ಕಲ್ಯಾಣ್ ಕರ್ನಾಟಕ ಮಿತ್ರ ಮಂಡಳ ಮಹಿಳಾ ವಿಭಾಗದಿಂದ ಆಟಿಡೊಂಜಿ ಕೂಟ
Team Udayavani, Sep 2, 2018, 4:48 PM IST
ಕಲ್ಯಾಣ್: ಕರ್ನಾಟಕ ಮಿತ್ರ ಮಂಡಳ ಕಲ್ಯಾಣ್ ಇದರ ಮಹಿಳಾ ವಿಭಾಗದ ವತಿಯಿಂದ ಆಟಿಡೊಂಜಿ ಕೂಟ ಕಾರ್ಯಕ್ರಮವು ಸಂಘದ ಕಚೇರಿಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.
ಸಂಘದ ಪದಾಧಿಕಾರಿಗಳು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಹಿಳಾ ವಿಭಾಗದ ಸದಸ್ಯೆಯರು ಪ್ರಾರ್ಥನೆಗೈದರು.
ವೇದಿಕೆಯಲ್ಲಿ ಕರ್ನಾಟಕ ಮಿತ್ರ ಮಂಡಳ ಕಲ್ಯಾಣ್ ಇದರ ಗೌರವಾಧ್ಯಕ್ಷ ಶ್ರೀಧರ ಪೂಜಾರಿ, ಅಧ್ಯಕ್ಷ ದಿವಾಕರ ಸಾಲ್ಯಾನ್, ಕಾರ್ಯದರ್ಶಿ ಪುರುಷೋತ್ತಮ ಪೂಜಾರಿ, ಕೋಶಾಧಿಕಾರಿ ಸತೀಶ್ ಅಂಚನ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ದೇವಕಿ ಪೂಜಾರಿ, ಮಾಜಿ ಕಾರ್ಯಾಧ್ಯಕ್ಷೆ ಶ್ರೀಮತಿ ಕೋಟ್ಯಾನ್, ಸುಜಾತಾ ಕೋಟ್ಯಾನ್, ಪ್ರೀತಿ ಪೂಜಾರಿ ಅವರು ಉಪಸ್ಥಿತರಿದ್ದರು.
ಮಹಾರಾಷ್ಟÅ ಸರಕಾರದ ವಿಶೇಷ ಕಾರ್ಯಕಾರಿ ಅಧಿಕಾರಿಯಾಗಿ ನಿಯುಕ್ತಿಗೊಂಡ ಸಂಘದ ಅಧ್ಯಕ್ಷ ದಿವಾಕರ ಸಾಲ್ಯಾನ್ ಅವರನ್ನು ಇದೇ ಸಂದರ್ಭದಲ್ಲಿ ಸಂಘದ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.
ದಿವಾಕರ ಸಾಲ್ಯಾನ್ ಅವರು ಗೌರವ ಸ್ವೀಕರಿಸಿ ಮಾತನಾಡಿ, ಆಟಿ ತಿಂಗಳ ವಿಶೇಷತೆಯನ್ನು ಇಂದಿನ ಮಕ್ಕಳಿಗೆ ತಿಳಿಯಪಡಿಸುವ ಇಂತಹ ಕಾರ್ಯಕ್ರಮಗಳು ಅಭಿನಂದನೀಯ. ನಾವೆಲ್ಲರೂ ತುಳುನಾಡಿನ ಸಂಸ್ಕೃತಿ, ಪರಂಪರೆಗಳನ್ನು ಉಳಿಸಿ- ಬೆಳೆಸಬೇಕಾದ ಅಗತ್ಯ ಇದೆ. ಮಹಿಳಾ ವಿಭಾಗದ ಕಾರ್ಯಕ್ರಮಗಳಿಗೆ ಸಂಘದ ಪ್ರೋತ್ಸಾಹ, ಸಹಕಾರ ಅಗತ್ಯವಾಗಿದೆ ಎಂದು ನುಡಿದರು.
ಗೌರವಾಧ್ಯಕ್ಷ ಶ್ರೀಧರ ಪೂಜಾರಿ ಅವರು ಆಟಿ ತಿಂಗಳಲ್ಲಿ ಹಿಂದಿನ ಕಾಲದಲ್ಲಿ ತಾವು ಅನುಭವಿಸಿದ ಕಷ್ಟ-ನೋವುಗಳನ್ನು ತಿಳಿಸಿದರು.
ಸಂಘಟನೆ ಬಲಪಡಿಸಬೇಕು
ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ದೇವಕಿ ಪೂಜಾರಿ ಹಾಗೂ ಮಾಜಿ ಕಾರ್ಯಾಧ್ಯಕ್ಷೆ ಶ್ರೀಮತಿ ಕೋಟ್ಯಾನ್ ಅವರು ಮಾತನಾಡಿ, ಮಹಿಳೆಯರು ಹೆಚ್ಚಾಗಿ ಸಂಘದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಸಂಘಟನೆಯನ್ನು ಬಲಪಡಿಸಬೇಕು ಎಂದರು.
ಸಂಘದ ಜತೆ ಕಾರ್ಯದರ್ಶಿ ರಾಜೇಶ್ ಪೂಜಾರಿ ಅವರು ಮಾತನಾಡಿ, ಪುರಾತನ ಪರಂಪರೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದ್ದು, ಸಂಘವು ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ನುಡಿದು ಆಟಿ ತಿಂಗಳ ವಿಶೇಷತೆಗಳನ್ನು ವಿವರಿಸಿದರು.
ಪ್ರೀತಿ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು. ಸುಜಾತಾ ಕೋಟ್ಯಾನ್ ವಂದಿಸಿದರು. ಮಹಿಳಾ ವಿಭಾಗದವರು ತಯಾರಿಸಿದ ಆಟಿ ತಿಂಗಳ ವಿಶೇಷತೆಯನ್ನು ಸಾರುವ ವೈವಿಧ್ಯಮಯ ತಿಂಡಿ-ತಿನಿಸುಗಳನ್ನು ಇದೇ ಸಂದರ್ಭದಲ್ಲಿ ಪ್ರದರ್ಶಿಸಿದರು. ಸಂಘದ ಪದಾಧಿಕಾರಿಗಳು, ಮಹಿಳಾ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಸದಸ್ಯೆಯರು, ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.