ದೇವಸ್ಥಾನ ಜೀರ್ಣೋದ್ಧಾರಕ್ಕೆ ನೆರವು
Team Udayavani, Aug 31, 2018, 5:37 PM IST
ಕಲಘಟಗಿ: ಜನರನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಸುವುದರಿಂದ ಸಹೋದರ ಭಾವನೆಯನ್ನು ಜಾಗೃತಗೊಳಿಸಿ, ಸುಂದರ ಸಮಾಜ ನಿರ್ಮಿಸಲು ಸಾಧ್ಯ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ ಎಂ. ಹೇಳಿದರು.
ಪಟ್ಟಣದಲ್ಲಿರುವ ಶ್ರೀ ನಾಮದೇವ ಶಿಂಪಿ ಸಮಾಜದ ಹರಿ ಮಂದಿರ, ಶ್ರೀ ಪಾಂಡುರಂಗ ಹಾಗೂ ಪೇಟೆ ಆಂಜನೇಯ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಂಜೂರಾದ ಒಂದು ಲಕ್ಷ ರೂ. ಸಹಾಯ ಧನದ ಡಿ.ಡಿ. ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ದೇವಸ್ಥಾನಗಳ ಜೀರ್ಣೋದ್ಧಾರ ಕಾಮಗಾರಿಗಳು ಪೂರ್ಣಗೊಳ್ಳದೇ ನಿಂತು ಹೋಗಿದ್ದಲ್ಲಿ ಅವುಗಳಿಗೆ ಸಹಾಯ ಧನವನ್ನು ನೀಡಿ ಮತ್ತೆ ಕಾಮಗಾರಿಯನ್ನು ಪ್ರಾರಂಭಿಸುವುದರಿಂದ ಬೇರೆ ಬೇರೆ ಮೂಲಗಳಿಂದ ಹಣ ಸಂಗ್ರಹಗೊಂಡು ಕಾರ್ಯ ಸಂಪೂರ್ಣಗೊಳ್ಳಲಿದೆ. ಅಲ್ಲದೇ ಧಾರ್ಮಿಕ ಚಟುವಟಿಕೆಗಳು ಮತ್ತೆ ಆರಂಭಗೊಳ್ಳುತ್ತವೆ. ಆದ್ದರಿಂದ ಶ್ರೀಗಳ ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ದೇವಸ್ಥಾನಗಳ ಜೀರ್ಣೋದ್ಧಾರ, ರುದ್ರಭೂಮಿ ಯೋಜನೆ, ಸಮುದಾಯ ಭವನಗಳ ನಿರ್ಮಾಣ, ಹಾಲು ಉತ್ಪಾದಕರ ಸಹಕಾರಿ ಸಂಘಗಳ ಕಟ್ಟಡ ನಿರ್ಮಾಣ, ಕೆರೆ ಸೇರಿದಂತೆ ಮುಂತಾದ ಕಾಮಗಾರಿಗಳಿಗೆ ಶ್ರೀ ಕ್ಷೇತ್ರದಿಂದ ಸಹಾಯಧನ ನೀಡಲಾಗುತ್ತಿದೆ. ಶ್ರೀ ಕ್ಷೇತ್ರದ ಅನುದಾನವನ್ನು ಸದುಪಯೋಗ ಪಡಿಸಿಕೊಳ್ಳುವುದರ ಜೊತೆಗೆ ಪರಿಸರ ಶುಚಿತ್ವಕ್ಕೂ ಪ್ರಾಧಾನ್ಯತೆ ನೀಡಿ ಎಂದರು.
ದೇವಸ್ಥಾನ ಕಮಿಟಿ ಅಧ್ಯಕ್ಷ ಶ್ರೀಕಾಂತ ಕಠಾವಕರ, ಕಾರ್ಯದರ್ಶಿ ದತ್ತಾತ್ರೇಯ ವಂಡಕರ ಹಾಗೂ ಸದಸ್ಯರು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿ ಕಾರಿ ಕೆ. ಕುಸುಮಾಧರ, ಒಕ್ಕೂಟದ ಅಧ್ಯಕ್ಷೆ ಲಕ್ಷ್ಮೀ ದೇವಲಾಪುರ, ಮೇಲ್ವಿಚಾರಕ ರೇಣುಕರಾಜ, ಸೇವಾ ಪ್ರತಿನಿಧಿ ಆರೋಗ್ಯಮ್ಮ, ಎನ್. ಕೆ. ಅಂತೋನಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.