ವಿಐಪಿಗಳಿಗೆ ವಿಶೇಷ ಲೇನ್
Team Udayavani, Aug 31, 2018, 6:00 AM IST
ಚೆನ್ನೈ: “ವಿಐಪಿಗಳಿಗೆ, ಹಾಲಿ ಜಡ್ಜ್ಗಳಿಗೆ ಟೋಲ್ ಪ್ಲಾಜಾಗಳಲ್ಲಿ ವಿಶೇಷ ಲೇನ್ಗಳನ್ನು ಮಾಡಿ. ಇಲ್ಲದಿದ್ದಲ್ಲಿ ನ್ಯಾಯಾಂಗ ನಿಂದನೆ ಮೊಕದ್ದಮೆ ಎದುರಿಸಿ’ ಹೀಗೆಂದು ಮದ್ರಾಸ್ ಹೈಕೋರ್ಟ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಅಧಿಕಾರಿ ಗಳಿಗೆ ತಾಕೀತು ಮಾಡಿದೆ. ಜಡ್ಜ್ಗಳಿಗೆ ಮತ್ತು ವಿಐಪಿಗಳಿಗೆ ಟೋಲ್ ಪ್ಲಾಜಾಗಳಲ್ಲಿ ದಾಖಲೆ ಪರಿಶೀಲನೆಗಾಗಿ ಕಾಯುತ್ತಾ ಕುಳಿತುಕೊಳ್ಳುವುದು ಮುಜುಗರ ತರುತ್ತದೆ ಎಂದು ನ್ಯಾ.ಹುಲುವಾಡಿ ಜಿ.ರಮೇಶ್ ಮತ್ತು ನ್ಯಾ.ಎಂ.ವಿ.ಮುರಳೀಧರನ್ ನೇತೃತ್ವದ ನ್ಯಾಯಪೀಠ ಅಭಿಪ್ರಾಯಪಟ್ಟಿದೆ ಎಂದು “ದ ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.
ಈ ಬಗ್ಗೆ ಸಂಬಂಧಿತ ಎಲ್ಲಾ ಪ್ರಾಧಿಕಾರಗಳಿಗೆ ಎಚ್ಚರಿಕೆ ನೀಡಿದ ಮದ್ರಾಸ್ ಹೈಕೋರ್ಟ್ ಸಮಸ್ಯೆಯನ್ನು ಕೂಡಲೇ ಸರಿಪಡಿಸಿಕೊಳ್ಳಬೇಕು. ತನ್ನ ಆದೇಶ ರಾಷ್ಟ್ರ ವ್ಯಾಪಿ ಜಾರಿಯಾಗಬೇಕು ಎಂದು ತಾಕೀತು ಮಾಡಿದೆ. ಅದನ್ನು ಜಾರಿ ಮಾಡುವ ನಿಟ್ಟಿನಲ್ಲಿ ಎಲ್ಲಾ ಟೋಲ್ ಪ್ಲಾಜಾಗಳಿಗೆ ಸುತ್ತೋಲೆ ಹೊರಡಿಸಬಹುದು. ಈ ವಿಶೇಷ ಲೇನ್ಗಳಲ್ಲಿ ವಿಐಪಿ ಮತ್ತು ಜಡ್ಜ್ಗಳ ವಾಹನಗಳು ಮಾತ್ರ ತೆರಳುವಂತೆ ಮಾಡಬೇಕು. ಈ ನಿಯಮದ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕೆಲವೊಂದು ಸಂದರ್ಭಗಳಲ್ಲಿ ವಿಐಪಿಗಳು ಮತ್ತು ಜಡ್ಜ್ಗಳಿಗೆ ದಾಖಲೆ ಪರಿಶೀಲನೆ ನೆಪದಲ್ಲಿ ಕಿರಿಕಿರಿ ಉಂಟಾಗಿದೆ ಎಂದು ನ್ಯಾಯಪೀಠ ಆಕ್ಷೇಪ ಮಾಡಿದೆ. ನಾಲ್ಕು ವಾರಗಳ ಬಳಿಕ ಮುಂದಿನ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ
Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.