ಉದಯವಾಣಿ ವಿದ್ಯಾರ್ಥಿ ಪತ್ರಕರ್ತ ಯೋಜನೆಗೆ ಆಹ್ವಾನ
Team Udayavani, Aug 31, 2018, 11:26 AM IST
ಮಣಿಪಾಲ: ಉದಯವಾಣಿ ವಿದ್ಯಾರ್ಥಿ ಪತ್ರಕರ್ತ ಯೋಜನೆ ಈ ವರ್ಷದಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಪೂರ್ಣ ಪ್ರಮಾಣದಲ್ಲಿ ವಿಸ್ತರಿಸಲಾಗುತ್ತಿದೆ. ಕಳೆದ ವರ್ಷದಿಂದ ಪ್ರಾಯೋಗಿಕವಾಗಿ ಪುತ್ತೂರಿನಲ್ಲಿ ಜಾರಿಗೊಳಿಸಲಾಗಿತ್ತು. ಈ ಯೋಜನೆ ವಿಶೇಷವಾಗಿದ್ದು, ಓದಿನ ಜತೆಗೇ ಕೆಲವು ಸಮಯವನ್ನು ವಿನಿಯೋಗಿಸುವ ಮೂಲಕ ಉಚಿತವಾಗಿ ಉದಯವಾಣಿಯೊಂದಿಗೆ ಪತ್ರಿಕೋದ್ಯಮದ ಪ್ರಾಯೋಗಿಕ ಅನುಭವವನ್ನು ಪಡೆಯಬಹುದಾಗಿದೆ. ಬಿಎ ಹಾಗೂ ಎಂಎ ಓದುತ್ತಿರುವವರು ಈ ಯೋಜನೆಗೆ ಅರ್ಹರು. ಪ್ರಸ್ತುತ ಯಾವುದಾದರೂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಈ ಯೋಜನೆಯಡಿ ವಿವಿಧ ಭಾಗಗಳಿಂದ ನಿಗದಿತ ಸಂಖ್ಯೆಯ ಆಸಕ್ತರನ್ನು ಆಯ್ದುಕೊಳ್ಳಲಾಗುವುದು.
ತರಬೇತಿ ವಿವರ: ಆಯ್ದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ನೀಡುವುದಲ್ಲದೆ, ನಾಲ್ಕು ತಿಂಗಳಿಗೊಮ್ಮೆ ಕಾರ್ಯಾಗಾರ ನಡೆಸಲಾಗುವುದು. ವಾರದಲ್ಲಿ ಅವರು ಇರುವ ಸುತ್ತಲಿನ ಪ್ರದೇಶದಲ್ಲೇ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಮಾಡಲು ಅವಕಾಶ ನೀಡಲಾಗುವುದು. ಆ ಮೂಲಕ ಅವರಿಗೆ ವರದಿಗಾರಿಕೆಯಲ್ಲದೇ, ವರ್ಷದಲ್ಲಿ ಒಂದು-ಎರಡು ಬಾರಿ ಸುದ್ದಿಮನೆಯಲ್ಲೂ (ಡೆಸ್ಕ್) ಕೆಲಸ ಮಾಡಲು ಅವಕಾಶ ಕಲ್ಪಿಸಲಾಗುವುದು. ತರಬೇತಿ ಬಳಿಕ ಉದಯವಾಣಿ ವಿದ್ಯಾರ್ಥಿ ಪತ್ರಕರ್ತ ಯೋಜನೆಯ ಪ್ರಮಾಣಪತ್ರ ನೀಡಲಾಗುವುದು. ತರಬೇತಿ ಅವಧಿಯಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದವರಿಗೆ ಅವಕಾಶವಿದ್ದಲ್ಲಿ ಉದಯವಾಣಿಯಲ್ಲೇ ಪರಿಗಣಿಸಲಾಗುವುದು.
ಆಯ್ಕೆ ಹೇಗೆ?: ಸೆ. 19ರಂದು ಕಿರು ಪರೀಕ್ಷೆ ನಡೆಯಲಿದೆ. ಸುಳ್ಯ ಮತ್ತು ಪುತ್ತೂರು ಭಾಗದವರಿಗೆ ಪುತ್ತೂರಿನಲ್ಲಿ ಪರೀಕ್ಷೆ ನಡೆಯಲಿದೆ. ಬೆಳ್ತಂಗಡಿಯವರು ಮತ್ತು ಬಂಟ್ವಾಳದವರು ಪುತ್ತೂರಿನಲ್ಲೂ ಪರೀಕ್ಷೆ ಬರೆಯಲು ಅವಕಾಶವಿದೆ. ಆಸಕ್ತರು ತಮ್ಮ ಹೆಸರು, ಊರು, ಓದುತ್ತಿರುವ ಕೋರ್ಸ್-ವರ್ಷ, ಕಾಲೇಜಿನ ಹೆಸರು, ಸಂಪರ್ಕ ಸಂಖ್ಯೆ ಹಾಗೂ ಇಮೇಲ್ ಐಡಿ ಈ ವಾಟ್ಸ್ ಆ್ಯಪ್ ನಂಬರ್‌ಗೆ 99641 69554ಗೆ ಅಥವಾ ಇಮೇಲ್ [email protected]
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.