ನ್ಯಾ| ರಂಜನ್ ಗೊಗೋಯ್ ಮುಂದಿನ ಸಿಜೆಐ
Team Udayavani, Sep 2, 2018, 6:00 AM IST
ಹೊಸದಿಲ್ಲಿ: ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನಿವೃತ್ತಿಯ ಅನಂತರ ಮುಂದಿನ ಸಿಜೆಐ ಆಗಿ ನ್ಯಾ| ರಂಜನ್ ಗೊಗೋಯ್ ಹೆಸರೇ ಅಂತಿಮವಾಗಿದೆ. ಸಿಜೆಐ ದೀಪಕ್ ಮಿಶ್ರಾ ಅವರು ನ್ಯಾ| ಗೊಗೋಯ್ ಹೆಸರನ್ನು ಶಿಫಾರಸು ಮಾಡಿದ್ದಾರೆ ಎನ್ನಲಾಗಿದೆ. ನ್ಯಾ| ಗೊಗೋಯ್ ಅ.3ರಂದು ಪ್ರಮಾಣ ಸ್ವೀಕರಿಸಲಿದ್ದಾರೆ. ಸಿಜೆಐ ದೀಪಕ್ ಮಿಶ್ರಾ ವಿರುದ್ಧ ಜನವರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ವರಲ್ಲಿ ಇವರೂ ಒಬ್ಬರಾಗಿದ್ದರಿಂದ ಇವರ ಹೆಸರನ್ನು ಕೈಬಿಡಬಹುದು ಎಂಬ ಸಂದೇಹಗಳಿದ್ದವು.
ಶೀಘ್ರದಲ್ಲೇ ಮಿಶ್ರಾ ಶಿಫಾರಸು ಪತ್ರವನ್ನು ಕಾನೂನು ಸಚಿವಾಲಯಕ್ಕೆ ಕಳುಹಿಸಲಿದ್ದಾರೆ. ಇತ್ತೀಚೆಗಷ್ಟೇ ಮುಂದಿನ ಸಿಜೆಐ ಯಾರಾಗಬೇಕು ಎಂಬ ಶಿಫಾರಸು ನೀಡುವಂತೆ ಮಿಶ್ರಾಗೆ ಕೇಂದ್ರ ಸರಕಾರ ಸೂಚಿಸಿತ್ತು. ಸಾಮಾನ್ಯ ನಿಯಮದ ಪ್ರಕಾರ, ಹಿರಿತನದ ಆಧಾರದಲ್ಲಿ ಮುಖ್ಯ ನ್ಯಾಯಮೂರ್ತಿ ಯನ್ನು ಆಯ್ಕೆ ಮಾಡಲಾಗುತ್ತದೆ. ಅ.2ರಂದು ದೀಪಕ್ ಮಿಶ್ರಾ ನಿವೃತ್ತರಾಗಲಿದ್ದು, ಅವರ ಅವಧಿ ಮುಗಿಯುವ ಒಂದು ತಿಂಗಳು ಮುನ್ನ ಉತ್ತರಾಧಿಕಾರಿಯ ಶಿಫಾರಸು ಮಾಡಬೇಕಿರುತ್ತದೆ.
ಅಸ್ಸಾಂ ಮೂಲದವರಾದ ಗೊಗೋಯ್ ಹಲವು ಪ್ರಮುಖ ಪ್ರಕರಣಗಳನ್ನು ನಿರ್ವಹಿಸಿದ್ದಾರೆ. ಅಸ್ಸಾಂನಲ್ಲಿ ರಾಷ್ಟ್ರೀಯ ನಾಗರಿಕ ಪಟ್ಟಿ ಸಿದ್ಧಪಡಿಸುವ ಪ್ರಕ್ರಿಯೆಯ ಉಸ್ತುವಾರಿ ವಹಿಸಿದ್ದಾರೆ. ಲೋಕಪಾಲ ಮತ್ತು ಲೋಕಾಯುಕ್ತ ನೇಮಕಾತಿ ಪ್ರಕ್ರಿಯೆ ನಿರ್ವಹಣೆಯ ನ್ಯಾಯಪೀಠದಲ್ಲೂ ಇವರಿದ್ದಾರೆ. ಜಾಹೀರಾತುಗಳಲ್ಲಿ ರಾಜಕಾರಣಿಗಳನ್ನು ಮನಬಂದಂತೆ ವೈಭವೀಕರಿಸುವುದಕ್ಕೆ ಕಡಿವಾಣ ಹಾಕಿದ್ದು ಅವರ ಉಲ್ಲೇಖಾರ್ಹ ತೀರ್ಪು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.