ರಾಷ್ಟ್ರೀಯ ಧರ್ಮಸಂಸದ್‌ಗೆ ಕನ್ಯಾಡಿ ಸಿದ್ಧ: ನಳಿನ್
Team Udayavani, Sep 2, 2018, 9:42 AM IST
ಮಂಗಳೂರು: ಕನ್ಯಾಡಿ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರದಲ್ಲಿ ಸೆ. 2 ಮತ್ತು 3ರಂದು ನಡೆಯುವ ರಾಷ್ಟ್ರೀಯ ಧರ್ಮಸಂಸದ್‌ನಲ್ಲಿ ಭಾಗಿಗಳಾಗಲು ದೇಶದ ವಿವಿಧ ಭಾಗಗಳಿಂದ ಸಾಧು ಸಂತರು ಆಗಮಿಸುತ್ತಿದ್ದು, ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಲಾಗಿದೆ. 30 ಸಾವಿರಕ್ಕೂ ಅಧಿಕ ಭಕ್ತರು ಭಾಗವಹಿಸಲಿದ್ದಾರೆ ಎಂದು ಸಂಸದ ಹಾಗೂ ರಾಷ್ಟ್ರೀಯ ಧರ್ಮ ಸಂಸದ್ ಸ್ವಾಗತ ಸಮಿತಿ ಗೌರವಾಧ್ಯಕ್ಷ ನಳಿನ್ ಕುಮಾರ್ ಕಟೀಲು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಉತ್ತರ ಭಾರತದಿಂದ 2 ಸಾವಿರಕ್ಕೂ ಅಧಿಕ ಸಾಧು ಸಂತರು ಪಾಲ್ಗೊಳ್ಳಲಿದ್ದಾರೆ. ಉಜಿರೆ, ಧರ್ಮಸ್ಥಳ ಮುಂತಾದೆಡೆ ಉಳಿದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಸಾಧು ಸಂತರ ಭೋಜನ, ಉಪಾಹಾರಕ್ಕೆ ಪ್ರತ್ಯೇಕ ಅನ್ನಛತ್ರ ತೆರೆಯಲಾಗಿದೆ. 108 ಮಂದಿ ಸ್ವಾಮೀಜಿಗಳು ಮತ್ತು 9 ಮಂದಿ ಮುಖ್ಯ ಅತಿಥಿಗಳು ಕುಳಿತುಕೊಳ್ಳಲು ಆತ್ಮಾನಂದ ವೇದಿಕೆ ಸಿದ್ಧಗೊಂಡಿದೆ ಎಂದರು.
ಸೆ. 2ರಂದು ಸಂಜೆ 4 ಗಂಟೆಗೆ ಉಜಿರೆ ಜನಾರ್ದನ ದೇವಸ್ಥಾನದಿಂದ ಸಾಧು ಸಂತರನ್ನು, ಮಹಾಮಂಡ
ಲೇಶ್ವರರನ್ನು ಮತ್ತು ಮಠಾಧೀಶರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಶೋಭಯಾತ್ರೆಯಲ್ಲಿ ಶ್ರೀರಾಮ ಕ್ಷೇತ್ರಕ್ಕೆ
ಕರೆ ತರಲಾಗುವುದು. 5 ರಥದಲ್ಲಿ ಪ್ರಮುಖ ಸಾಧು ಸಂತರು ಇರಲಿದ್ದಾರೆ. ರಾತ್ರಿ 8 ಗಂಟೆಗೆ ಧರ್ಮ ಸಂಸದ್‌ನ ನಿರ್ಣಯಗಳನ್ನು ಸಂತ ಶ್ರೇಷ್ಠರು ಕೈಗೊಳ್ಳಲಿದ್ದಾರೆ ಎಂದು ನಳಿನ್ ಕುಮಾರ್ ವಿವರಿಸಿದರು.
ಮುಖ್ಯಮಂತ್ರಿ ಕುಮಾರಸ್ವಾಮಿ, ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ, ಸಾರ್ವಜನಿಕರಿಗೆ ಕನ್ಯಾಡಿಯ ಸರಕಾರಿ ಶಾಲೆಯ ಮೈದಾನದಲ್ಲಿ ಅನ್ನದಾನ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ 1,000 ಸ್ವಯಂ ಸೇವಕರ ತಂಡ ನಿಯೋಜಿಸಲಾಗಿದೆ. ಮಂಗಳೂರಿನಿಂದ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಶಾಸಕ ಡಾ| ವೈ. ಭರತ್ ಶೆಟ್ಟಿ, ರಾಷ್ಟ್ರೀಯ ಧರ್ಮ ಸಂಸದ್ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ. ಚಿತ್ತರಂಜನ್, ಸಹ ಸಂಚಾಲಕ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ, ಕಾರ್ಯದರ್ಶಿ ವಸಂತ ಪೂಜಾರಿ, ಸಹ ಪ್ರಧಾನ ಕಾರ್ಯದರ್ಶಿ ನವೀನ್ ಸುವರ್ಣ ಉಪಸ್ಥಿತರಿದ್ದರು.
ಗಣ್ಯರ ಭೇಟಿ
ಶನಿವಾರ ಕ್ಷೇತ್ರಕ್ಕೆ ಶಾಸಕರಾದ ಸುನಿಲ್ ಕುಮಾರ್, ಹರೀಶ್ ಪೂಂಜಾ ಮತ್ತು ಹರೀಶ್ ಕುಮಾರ್ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.
ಮುಖ್ಯಮಂತ್ರಿ ಉದ್ಘಾಟನೆ
3ರಂದು ಬೆಳಗ್ಗೆ 9.15ಕ್ಕೆ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ ದಶಮಾನೋತ್ಸವ ಕಾರ್ಯಕ್ರಮ ನಡೆಯಲಿದೆ. 10.30ಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಉದ್ಘಾಟಿಸುವರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್, ಡಿ.ವಿ. ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್, ಸಂಸದರಾದ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ, ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಪರಿಷತ್ ನಿರ್ದೇಶಕ ಡಾ| ಎಸ್.ಸಿ. ಶರ್ಮಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2ರಿಂದ ಸಂತರಿಂದದಿವ್ಯ ಸಂದೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಳಿನ್ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.