ಪೊಲೀಸರ ಜತೆ ಸಂಚಾರ ನಿಯಂತ್ರಿಸಿದ ತಹಶೀಲ್ದಾರ್
Team Udayavani, Aug 31, 2018, 11:17 AM IST
ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಘನ ವಾಹನ ಸಂಚಾರಕ್ಕೆ ಅವಕಾಶ ನೀಡುವ ಕುರಿತು ದ.ಕ.ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಗೊಂದಲದಿಂದಾಗಿ ಗುರುವಾರ ಬೆಳಗ್ಗೆ ಗುರುವಾಯನಕೆರೆಯಲ್ಲೇ ಟ್ರಾಫಿಕ್ ಜಾಮ್ ಉಂಟಾಗಿ ಕೊನೆಗೆ ಬೆಳ್ತಂಗಡಿ ತಹಶೀಲ್ದಾರ್ ಮದನ್‌ಮೋಹನ್ ಅವರೇ ಫೀಲ್ಡಿಗಿಳಿದು ಟ್ರಾಫಿಕ್ ನಿಯಂತ್ರಿಸಿದ ಘಟನೆ ಸಂಭವಿಸಿದೆ.
ಟ್ರಾಫಿಕ್ ಜಾಮ್
ಜಿಲ್ಲಾಧಿಕಾರಿ ಆದೇಶದ ಮಧ್ಯೆಯೂ ಪೊಲೀಸರು ಘನ ವಾಹನಗಳಿಗೆ ಸಂಚಾರಕ್ಕೆ ಅವಕಾಶ ನೀಡುತ್ತಿದ್ದಾರೆ ಎಂದು ಆರೋಪದ ಮಾತುಗಳು ಕೇಳಿಬಂದ ಹಿನ್ನೆಲೆಯಲ್ಲಿ ಆ. 29ರಿಂದ ತರಕಾರಿ, ಅಡುಗೆ ಅನಿಲ ಸಿಲಿಂಡರ್ ಸಹಿತ ಆಹಾರ ಸಾಮಗ್ರಿಗಳ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲ ಲಾರಿಗಳನ್ನು ಚಾರ್ಮಾಡಿ ಘಾಟಿಯಲ್ಲಿ ತೆರಳದಂತೆ ಗುರುವಾಯನಕೆರೆಯಲ್ಲಿ ತಡೆಹಿಡಿಯಲಾಗಿತ್ತು.
ಹೀಗಾಗಿ ಎಲ್ಲ ಲಾರಿಗಳು ಗುರುವಾಯನಕೆರೆಯಲ್ಲಿ ಬಂದು ನಿಂತಿದ್ದವು. ಇದರಿಂದ ಗುರುವಾರ ಬೆಳಗ್ಗೆ ಇತರ ವಾಹನಗಳು ಹೆಚ್ಚಾಗಿ ಟ್ರಾಫಿಕ್ ಜಾಮ್ ಉಂಟಾಯಿತು. ಬಳಿಕ ತಹಶೀಲ್ದಾರ್ ಸ್ಥಳಕ್ಕೆ ಆಗಮಿಸಿ, ಪೊಲೀಸರಿಗೆ ಮನವರಿಕೆ ಮಾಡಿ 6 ಚಕ್ರಗಳ ಲಾರಿಗಳಿಗೆ ಘಾಟಿ ರಸ್ತೆಯಲ್ಲಿ ಅವಕಾಶ ನೀಡುವಂತೆ ತಿಳಿಸಿದರು.
ಸಹಜ ಸ್ಥಿತಿಗೆ
ಇದರಿಂದ ಗುರುವಾಯನಕೆರೆಯಲ್ಲಿ ನಿಂತಿದ್ದ ಎಲ್ಲ ಲಾರಿಗಳು ಏಕಕಾಲದಲ್ಲಿ ಹೊರಟ ಪರಿಣಾಮ ಬೆಳ್ತಂಗಡಿ, ಉಜಿರೆ ಭಾಗದಲ್ಲೂ ವಾಹನಗಳ ಒತ್ತಡ ಹೆಚ್ಚಾಗಿತ್ತು. ಎಲ್ಲ ಲಾರಿಗಳು ತೆರಳಿದ ಬಳಿಕ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC U19 ವನಿತಾ ಟಿ20 ವಿಶ್ವಕಪ್: ಭಾರತಕ್ಕೆ ನಿಕಿ ಪ್ರಸಾದ್ ನಾಯಕಿ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.