ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರ:ಶ್ರೀಕೃಷ್ಣ ಜನ್ಮಾಷ್ಟಮಿ 


Team Udayavani, Sep 7, 2018, 4:18 PM IST

0609mum15.jpg

ನವಿಮುಂಬಯಿ: ಸಣ್ಣ ಮಕ್ಕಳಲ್ಲಿ ನಾವು ದೇವರನ್ನು ಕಾಣಲು ಸಾಧ್ಯ. ಕಾರಣ ಅವರಿಗೆ ಏನೂ ತಿಳಿದಿರುವುದಿಲ್ಲ. ಅವರು ಮುಗ್ಧರಾಗಿರುತ್ತಾರೆ. ನಮ್ಮ ಜನ್ಮ ಜನ್ಮದ ಬಂಧು ಪರಮಾತ್ಮ. ಅವ ನಮಗೆ ಎಲ್ಲಾ ನೀಡುತ್ತಾನೆ. ನಾವು ಅವನಿಗೆ ಏನೂ ನೀಡಲು ಸಾಧ್ಯವಿಲ್ಲ. ಆದರೆ ಭಜನೆಯ ಮುಖಾಂತರ ಅವನನ್ನು ಒಲಿಸಲು ಸಾಧ್ಯ. ಭಜನೆ ಅಂದರೆ ಭಜಿಸು, ಜಪಿಸು, ನಾರಾಯಣ ಎಂದು ಅರ್ಥ. ನಾವು ಮಕ್ಕಳಿಗೆ ಸಣ್ಣ ಪ್ರಾಯದಲ್ಲೇ ಭಜನೆ ಕಲಿಸಿದರೆ ಅವರಿಗೆ ಭಗವಂತನಲ್ಲಿ ಭಕ್ತಿ ಹೆಚ್ಚುತ್ತದೆ. ನಾವು ನಮ್ಮ ಸಂಸ್ಕಾರ, ಸಂಸ್ಕೃತಿಯನ್ನು ಮಕ್ಕಳಿಗೆ ಕಲಿಸಬೇಕು. ನಾವು ಸಣ್ಣಗಿರುವಾಗ ಊರಿನಲ್ಲಿ ಸಂಜೆ ಭಜನೆ ಮಾಡದೆ ಊಟ ಹಾಕುತ್ತಿರಲಿಲ್ಲ. ಅದನ್ನು ಅನುಸರಿಸಿದ್ದರಿಂದ ಇಂದು ಈ ಕ್ಷೇತ್ರದಲ್ಲಿ ಅಧ್ಯಕ್ಷನಾಗಿದ್ದೇನೆ ಎಂದು ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರು ನುಡಿದರು.

ಸೆ. 2 ರಂದು ಶ್ರೀ ಕ್ಷೇತ್ರ ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಆಯೋಜಿಸಲಾಗಿದ್ದ ಭಕ್ತಿಗೀತೆ ಸ್ಪರ್ಧೆಯ ಬಹುಮಾನ ವಿತರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂದು ಹರೀಶ್‌ ಶೆಟ್ಟಿ ಪಡುಬಿದ್ರೆ ಮತ್ತು ಸಂತೋಷ್‌ ಶೆಟ್ಟಿ ಅವರ ಮುತುವರ್ಜಿಯಿಂದ ಭಜನಾ ಸ್ಪರ್ಧೆ ಆಯೋಜಿಸಿದ್ದೇವೆ. ಅವರೀರ್ವರನ್ನೂ ನಾವು ಅಭಿನಂದಿಸುತ್ತಿದ್ದೇನೆ. ಎಲ್ಲ ಸ್ಪರ್ಧಿಗಳು ಉತ್ತಮವಾಗಿ ಹಾಡಿದ್ದಾರೆ. ತಾಯಿ ಮೂಕಾಂಬಿಕೆಯ ಅನುಗ್ರಹ ಸದಾ ಮಕ್ಕಳ ಮೇಲಿರಲಿ ಎಂದು ನುಡಿದರು.

