ಎಎಸ್ಐ ಹೃದಯಾಘಾತದಿಂದ ಸಾವು
Team Udayavani, Sep 2, 2018, 11:57 AM IST
ಬೆಂಗಳೂರು: ಹೊಯ್ಸಳ ವಾಹನದಲ್ಲಿ ಗಸ್ತು ತಿರುಗುತ್ತಿದ್ದ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಎಎಸ್ಐ ಚಂದ್ರಶೇಖರಯ್ಯ (56) ಹೃದಯಾಘಾತದಿಂದ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ. ಎಂದಿನಂತೆ ಶನಿವಾರ ಕೂಡ ಹೊಯ್ಸಳ ವಾಹನದಲ್ಲಿ ಗಸ್ತು ತಿರುಗುತ್ತಿದ್ದ ಚಂದ್ರಶೇಖರಯ್ಯ ಅವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ.
ಕೂಡಲೇ ಸುಕಂದಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಪರಿಶೀಲಿಸಿದ ವೈದ್ಯರು, ಎಎಸ್ಐ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಕಳೆದ 36 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯನಿರ್ವಹಿಸುತ್ತಿದ್ದ ಚಂದ್ರಶೇಖರಯ್ಯ ಅವರಿಗೆ ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ ಎಂದು ಪೊಲೀಸರು ತಿಳಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.