ಉಡುಪಿ: ಇಂದು 91 ಅಭ್ಯರ್ಥಿಗಳ “ಭವಿಷ್ಯ’ನಿರ್ಧಾರ​​​​​​​


Team Udayavani, Aug 31, 2018, 6:00 AM IST

3008udsb3.jpg

ಉಡುಪಿ: ಈ ಬಾರಿ ತೀವ್ರ ಕುತೂಹಲ ಮೂಡಿಸಿರುವ ಉಡುಪಿ ನಗರ ಸಭೆಯ ಚುನಾವಣೆ ಶುಕ್ರವಾರ ನಡೆಯಲಿದ್ದು 91 ಮಂದಿ ಅಭ್ಯರ್ಥಿಗಳ “ಸ್ಥಳೀಯ ರಾಜಕೀಯ ಭವಿಷ್ಯ’ ನಿರ್ಧಾರವಾಗಲಿದೆ. 

ಒಟ್ಟು ಎಲ್ಲಾ 35 ಸ್ಥಾನ (ವಾರ್ಡ್‌)ಗಳಿಗೆ ಚುನಾವಣೆ ನಡೆಯುತ್ತಿದ್ದು ಕಾಂಗ್ರೆಸ್‌ ಮತ್ತು ಬಿಜೆಪಿ ಎಲ್ಲಾ ಸ್ಥಾನ
ಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 10  ವಾರ್ಡ್‌ಗಳಲ್ಲಿ  ಜೆಡಿಎಸ್‌ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. 

9 ಮಂದಿ ಪಕ್ಷೇತರರು, ಓರ್ವ ಶಿವಸೇನೆ ಮತ್ತು ಓರ್ವ ಬಿಎಸ್‌ಪಿ ಅಭ್ಯರ್ಥಿ ಕಣದಲ್ಲಿದ್ದಾರೆ. ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌, ಶಿವಸೇನೆ ಮತ್ತು ಬಿಎಸ್‌ಪಿ ಅಭ್ಯರ್ಥಿಗಳು ಆಯಾ ಪಕ್ಷಗಳ ಚಿಹ್ನೆ ಯಡಿ ಸ್ಪರ್ಧಿಸುತ್ತಿದ್ದಾರೆ. ಪಕ್ಷೇತರರು ತಮಗೆ ಚುನಾವಣಾ ಆಯೋಗ ನೀಡಿದ ಚಿಹ್ನೆಯಡಿ ಸ್ಪರ್ಧೆ ಎದುರಿಸುತ್ತಿದ್ದಾರೆ. 

ಕಾಂಗ್ರೆಸ್‌ ಕೈಯಲ್ಲಿರುವ ಆಡಳಿತ ವನ್ನು ಮತ್ತೆ ತನ್ನ ತೆಕ್ಕೆಗೆ ಪಡೆಯುವ ಹುಮ್ಮಸ್ಸಿನಲ್ಲಿ ಬಿಜೆಪಿ ಇದ್ದರೆ ಅಧಿಕಾರ ಉಳಿಸಿಕೊಳ್ಳುವ ಯತ್ನ ಕಾಂಗ್ರೆಸ್‌ನದ್ದು. ಹಾಗಾಗಿ ನಗರದಲ್ಲಿ ಈ ಬಾರಿಯ ಚುನಾವಣೆ ಹಿಂದಿಗಿಂತ  ಹೆಚ್ಚು ಕುತೂಹಲಕಾರಿಯಾಗಿದೆ. ಮನೆ ಮನೆ ಪ್ರಚಾರ ಕೂಡ ಜೋರಾಗಿಯೇ ನಡೆದಿತ್ತು. 

ಬಿಗಿ ಬಂದೋಬಸ್ತ್ 
ಮೂವರು ಡಿವೈಎಸ್‌ಪಿ ಹಾಗೂ 6 ಮಂದಿ ಇನ್‌ಸ್ಪೆಕ್ಟರ್‌ಗಳ ನೇತೃತ್ವದಲ್ಲಿ ಪೊಲೀಸ್‌ಪಡೆ ಸಿದ್ಧವಾಗಿದೆ. 4 ಕೆಎಸ್‌ಆರ್‌ಪಿ, 6 ಡಿಆರ್‌ ತುಕಡಿಗಳನ್ನು ಬಳಸಿಕೊಳ್ಳಲಾಗುತ್ತಿದೆ. 36 ಮಂದಿ ಪಿಎಸ್‌ಐ/ಎಎಸ್‌ಐಗಳು, 350 ಮಂದಿ ಕಾನ್‌ಸ್ಟೆàಬಲ್‌ಗ‌ಳು, 106 ಮಂದಿ ಗೃಹರಕ್ಷಕ ದಳ ಸಿಬಂದಿ ಭದ್ರತಾ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ. 

