team Udayavani, Aug 30, 2018, 3:25 PM IST

33.jpg

ಪಾಟ್ನಾ: ಲೋಕಸಭಾ ಚುನಾವಣೆಗಾಗಿ ಬಿಹಾರ ಎನ್‌ಡಿಎ ಮೈತ್ರಿ ಕೂಟದ ನಾಲ್ಕು ಪಕ್ಷಗಳ ನಡುವೆ ಸೀಟು ಹಂಚಿಕೆ ಅಂತ್ಯವಾಗಿದ್ದು ,40 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ  ಸ್ಪರ್ಧೆ ಮಾಡಲಿದೆ. 

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಮತ್ತು ಜೆಡಿಯು ನಾಯಕ,ಬಿಹಾರ ಸಿಎಂ ನಿತಿಶ್‌ ಕುಮಾರ್‌ ಅವರ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸೀಟು ಹಂಚಿಕೆ ಅಂತ್ಯಗೊಳಿಸಲಾಗಿದ್ದು, ಅಭ್ಯರ್ಥಿಗಳ ಆಯ್ಕೆ ಇನ್ನಷ್ಟೇ ನಡೆಯಬೇಕಾಗಿದೆ ಎಂದು ತಿಳಿದು ಬಂದಿದೆ. 

ಸಂಘಟಿತ ಶಕ್ತಿಯಿಂದ ಎಲ್ಲಾ 40 ಸ್ಥಾನಗಳನ್ನೂ ಗೆಲ್ಲಲು ರಣತಂತ್ರ ಹೂಡಿರುವ ಅಮಿತ್‌ ಶಾ ಅವರು ಜೆಡಿಯುಗೆ 12 ಸ್ಥಾನಗಳು ,ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ಅವರ ಎಲ್‌ಜೆಪಿಗೆ 6 ಸ್ಥಾನಗಳು ಮತ್ತು ಕೇಂದ್ರ ಸಚಿವ ಉಪೇಂದ್ರ ಕುಶ್ವಾಹ ಅವರ ಆರ್‌ಎಲ್‌ಎಸ್‌ಪಿಗೆ 2 ಸ್ಥಾನಗಳನ್ನು ಹಂಚಿಕೆ ಮಾಡಲು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. 

2014 ರಲ್ಲಿ 22 ಸ್ಥಾನ ಗೆದ್ದಿದ್ದ ಬಿಜೆಪಿ ಈ ಬಾರಿ 2 ಸ್ಥಾನಗಳನ್ನು ಮೈತ್ರಿ ಧರ್ಮಕ್ಕೆ ಸರಿಯಾಗಿ ಕಳೆದುಕೊಳ್ಳಬೇಕಾಗಿದೆ.  ಕೆಲ ಹಾಲಿ ಸಂಸದರಿಗೆ ಈ ಬಾರಿ ಬಿಜೆಪಿ ಟಿಕೆಟ್‌ ಸಿಗುವ ಅನುಮಾನಗಳಿವೆ ಎಂದು ವರದಿಯಾಗಿದೆ. 

ಇನ್ನೊಂದೆಡೆ ಆರ್‌ಜೆಡಿ -ಕಾಂಗ್ರೆಸ್‌ ಮೈತ್ರಿಕೂಟ ಎನ್‌ಡಿಎ ಮೈತ್ರಿಕೂಟಕ್ಕೆ ಸೆಡ್ಡು ಹೊಡೆಯಲು ರಣತಂತ್ರ ಹೂಡಿದೆ. 

ಬಿಜೆಪಿ 2014 ರಲ್ಲಿ 22 ಸ್ಥಾನಗಳು,ಮೈತ್ರಿ ಪಕ್ಷಗಳಾದ ಎಲ್‌ಜೆಪಿ 6 , ಆರ್‌ಎಲ್‌ಎಸ್‌ಪಿ 3 ಸೇರಿ 31 ಸ್ಥಾನಗಳನ್ನು ಗೆದ್ದುಕೊಂಡಿತ್ತು. 

ಬಿಜೆಪಿಯಿಂದ ದೂರ ಉಳಿದು ಭಾರೀ ಹೊಡೆತಕ್ಕೆ ಗುರಿಯಾಗಿದ್ದ  ಜೆಡಿಯು ಕೇವಲ 2 ಸ್ಥಾನಗಳನ್ನು  ಮಾತ್ರ ಗೆದ್ದಿತ್ತು. ಆರ್‌ಜೆಡಿ 4, ಎನ್‌ಸಿಪಿ 1, ಕಾಂಗ್ರೆಸ್‌ 2 ಸ್ಥಾನಗಳನ್ನು ಗೆದ್ದಿತ್ತು. 

 ಮೈತ್ರಿ ಉತ್ತರ ಪ್ರದೇಶ ಮತ್ತು ಜಾರ್ಖಂಡ್‌ನ‌ಲ್ಲೂ ಮುಂದುವರಿಯಲಿದ್ದು, ಬಿಜೆಪಿ ತಲಾ 1 ಲೋಕಸಭಾ ಸ್ಥಾನವನ್ನು ಜೆಡಿಯುಗೆ ಬಿಟ್ಟು ಕೊಡುವ ಬಗ್ಗೆ ಮಾತುಕತೆಗಳು ನಡೆದಿವೆ. 

ಟಾಪ್ ನ್ಯೂಸ್

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Aaram Aravinda Swamy Movie Review

Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫ‌ನ್‌ರೈಡ್‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

5-bng

Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ

4-bng

Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.