ವೇದಿಕೆಯಲ್ಲಿ ಉಪಾಧ್ಯಕ್ಷ ನಂದಿಕೂರು ಜಗದೀಶ್‌ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುರೇಶ್‌ ಎಸ್‌. ಕೋಟ್ಯಾನ್‌, ಜತೆ ಕೋಶಾಧಿಕಾರಿ ದೆಪ್ಪುಣಿಗುತ್ತು ಚಂದ್ರಹಾಸ್‌ ಶೆಟ್ಟಿ, ಸದಸ್ಯರಾದ ಹರೀಶ್‌ ಕುರ್ಕಾಲ್‌, ಹರೀಶ್‌ ಶೆಟ್ಟಿ ಪಡುಬಿದ್ರೆ, ದೇವಾಲಯದ ಹಿತೈಷಿಗಳಾದ ಶಂಕರ್‌ ಶೆಟ್ಟಿ, ಉಪಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್‌ ಆರ್‌. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಆಶಾ ವಿ. ಶೆಟ್ಟಿ ಉಪಸ್ಥಿತರಿದ್ದರು.

ಮಹಿಳಾ ವಿಭಾಗದ ಸದಸ್ಯೆಯರು ಪ್ರಾರ್ಥನೆಗೈದರು. ಸುರೇಶ್‌ ಎಸ್‌. ಕೋಟ್ಯಾನ್‌ ಸ್ವಾಗತಿಸಿದರು. ಭಕ್ತಿ ಸಂಗೀತ ಸ್ಪರ್ಧೆಯ ವಿಜೇತರಿಗೆ ಬಹುಮಾನದ ಪ್ರಾಯೋಜಕತ್ವ ವಹಿಸಿದ್ದ ಹರೀಶ್‌ ಕುರ್ಕಾಲ್‌ ಅವರನ್ನು ಗೌರವಿಸಲಾಯಿತು. ಐದು ವರ್ಷದಿಂದ 8 ವರ್ಷದೊಳಗಿನ ಮಕ್ಕಳ ವಿಭಾಗದ ಸ್ಪರ್ಧೆಯಲ್ಲಿ ಆದಿತ್ಯ ಭಟ್‌ ಪ್ರಥಮ, ಸ್ಪರ್ಶ್‌ ಆಳ್ವ ದ್ವಿತೀಯ, ಇನ್ಶಿಕಾ ದೇವಾಡಿಗ ತೃತೀಯ ಹಾಗೂ 9 ರಿಂದ 15 ವರ್ಷದೊಳಗಿನ ಮಕ್ಕಳ ವಿಭಾಗದಲ್ಲಿ ನಿತ್ಯಶ್ರೀ ಜಯರಾಮನ್‌ ಪ್ರಥಮ, ಅದಿತಿ ಶೆಟ್ಟಿ ದ್ವಿತೀಯ, ಆಶ್ನಾ ಪಿ. ಶೆಟ್ಟಿ ತೃತೀಯ ಸ್ಥಾನ ಪಡೆದರು. ವಿಜೇತರಿಗೆ ಹರೀಶ್‌ ಕುರ್ಕಾಲ್‌ ಅವರ ವತಿಯಿಂದ ನಗದು ಶಾಲು ಹೊದೆಸಿ, ಸ್ಮರಣಿಕೆ, ನಗದು ಬಹುಮಾನವದೊಂದಿಗೆ ಗೌರವಿಸಲಾಯಿತು.

ತೀರ್ಪುಗಾರರಾಗಿ ಸಹಕರಿಸಿದ ಗಾಯಕರುಗಳಾದ ಚಂದ್ರಹಾಸ ರೈ ಪುತ್ತೂರು, ಮೋಹನ್‌ದಾಸ್‌ ರೈ, ಆಶಾ ಕುಲಕರ್ಣಿ ಅವರನ್ನು ಗೌರವಿಸಲಾಯಿತು. ಸಹಕರಿಸಿದ ಎಲ್ಲರನ್ನು ಗೌರವಿಸಲಾಯಿತು.

