ವಾರದಿಂದ ಬೀಗ ಜಡಿದಿದ್ದ ಅಂಗನವಾಡಿಗೆ ಮುಕ್ತಿ
Team Udayavani, Sep 2, 2018, 11:08 AM IST
ಉಪ್ಪಿನಂಗಡಿ: ಕಳೆದೊಂದು ವಾರದಿಂದ ಬೀಗ ಹಾಕಿದ್ದ ತಣ್ಣೀರುಪಂತ ಗ್ರಾಮದ ಅಳಕೆ ಅಂಗನವಾಡಿ ಕೇಂದ್ರದ ಅವ್ಯವಸ್ಥೆಯ ಕುರಿತು ‘ಉದಯವಾಣಿ’ ಸುದಿನದಲ್ಲಿ ವರದಿ ಪ್ರಕಟಗೊಂಡ ಬೆನ್ನಲ್ಲೇ ಅಂಗನವಾಡಿಯ ಬೀಗ ತೆರೆಯಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಮೇಲಧಿಕಾರಿಗಳಿಗೆ ತಿಳಿಸದೆ ಬೀಗ ಹಾಕಿ ವೈಯಕ್ತಿಕ ಕಾರಣದಿಂದ ಗೈರು ಹಾಜರಾಗಿದ್ದರು. ಇದರಿಂದ ಪುಟಾಣಿಗಳು ಅವರ ಹೆತ್ತವರು ಅಂಗನವಾಡಿಗೆ ದಿನಾ ಬಂದು ಹಿಂತಿರುಗಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ವರದಿ ಪ್ರಕಟಿಸಲಾಗಿತ್ತು.
ಮೇಲ್ವಾಚಾರಕಿ ನಂದನಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆ್ಯಗ್ನೆಸ್ ಅವರಿಗೆ ಮಾಹಿತಿ ನೀಡಿದ್ದರು. ಅದರಂತೆ ಯೋಜನಾಧಿಕಾರಿಗಳು ಮೇಲ್ವಿಚಾರಕಿಯೊಂದಿಗೆ ಶನಿವಾರ ಅಂಗನವಾಡಿ ಕೇಂದ್ರಕ್ಕೆ ಆಗಮಿಸಿ ಕೇಂದ್ರದ ಬೀಗವನ್ನು ಒಡೆದು ತೆರವುಗೊಳಿಸಿ ಸಭೆ ನಡೆಸಿದ್ದಾರೆ. ಅಧಿಕಾರಿಗಳು ಅಂಗನವಾಡಿಗೆ ಕಾರ್ಯಕರ್ತೆಯರನ್ನು ನೇಮಿಸಿ ಕಾರ್ಯಾಚರಿಸುವಂತೆ ಸೂಚನೆ ಕೊಟ್ಟಿದ್ದಾರೆ. ತಣ್ಣೀರುಪಂತ ಗ್ರಾ.ಪಂ. ಪಿಡಿಒ ಪೂರ್ಣಿಮಾ ಹಾಗೂ ಸದಸ್ಯರಾದ ಅಬ್ದುಲ್ ರಹಿಮಾನ್, ತಾಜುಸದ್ದೀನ್, ಅಂಗನವಾಡಿ ಕೇಂದ್ರದ ಬಾಲವಿಕಾಸ ಅಧ್ಯಕ್ಷೆ ಗೀತಾ ಎ. ಉಪಸ್ಥಿತರಿದ್ದರು. ಸಂಬಂಧಪಟ್ಟವರು ಶೀಘ್ರವಾಗಿ ಸ್ಪಂದಿಸಿರುವುದಕ್ಕೆ ಮಕ್ಕಳ ಹೆತ್ತವರು ಅಭಿನಂದನೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ
Kaup: ಉದ್ಯಾವರ: ಮಹಿಳೆ ಮಲಗಿದ ಸ್ಥಿತಿಯಲ್ಲೇ ಸಾವು
Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ
Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು
Bengaluru: ಇವಿ ಬೈಕ್ ಶೋ ರೂಮ್ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.