ಡೊಂಬಿವಲಿ ಶ್ರೀ ಶಕ್ತಿ ಕನ್ನಡ ಸಂಘ: ರಾಘವೇಂದ್ರ ಸ್ವಾಮಿಗಳ ಆರಾಧನೆ
Team Udayavani, Sep 4, 2018, 12:24 PM IST
ಮುಂಬಯಿ: ಡೊಂಬಿವಲಿ ಪಶ್ಚಿಮದ ಶ್ರೀ ಶಕ್ತಿ ಮಹಿಳಾ ಕನ್ನಡ ಸಂಘದ ವತಿಯಿಂದ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ 347 ನೇ ವಾರ್ಷಿಕ ಆರಾಧನಾ ಮಹೋತ್ಸವವು ಸೆ. 28 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು.
ಡೊಂಬಿವಲಿ ಪಶ್ಚಿಮ ಓಲ್ಡ್ ಡೊಂಬಿವಲಿಯ ಕಾಂಚಿ ಕೋ. ಹೌಸಿಂಗ್ ಸೊಸೈಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಧಾರ್ಮಿಕ ಕಾರ್ಯಕ್ರಮವಾಗಿ ಪೂರ್ವಾಹ್ನ 10.30 ರಿಂದ ಆರಾಧನೆ, ಆರತಿ, ಮಧ್ಯಾಹ್ನ 12 ರಿಂದ ಮಹಾಮಂಗಳಾರತಿ, ಪ್ರಸಾದ ವಿತರಣೆ, ಮಧ್ಯಾಹ್ನ 12.30 ರಿಂದ ಮಹಾಪ್ರಸಾದ ರೂಪದಲ್ಲಿ ಅನ್ನಪ್ರಸಾದ ನಡೆಯಿತು.
ಅಪರಾಹ್ನ 4 ರಿಂದ ಶ್ರೀ ಶಕ್ತಿ ಮಹಿಳಾ ಕನ್ನಡ ಸಂಘದವರಿಂದ ಭಜನ ಕಾರ್ಯಕ್ರಮ ನೆರವೇರಿತು. ವಿಠuಲ್ ಎಂ. ನಾಯ್ಕ ಅವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಶಕ್ತಿ
ಮಹಿಳಾ ಕನ್ನಡ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯೆಯರು ಪಾಲ್ಗೊಂಡು ಸಹಕರಿಸಿದರು.
ಸ್ಥಳೀಯ ವಿವಿಧ ಕ್ಷೇತ್ರಗಳ ಗಣ್ಯರು, ಸಮಾಜ ಸೇವಕರು, ದಾನಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ತುಳು-ಕನ್ನಡಿಗರು, ಅನ್ಯಭಾಷಿಗರು, ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿ ಗುರುಗಳ ಕೃಪೆಗೆ ಪಾತ್ರರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ
Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ
ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ
ಮೊಗವೀರ್ಸ್ ಬಹ್ರೈನ್ ಪ್ರೊ ಕಬಡ್ಡಿ;ತುಳುನಾಡ್ ತಂಡ ಪ್ರಥಮ,ಪುನಿತ್ ಬೆಸ್ಟ್ All ರೌಂಡರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಕಾರು ಢಿಕ್ಕಿ; ಸ್ಕೂಟರ್ ಸವಾರನಿಗೆ ಗಾಯ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.