ಬಂಟರ ಸಂಘ ಜ್ಞಾನ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ
Team Udayavani, Sep 4, 2018, 4:56 PM IST
ಮುಂಬಯಿ: ಹುಟ್ಟು-ಬದುಕಿನ ಬಗ್ಗೆ ನ್ಯಾಯ, ಧರ್ಮ, ಸಂಸ್ಥಾಪನೆಗೋಸ್ಕರ ಹೋರಾಟ ಮಾಡಿ, ದುಷ್ಟರನ್ನು ಸಂಹರಿಸಿ, ಶಿಷ್ಟರನ್ನು ರಕ್ಷಿಸಿದ ಅವತಾರ ಪುರುಷನೇ ಶ್ರೀ ಕೃಷ್ಣ. ಆತ ಶ್ರೀ ಮಹಾವಿಷ್ಣುವಿನ ಅಷ್ಠಾವತಾರವಾಗಿದ್ದು, ಮಾನವ ಬದುಕನ್ನು ಹೇಗೆ ರೂಪಿಸಬೇಕು ಎಂದು ಕಲಿಸಿಕೊಟ್ಟ ಆದರ್ಶ ಪುರುಷನಾಗಿದ್ದಾನೆ ಎಂದು ಬಂಟರ ಸಂಘದ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ನುಡಿದರು.
ಸೆ. 2ರಂದು ಬಂಟರ ಭವನದ ಶ್ರೀ ಮುಕ್ತಾನಂದ ಸಭಾಗೃಹದಲ್ಲಿ ಸಂಘದ ಜ್ಞಾನ ಮಂದಿರ ಸಮಿತಿಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಮುದ್ದುಕೃಷ್ಣ ಸ್ಪರ್ಧೆ, ಮೊಸರುಕುಡಿಕೆ, ತೆಂಗಿನಕಾಯಿ ಕಟ್ಟುವ ಹಾಗೂ ಇನ್ನಿತರ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಶ್ರೀ ಕೃಷ್ಣ, ಮಾನವನ ಸಂಬಂಧ, ಬಾಂಧವ್ಯಗಳಿಗೆ ಭಾಷ್ಯ ಬರೆದವನು. ಸಾವನ್ನು ಮರೆತು ಬದುಕನ್ನೆದುರಿಸುವ ಉಪದೇಶ ನೀಡಿದವನು. ಶ್ರೀ ಕೃಷ್ಣನ ಆದರ್ಶವನ್ನು ಪಾಲಿಸುವ ಕಾರ್ಯದಲ್ಲಿ ನಾವು ನಿರತರಾಗಬೇಕು. ಬಂಟರ ಸಂಘದ ಆವರಣದಲ್ಲಿರುವ ಶ್ರೀ ಮಹಾವಿಷ್ಣು ಮಂದಿರದಲ್ಲಿ ಪ್ರತೀ ವರ್ಷ ಶ್ರೀ ಕೃಷ್ಣ ಜನ್ಮಾಷ್ಟಮಿಯು ವಿಜೃಂಭಣೆಯಿಂದ ಜರಗುತ್ತಿದೆ. ಜ್ಞಾನಮಂದಿರದ ಕಾರ್ಯಾಧ್ಯಕ್ಷ ರವೀಂದ್ರನಾಥ ಎಂ. ಭಂಡಾರಿ ಅವರ ನೇತೃತ್ವದಲ್ಲಿ ಜರಗುತ್ತಿರುವ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪುಟಾಣಿಗಳು ಭಾಗವಹಿಸುತ್ತಿರುವುದನ್ನು ಕಂಡು ಸಂತಸವಾಗಿದೆ. ವರ್ಷದಿಂದ ವರ್ಷಕ್ಕೆ ಭಕ್ತಾಭಿಮಾನಿಗಳ ಸಂಖ್ಯೆ ಹೆಚ್ಚುತ್ತಿದ್ದು, ಶ್ರೀ ಮಹಾವಿಷ್ಣು ದೇವಸ್ಥಾನ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶೋಭಿಸುತ್ತಿದೆ ಎಂದು ನುಡಿದು, ರವೀಂದ್ರನಾಥ ಎಂ. ಭಂಡಾರಿ ಮತ್ತು ಅವರ ತಂಡದ ಪರಿಶ್ರಮಕ್ಕೆ ಕೃತಜ್ಞತೆ ಸಲ್ಲಿಸಿದರು.