ಮೊದಲ ಬಾರಿಗೆ ವೋಟರ್‌ 
ಸ್ಲಿಪ್‌ ವಿತರಣೆ 

ಕಳೆದ ವಿಧಾನಸಭಾ ಚುನಾವಣೆಯಂತೆ ನಗರಸಭಾ ಚುನಾವಣೆ ಯಲ್ಲಿಯೂ ಅಧಿಕಾರಿಗಳು ಮನೆ ಮನೆಗಳಿಗೆ ಭಾವಚಿತ್ರ ಸಹಿತವಾದ ವೋಟರ್‌ ಸ್ಲಿಪ್‌ನ್ನು ವಿತರಿಸಿದ್ದಾರೆ. ರಾಜಕೀಯ ಪಕ್ಷಗಳು ಕೂಡ ವೋಟರ್‌ ಸ್ಲಿಪ್‌ ನೀಡಿವೆ. ಅಧಿಕಾರಿಗಳು ನೀಡಿರುವ ವೋಟರ್‌ ಸ್ಲಿಪ್‌ನ್ನು ತೆಗೆದುಕೊಂಡು ಹೋದರೆ ಮತದಾನ ಮಾಡಲು ಬೇರೆ ದಾಖಲೆಗಳ ಆವಶ್ಯಕತೆ ಇಲ್ಲ. ರಾಜಕೀಯ ಪಕ್ಷಗಳು ನೀಡಿರುವ ವೋಟರ್‌ ಸ್ಲಿಪ್‌ ತೆಗೆದುಕೊಂಡು ಹೋದರೆ ಮತದಾನ ಮಾಡಲು ಬೇರೆ ದಾಖಲೆ ಕೂಡ ಬೇಕಾಗುತ್ತದೆ. ಮತದಾರರ ಗುರುತಿನ ಚೀಟಿ ಇಲ್ಲದಿದ್ದಲ್ಲಿ ಇತರ 21 ದಾಖಲೆಗಳ ಪೈಕಿ ಯಾವುದನ್ನಾದರೂ ತೋರಿಸಿ ಮತ  ಚಲಾಯಿಸಬಹುದು. ಈ ಚುನಾವಣೆ ಯಲ್ಲಿ ಎಡಗೈಯ ಉಂಗುರ ಬೆರಳಿಗೆ ಶಾಯಿ ಹಾಕಲಾಗುತ್ತದೆ. ಏರಿದೆ ಕಾವು ನಗರಸಭೆಯ ಗದ್ದುಗೆ ಹಿಡಿಯಲು ಕಾಂಗ್ರೆಸ್‌, ಬಿಜೆಪಿ ಪಕ್ಷಗಳು ಇನ್ನಿಲ್ಲದ ರೀತಿಯಲ್ಲಿ ಪ್ರಯತ್ನ ಮುಂದುವರಿಸಿದ್ದು ಗುರುವಾರ ಕೂಡ ನಾನಾ ರೀತಿಯ ಕಸರತ್ತುಗಳು ನಡೆದವು. ವೈಯಕ್ತಿಕ ಕರೆಗಳು, ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮೊದಲಾದವುಗಳ ಮೂಲಕ ಮತ ಸೆಳೆಯುವ ಪ್ರಯತ್ನ ಮುಂದುವರಿದವು. ಪಕ್ಷೇತರ ಅಭ್ಯರ್ಥಿಗಳನ್ನು ಹೊರತು ಪಡಿಸಿದರೆ ಇತರ ಎಲ್ಲಾ ಅಭ್ಯರ್ಥಿಗಳ ಪರವಾಗಿಯೂ ಪಕ್ಷದ ಮುಖಂಡರು ಪ್ರಚಾರ ನಡೆಸಿದ್ದಾರೆ.

ಉಡುಪಿ ಬೋರ್ಡ್‌ ಹೈಸ್ಕೂಲ್‌ನಲ್ಲಿ ಮತದಾನಕ್ಕೆ  ತಯಾರಿ ನಡೆಸುತ್ತಿರುವುದು. 

ಟಾಪ್ ನ್ಯೂಸ್

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !

ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

fraud-2

ಆನ್‌ಲೈನ್‌ನಲ್ಲಿ ಅಧಿಕ ಲಾಭಾಂಶದ ಆಮಿಷ: ಬ್ಯಾಂಕ್‌ ಮ್ಯಾನೇಜರ್‌ಗೆ ಲಕ್ಷಾಂತರ ರೂ. ವಂಚನೆ

Udupi: ಹೂಡೆ ಬೀಚ್‌ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ

Udupi: ಹೂಡೆ ಬೀಚ್‌ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ

2

Hiriydaka: ಒಟಿಪಿ ನೀಡಿ 5 ಲಕ್ಷ ರೂ. ಕಳೆದುಕೊಂಡ ಯುವತಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.