ಜಾಮೀನು ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Team Udayavani, Sep 7, 2018, 12:17 PM IST
ಬೆಂಗಳೂರು: ನಗರದ ಫರ್ಜಿ ಕೆಫೆಯಲ್ಲಿ ನಡೆದಿದ್ದ ಉದ್ಯಮಿ ಲೋಕನಾಥ್ ಅವರ ಪುತ್ರ ವಿದ್ವತ್ ಮೇಲಿನ ಹಲ್ಲೆ ಪ್ರಕರಣದ ಮೂರನೇ ಆರೋಪಿ ಶ್ರೀಕೃಷ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಗುರುವಾರ ತೀರ್ಪು ಕಾಯ್ದಿರಿಸಿತು.
ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬಿ.ಎ.ಪಾಟೀಲ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣದ ಸಂಬಂಧ ಗುರುವಾರ ವಾದ ಪ್ರತಿವಾದ ನಡೆಸಿದರು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ವಿದ್ವತ್ ಮೇಲೆ ಶ್ರೀಕೃಷ್ಣ ಹಲ್ಲೆ ನಡೆಸಿಲ್ಲ. ಪ್ರಕರಣದಲ್ಲಿ ಆತ ಯಾವುದೇ ತಪ್ಪು ಮಾಡಿಲ್ಲ. ಆದರೂ ದುರುದ್ದೇಶದಿಂದ ಪೊಲೀಸರು ತಮ್ಮ ಕಕ್ಷಿದಾರನನ್ನು 3ನೇ ಆರೋಪಿಯನ್ನಾಗಿಸಿದ್ದಾರೆ. ಹೀಗಾಗಿ, ಅವರಿಗೆ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಕೋರಿದರು.
ಇದಕ್ಕೆ ಆಕ್ಷೇಪಿಸಿದ ಸಿಸಿಬಿ ಪರ ವಕೀಲರು, ಆರೋಪಿ (ಅರ್ಜಿದಾರ) ತಪ್ಪು ಮಾಡಿ ತಲೆಮರೆಸಿಕೊಂಡಿದ್ದಾನೆ. ತಲೆಮರೆಸಿಕೊಂಡ ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಬಾರದು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಮೇಲಾಗಿ ಅರ್ಜಿದಾರ ಪ್ರಕರಣದಲ್ಲಿ ಭಾಗಿಯಾಗಿದ್ದು, ಪೊಲೀಸರ ವಿಚಾರಣೆ ಎದುರಿಸಬೇಕಿದೆ. ಆದ್ದರಿಂದ ಆತನಿಗೆ ಜಾಮೀನು ನೀಡಬಾರದು ಎಂದು ಕೋರಿದರು.
ನಗರದ ಫರ್ಜಿ ಕಫೆಯಲ್ಲಿ 2018ರ ಫೆಬ್ರವರಿ 17ರಂದು ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಈ ಸಂಬಂಧ ತನಿಖೆ ನಡೆಸಿ ಸಿಸಿಬಿ ಪೊಲೀಸರು ಆಧೀನ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದಲ್ಲಿ 3ನೇ ಆರೋಪಿಯಾಗಿರುವ ಶ್ರೀಕೃಷ್ಣಾ ಇದೀಗ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.