“ಲೋಕಲ್ ಟೆಸ್ಟ್’ಗೆ ಇಂದು ಓಟ್
Team Udayavani, Aug 31, 2018, 6:00 AM IST
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಸ್ಥಳೀಯ ಮಟ್ಟದ “ರಂಗ ತಾಲೀಮು’ ಹಾಗೂ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಪಾಲಿಗೆ ಮೈತ್ರಿ ಧರ್ಮ ಪಾಲನೆಯ “ಅಗ್ನಿ ಪರೀಕ್ಷೆ’ಯಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಶುಕ್ರವಾರ (ಆ.31) ಮತದಾನ ನಡೆಯಲಿದ್ದು, 48 ಲಕ್ಷಕ್ಕೂ ಮತದಾರು 9 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ.
ಈ ಚುನಾವಣೆ ಮೈತ್ರಿ ಸರ್ಕಾರದ “ಮೌಲ್ಯಮಾಪನ’ ಎಂದು ವಿಶ್ಲೇಷಿಸಲಾಗುತ್ತಿದೆ. ರಾಜ್ಯ ಮಟ್ಟದಲ್ಲಿ ದೋಸ್ತಿ ಮಾಡಿಕೊಂಡು ಅಧಿಕಾರ ಹಿಡಿದಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಸ್ಥಳೀಯ ಮಟ್ಟದಲ್ಲಿ ಪರಸ್ಪರ ಕಾದಾಟಕ್ಕೆ ಇಳಿದಿವೆ. ಸಮ್ಮಿಶ್ರ ಸರ್ಕಾರವನ್ನು ಮಣಿಸಲು ಬಿಜೆಪಿ ರಣತಂತ್ರ ರೂಪಿಸಿದೆ. ಒಟ್ಟಿನಲ್ಲಿ ಮೂರು ರಾಜಕೀಯ ಪಕ್ಷಗಳು ಚುನಾವಣೆಯನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದ್ದು, ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಹೆಚ್ಚು ಸ್ಥಳೀಯ ಸಂಸ್ಥೆಗಳನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸಿವೆ.
ಮತದಾನದ ಸಮಯ: ಬೆಳಿಗ್ಗೆ 7ರಿಂದ ಸಂಜೆ 5
ಒಟ್ಟು ಸ್ಥಳೀಯ ಸಂಸ್ಥೆಗಳು: 105
ಮಹಾನಗರ ಪಾಲಿಕೆಗಳು: 3
ನಗರಸಭೆ:29
ಪುರಸಭೆ: 53
ಪಟ್ಟಣ ಪಂ.: 20
ಒಟ್ಟು ವಾರ್ಡ್‌ಗಳು: 2,634
ಒಟ್ಟು ಮತಗಟ್ಟೆ: 3,800
ಒಟ್ಟು ಮತದಾರರು: 49.39 ಲಕ್ಷ
ಪುರುಷರು: 24.62 ಲಕ್ಷ
ಮಹಿಳೆಯರು: 24.75 ಲಕ್ಷ
ಇತರೆ: 507
ಇವಿಎಂಗಳ ಬಳಕೆ
ಬ್ಯಾಲೆಟ್ ಯೂನಿಟ್: 6,174
ಕಂಟ್ರೋಲ್ ಯೂನಿಟ್: 6,474
ಅವಿರೋಧ ಆಯ್ಕೆ – 27
ಸೆ.3ಕ್ಕೆ ಮತ ಎಣಿಕೆ
ಎಲ್ಲ 105 ನಗರ ಸ್ಥಳೀಯ ಸಂಸ್ಥೆಗಳ ಮತ ಎಣಿಕೆ ಕಾರ್ಯ ಸೆ.3ರಂದು ಬೆಳಿಗ್ಗೆ 8 ಗಂಟೆಯಿಂದ ನಡೆಯಲಿದೆ. ಮಹಾನಗರ ಪಾಲಿಕೆಗಳ ಮತ ಎಣಿಕೆ ಕಾರ್ಯ ಜಿಲ್ಲಾ ಕೇಂದ್ರ ಸ್ಥಾನಗಳಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮತ ಎಣಿಕೆ ಕಾರ್ಯ ಆಯಾ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ.
22 ಜಿಲ್ಲೆಗಳಲ್ಲಿ ಚುನಾವಣೆ
ಚಿತ್ರದುರ್ಗ, ದಾವಣಗೆರೆ, ತುಮಕೂರು, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಉತ್ತರ ಕನ್ನಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಬೀದರ, ಯಾದಗಿರಿ ಜಿಲ್ಲೆಗಳಲ್ಲಿ ಚುನಾವಣೆ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಒಂದಕ್ಕೆ ಮಾತ್ರ ಚುನಾವಣೆ ನಡೆಯುತ್ತಿದೆ. ವಿಜಯಪುರ ಹಾಗೂ ಬೀದರ ಜಿಲ್ಲೆಗಳಲ್ಲಿ ಕೇವಲ ಒಂದೊಂದೇ ಪುರಸಭೆಗೆ ಚುನಾವಣೆ ನಡೆಯುತ್ತಿದೆ.
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಲಿದೆ. ರಾಜ್ಯದಲ್ಲಿ ಅಪವಿತ್ರ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಹಾಗೂ ಜೆಡಿಎಸ್‌ಗೆ ಮತದಾರರು ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ. ಬಿಜೆಪಿ ಅತಿ ಹೆಚ್ಚು ಸ್ಥಾನ ಗಳಿಸುವುದರ ಜತೆಗೆ ಬಹುತೇಕ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆಗಳಲ್ಲಿ ಅಧಿಕಾರ ಹಿಡಿಯಲಿದೆ.
– ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ
ಕಾಂಗ್ರೆಸ್ ಪಕ್ಷವು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಿದೆ. ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿ ಬರಲಿದ್ದಾರೆ. ಮೊದಲಿನಿಂದಲೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡುತ್ತಲೇ ಬಂದಿದೆ. ನಮ್ಮ ಸಂಘಟನೆಯೂ ಉತ್ತಮವಾಗಿದೆ.
– ದಿನೇಶ್‌ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.