ಉದ್ಘಾಟನ ಸಮಾರಂಭದ ವೇದಿಕೆಯಲ್ಲಿ ಜ್ಞಾನಮಂದಿರ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರನಾಥ ಎಂ. ಭಂಡಾರಿ, ಸಂಘದ ಉಪಾಧ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್ ಬಿ. ಶೆಟ್ಟಿ, ಜತೆ ಕೋಶಾಧಿಕಾರಿ ಗುಣಪಾಲ್ ಶೆಟ್ಟಿ ಐಕಳ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ್ ಹೆಗ್ಡೆ, ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಶರತ್ ವಿ. ಶೆಟ್ಟಿ, ಬಂಟರವಾಣಿಯ ಗೌರವ ಪ್ರಧಾನ ಸಂಪಾದಕ ಅಶೋಕ್ ಪಕ್ಕಳ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಪುಟಾಣಿಗಳಿಗಾಗಿ ಮುದ್ದು ಕೃಷ್ಣ ಸ್ಪರ್ಧೆ ನಡೆಯಿತು. ಸುಮಾರು 38 ಪುಟಾಣಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಸಿಟಿ ಪ್ರಾದೇಶಿಕ ಸಮಿತಿಯ ಅನ್ವಿ ಶೆಟ್ಟಿ ಪ್ರಥಮ, ಸಿಟಿ ಪ್ರಾದೇಶಿಕ ಸಮಿತಿಯ ಸಿದ್ದಿಕಾ ದ್ವಿತೀಯ, ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯ ಪ್ರತ್ವಿಕಾ ಶೆಟ್ಟಿ ತೃತೀಯ ಬಹುಮಾನ ಪಡೆದರು.
ತೀರ್ಪುಗಾರರಾಗಿ, ಚಲನಚಿತ್ರ ನಟ ಹರೀಶ್ ವಾಸು ಶೆಟ್ಟಿ, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆಯರುಗಳಾದ ಲತಾ ಪ್ರಭಾಕರ ಶೆಟ್ಟಿ, ಲತಾ ಜಯರಾಮ ಶೆಟ್ಟಿ ಸಹಕರಿಸಿದರು. ತೀರ್ಪುಗಾರರನ್ನು ಶಾಲು ಹೊದೆಸಿ, ಪುಷ್ಪಗುತ್ಛವನ್ನಿತ್ತು ಗೌರವಿಸಲಾಯಿತು. ಮಡಕೆ ಒಡೆಯುವ ಸ್ಪರ್ಧೆಯಲ್ಲಿ ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಜಯಂತ್ ಪಕ್ಕಳ, ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಕರುಣಾಕರ ಶೆಟ್ಟಿ, ಸಿಟಿ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷೆ ಕಲ್ಪನಾ ಶೆಟ್ಟಿ ವಿಜೇತರಾದರು.
ತೆಂಗಿನಕಾಯಿ ಕಟ್ಟುವ ಸ್ಪರ್ಧೆಯಲ್ಲಿ ಪ್ರಸಾದ್ ಶೆಟ್ಟಿ ಅಂಗಡಿಗುತ್ತು, ಡಾ| ಪ್ರಭಾಕರ ಶೆಟ್ಟಿ ಮೊದಲಾದವರು ಬಹುಮಾನ ಗೆದ್ದರು. ಜ್ಞಾನಮಂದಿರದ ಕಾರ್ಯಾಧ್ಯಕ್ಷ ರವೀಂದ್ರನಾಥ ಎಂ. ಭಂಡಾರಿ, ಶ್ರೀ ಕೃಷ್ಣ ಜನ್ಮಾಷ್ಟಮಿಯಲ್ಲಿ ಪಾಲ್ಗೊಂಡ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಆರಂಭದಲ್ಲಿ ಸರೋಜಾ ಶೆಟ್ಟಿ ಮುಂಡ್ಕೂರು ಪ್ರಾರ್ಥನೆಗೈದರು. ಬಂಟರವಾಣಿಯ ಗೌರವ ಪ್ರಧಾನ ಸಂಪಾದಕ ಅಶೋಕ್ ಪಕ್ಕಳ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಬಳಿಕ ಶ್ರೀ ಮಹಾವಿಷ್ಣು ಮಂದಿರದಲ್ಲಿ ಪ್ರಧಾನ ಅರ್ಚಕ ವಿದ್ವಾನ್ ಅರವಿಂದ ಬನ್ನಿಂತಾಯರು ಶ್ರೀ ಮಹಾವಿಷ್ಣು ದೇವರಿಗೆ ಹತ್ತು ಸಾವಿರ ತುಳಸಿ ಅರ್ಚನೆ, ಅಲಂಕಾರ ಪೂಜೆ, ಇತ್ಯಾದಿಗಳನ್ನು ನಡೆಸಿ, ರಾತ್ರಿ 11.45 ರ ಚಂದ್ರೋದಯ ಕಾಲದಲ್ಲಿ ಶ್ರೀ ಕೃಷ್ಣನಿಗೆ ಅಘÂìವನ್ನು ಅರ್ಪಿಸಿ ಮಹಾಪೂಜೆ ನಡೆಸಿದರು. ಸಂಘದ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಚಿತ್ರ-ವರದಿ: ಪ್ರೇಮನಾಥ್ ಶೆಟ್ಟಿ ಮುಂಡ್ಕೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.