ವಿದ್ಯಾರ್ಥಿಗಳ ಬೌದ್ಧಿಕಮಟ್ಟ ಗಮನಿಸಿ
Team Udayavani, Aug 31, 2018, 11:08 AM IST
ಕಲಬುರಗಿ: ವರ್ಗವೊಂದರಲ್ಲಿ ಎಲ್ಲ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ಒಂದೇ ಇರೋದಿಲ್ಲ. ಅವರವರ ಬುದ್ಧಿಮಟ್ಟಕ್ಕೆ
ಅನುಗುಣವಾಗಿ ಶಿಕ್ಷಕರು ಪಾಠ ಮಾಡುವುದು ಹೆಚ್ಚು ಸಮಂಜಸ ಎನಿಸುತ್ತದೆ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಪ್ರಾಧ್ಯಾಪಕರಿಗೆ ಸಲಹೆ ನೀಡಿದರು.
ನಗರದ ದೊಡ್ಡಪ್ಪ ಅಪ್ಪಾ ಸಭಾ ಮಂಟಪದಲ್ಲಿ ಶರಣಬಸವ ವಿವಿಯು ಗುರುವಾರ ಹಮ್ಮಿಕೊಂಡಿದ್ದ ಸಿಬ್ಬಂದಿ ಪುಷ್ಟಿಕರಣ
(ಫ್ಯಾಕಲ್ಟಿ ಎನ್‌ರಿಚ್) ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕರು ತಮ್ಮ ಹುದ್ದೆ ಎಂದಿಗೂ ಅಲಕ್ಷಿಸಬಾರದು. ಮಕ್ಕಳ ಪ್ರತಿಭೆ ಪ್ರೋತ್ಸಾಹಿಸಬೇಕು. ಮಕ್ಕಳ ಉತ್ತಮ ಭವಿಷ್ಯ
ಶಿಕ್ಷಕರ ಕೈಯಲ್ಲಿದೆ. ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಮುಖಾಂತರ ಪಾಠ ಬೋಧಿಸಬೇಕು. ಶಿಕ್ಷಿಸುವುದರಿಂದ
ಮಕ್ಕಳಲ್ಲಿ ಕಲಿಕೆ ಆಸಕ್ತಿ ಕಡಿಮೆಯಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಶರಣಬಸವ ವಿವಿ ಕುಲಪತಿ ಡಾ| ನಿರಂಜನ್ ನಿಷ್ಠಿ ಮಾತನಾಡಿ, ಶಿಕ್ಷಕ ಹುದ್ದೆ ಗೌರಯುತವಾದದ್ದು. ಮಕ್ಕಳ ಭವಿಷ್ಯ ಬದಲಾಯಿಸುವ ಜವಾಬ್ದಾರಿ ಶಿಕ್ಷಕರ ಕೈಯಲ್ಲಿದೆ. ಶ್ರದ್ಧೆಯಿಂದ ಕಾಯಕ ಮಾಡುವ ಮೂಲಕ ಪೂಜ್ಯ ಡಾ| ಶರಣಬಸವಪ್ಪ ಅಪ್ಪಾಜಿ ಅವರ ಕನಸನ್ನು ಸಾಕಾರಗೊಳಿಸಬೇಕು. ಈ ವಿಶ್ವವಿದ್ಯಾಲಯವನ್ನು ರಾಷ್ಟ್ರಮಟ್ಟದಲ್ಲಿ ಬೆಳೆಸುವುದು ತಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ಸಹ ಕುಲಪತಿಗಳಾದ ಡಾ| ವಿ.ಡಿ. ಮೈತ್ರಿ , ಕುಲಸಚಿವ ಡಾ| ಅನೀಲಕುಮಾರ ಬಿಡವೆ, ಡೀನ್ ಡಾ| ಲಿಂಗರಾಜ ಶಾಸ್ತ್ರೀ
ಶಿಕ್ಷಕರ ಕಲಿಕೆ ಪುಷ್ಠಿಕರಣದ ಬಗ್ಗೆ ವಿವರಿಸಿದರು. ವಿದ್ಯಾರ್ಥಿನಿ ಶಿವರಂಜಿನಿ ಪ್ರಾರ್ಥಿಸಿದರು. ಪ್ರೊ| ಅಮೃತಾ ಪತ್ತಾರ
ನಿರೂಪಿಸಿದರು, ಡಾ| ಬಸವರಾಜ ಮಠಪತಿ ಸ್ವಾಗತಿಸಿದರು.
ಕುಲಸಚಿವ (ಮೌಲಮಾಪನ) ಡಾ| ಶಿವದತ್ತ ಹೊನ್ನಳ್ಳಿ, ಡಾ| ಲಕ್ಷ್ಮೀ ಪಾಟೀಲ, ಹಿರಿಯ ಪತ್ರಕರ್ತ ಟಿ.ವಿ. ಶಿವಾನಂದನ್, ಪ್ರೊ| ವಾಣಿಶ್ರೀ, ಪ್ರೊ| ಶಿಲ್ಪ ಬಿ.ಎಂ., ಪ್ರೊ| ಗೀತಾ ಹರವಾಳ, ಡಾ| ಶಿವಕುಮಾರ ರಾಚೋಟಿ,
ಡಾ| ಶಿವಕುಮಾರ ಜವಳಗಿ, ಡಾ| ನಿರ್ದೋಷ ಪಾಟೀಲ, ಡಾ| ಕಿರಣ ಮಾಕಾ, ಡಾ| ರಾಜಶೇಖರ ಯರಗೋಳ
ಹಾಗೂ ವಿವಿಧ ವಿಭಾಗಗಳ ಡೀನ್‌ಗಳು, ಮುಖ್ಯಸ್ಥರು, ಪ್ರಾಧ್ಯಾಪಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ಮಗಳ ಬಾಯ್‌ಫ್ರೆಂಡ್ ಫೋಟೋ ರಿವೀಲ್ ಮಾಡಿದರೆ 21 ಲಕ್ಷ ಬಹುಮಾನ: ಬಿಗ್ ಬಾಸ್‌ಗೆ ಸವಾಲು
Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್ ನ್ಯೂಸ್ ಕೊಟ್ಟ ಚಿತ್ರತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.