ಶ್ರೀಕೃಷಾಷ್ಟಮಿ: ನಂದಗೋಕುಲವಾದ ವಿಟ್ಲ
Team Udayavani, Sep 3, 2018, 1:24 PM IST
ವಿಟ್ಲ: ವಿಟ್ಲ ಕ್ಷೇತ್ರ ಬಾಲಗೋಕುಲ ಸಮಿತಿ ವತಿಯಿಂದ ಆಯೋಜಿಸಿದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಅಂಗವಾಗಿ ಕೆಎಸ್ ಆರ್‌ಟಿಸಿ ಬಸ್ ನಿಲ್ದಾಣದಿಂದ ಆರಂಭವಾದ ಶೋಭಾಯಾತ್ರೆಯನ್ನು ನ್ಯಾಯವಾದಿ ಶಿವಾನಂದ ಅವರು ಬಾಲಗೋಕುಲ ಸಮಿತಿ ಅಧ್ಯಕ್ಷ ಜಗದೀಶ ಪಾಣೆಮಜಲು ಅವರಿಗೆ ಭಗವಾಧ್ವಜ ಹಸ್ತಾಂತರಿಸಿ ಉದ್ಘಾಟಿಸಿದರು.
ವಿಟ್ಲ ಪ.ಪಂ. ಅಧ್ಯಕ್ಷ ಅರುಣ್ ಎಂ. ವಿಟ್ಲ, ಪ.ಪಂ. ಸದಸ್ಯರು, ಮೈತ್ರೇಯೀ ಗುರುಕುಲದ ವ್ಯವಸ್ಥಾಪಕ ಜಗನ್ನಾಥ ಕಾಸರಗೋಡು, ಬಾಲಗೋಕುಲ ಸಮಿತಿ ಪ್ರ. ಕಾರ್ಯದರ್ಶಿ ಪದ್ಮನಾಭ ಕಟ್ಟೆ, ವಿಟ್ಲ ಆರ್.ಕೆ. ಆರ್ಟ್ಸ್ ನಿರ್ದೇಶಕ ರಾಜೇಶ್ ವಿಟ್ಲ, ನಾಗೇಶ್ ಬಸವನಗುಡಿ ಮತ್ತಿತರರಿದ್ದರು.
ಶೋಭಾಯಾತ್ರೆ ವಿಟ್ಲದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಶ್ರೀಕೃಷ್ಣ ವೇಷಧಾರಿ ಪುಟಾಣಿಗಳು ರಸ್ತೆಯುದ್ದಕ್ಕೂ ಓಡಾಡಿ ವಿಟ್ಲವನ್ನು ನಂದಗೋಕುಲವನ್ನಾಗಿಸಿತು. ಕೆಲಿಂಜ, ಮಂಕುಡೆ – ಕುಡ್ತಮುಗೇರು, ಧರ್ಮನಗರ, ಕಡಂಬು, ಮೈತ್ರೇಯೀ ಗುರುಕುಲ, ಚಂದಳಿಕೆ ವಿಭಾಗದ ಸುಮಾರು ಮುನ್ನೂರಕ್ಕೂ ಅಧಿಕ ಮಕ್ಕಳ ಶ್ರೀಕೃಷ್ಣ ವೇಷಧಾರಿಗಳು, ಭಜನ ತಂಡ, ಛತ್ರ ಚಾಮರಗಳು, ಟ್ಯಾಬ್ಲೋ, ಚೆಂಡೆ ಮೇಳ, ನಾಸಿಕ್ ಬ್ಯಾಂಡ್, ವಿವಿಧ ತಾಳ ವಾದ್ಯಗಳು ಮೆರವಣಿಗೆಗೆ ಮೆರುಗು ನೀಡಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.