ಪಟ್ನಾ ನಿವಾಸದಲ್ಲಿ ನಿವೃತ್ತ ಕಮಿಷನರ್,ಪತ್ನಿ ಕೊಲೆ;ನಾಲ್ವರು ವಶಕ್ಕೆ
Team Udayavani, Sep 7, 2018, 10:52 AM IST
ಪಟ್ನಾ : ನೀರಾವರಿ ಇಲಾಖೆಯ ನಿವೃತ್ತ ಆಯುಕ್ತ, 82ರ ಹರೆಯದ ಹರೇಂದ್ರ ಪ್ರಸಾದ್ ಮತ್ತು ಅವರ ಪತ್ನಿ ಸಾಧನಾ ದಾಸ್ ಗುಪ್ತಾ ಅವರು ನಗರದ ಬುದ್ಧ ಕಾಲಿನಿಯಲ್ಲಿನ ತಮ್ಮ ನಿವಾಸದ ಡ್ರಾಯಿಂಗ್ ರೂಮಲ್ಲಿ ನಿಗೂಢ ಸನ್ನಿವೇಶದಲ್ಲಿ ಸತ್ತು ಬಿದ್ದಿರುವುದು ನಿನ್ನೆ ಗುರುವಾರ ತಡರಾತ್ರಿ ಪತ್ತೆಯಾಗಿದೆ.
ಮೇಲ್ನೋಟಕ್ಕೆ ಇದು ಶಂಕಿತ ಕೊಲೆಯಂತೆ ಕಂಡು ಬರುತ್ತಿದೆ; ಎರಡೂ ಮೃತ ದೇಹಗಳ ಮೇಲೆ ಗಾಯಗಳು ಕಂಡುಬಂದಿವೆ. ಘಟನೆ ಸಂಬಂಧ ಪೊಲೀಸರು ನಾಲ್ವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇವರಲ್ಲಿ ಚಾಲಕ ಮತ್ತು ಮನೆ ಕೆಲಸದಾಕೆ ಸೇರಿದ್ದಾರೆ ಎಂದು ಎಸ್‌ಎಸ್‌ಪಿ ಮನು ಮಹಾರಾಜ್ ಹೇಳಿದ್ದಾರೆ.
ಮನೆಯ ಡ್ರಾಯಿಂಗ್ ರೂಮಲ್ಲಿ ಬಿದ್ದಿದ್ದ ದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾದಾಗ ವೈದ್ಯರು ಅದಾಗಲೇ ಸಾವು ಸಂಭವಿಸಿದ್ದಾಗಿ ಹೇಳಿದ್ದಾರೆ.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನೆಯ ನಿಗೂಢತೆಯನ್ನು ತಾವು ಬೇಗನೆ ಭೇದಿಸುವುದಾಗಿ ಪೊಲಿಸರು ಹೇಳಿದ್ದಾರೆ.
ಸಂಬಂಧಿಕರನ್ನು ಕೂಡ ಪ್ರಶ್ನಿಸಲಾಗುತ್ತಿದ್ದು ಕೇಸಿನ ವಿವರಗಳನ್ನು ಕಲೆ ಹಾಕಲಾಗುತ್ತಿದೆ. ಈ ಅವಳಿ ಸಾವು ಕಾಲನಿಯ ನಿವಾಸಿಗಳಲ್ಲಿ ಭಯ, ಆತಂಕ ಸೃಷ್ಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.