ಜಗದೀಶ್‌ ಶೆಟ್ಟಿ ಅವರು ಮಾತನಾಡಿ, ನಮ್ಮ ದೇವಾಲಯ ಆರಂಭಗೊಂಡಂದಿನಿಂದ ನಮ್ಮ ಹಿಂದು ಸಂಸ್ಕೃತಿಯ ಎಲ್ಲಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದೇವೆ.  ಈ ವರ್ಷ ಪ್ರಥಮ ಬಾರಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮಕ್ಕಳಿಗೆ ಭಕ್ತಿಗೀತೆಗಳ ಸ್ಪರ್ಧೆ ಆಯೋಜಿಸಿದ್ದೇವೆ. ನಮ್ಮ ಸಂಸ್ಕೃತಿಯನ್ನು ಮಕ್ಕಳಿಗೆ ತಿಳಿಸಬೇಕು. ಅದಕ್ಕಾಗಿ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಆದ್ದರಿಂದ ಪಾಲಕರು ಮಕ್ಕಳನ್ನು ಪ್ರೋತ್ಸಾಹಿಸಬೇಕು ಎಂದು ನುಡಿದರು.

ಸುರೇಶ್‌ ಕೋಟ್ಯಾನ್‌ ಅವರು ಮಾತನಾಡಿ, ನಾವು ನಮ್ಮ ದೇವಾಲಯದಲ್ಲಿ ಹಿಂದೂ ಧರ್ಮದ ಪ್ರತಿಯೊಂದು ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುತ್ತಾ ಬಂದಿದ್ದೇವೆ. ಇಂದು ಮೊದಲ ಬಾಸಿಗೆ ಈ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಪಾಲಕರು ಮಕ್ಕಳನ್ನು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರೇರೇಪಿಸಬೇಕು. ಕಾರ್ಯಕ್ರಮವನ್ನು ಆಯೋಜಿಸಿದ ಎಲ್ಲರು ಅಭಿನಂದನಾರ್ಹರು ಎಂದರು.

ಭಕ್ತಿಗೀತೆ ಮತ್ತು ಶ್ರೀಕೃಷ್ಣ ವೇಷದಲ್ಲಿ ಪಾಲ್ಗೊಂಡ ಎಲ್ಲಾ ಮಕ್ಕಳಿಗೆ ಪ್ರೋತ್ಸಾಹಕರ ಬಹುಮಾನ ನೀಡಲಾಯಿತು. ಹರೀಶ್‌ ಶೆಟ್ಟಿ ಪಡುಬಿದ್ರೆ ಕಾರ್ಯಕ್ರಮ ನಿರ್ವಹಿಸಿ ವಿಜೇತರ ಯಾದಿಯನ್ನು ಘೋಷಿಸಿದರು. ದೆಪ್ಪುಣಿಗುತ್ತು ಚಂದ್ರಹಾಸ ಶೆಟ್ಟಿ ವಂದಿಸಿದರು. ಬೆಳಗ್ಗೆಯಿಂದ ಶ್ರೀಕ್ಷೇತ್ರದಲ್ಲಿ ವಿವಿಧ ಪೂಜೆ, ರಾತ್ರಿ ಮಂಡಳಿಯವರಿಂದ ಭಜನೆ, ಕುಣಿತ ಭಜನೆ, ರಾತ್ರಿ ಚಂದ್ರೋದಯಕ್ಕೆ ಶ್ರೀ ಕೃಷ್ಣ ದೇವರಿಗೆ ಅಘÂì ಅರ್ಪಣೆ, ಮಹಾಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ, ಆನಂತರ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರ ವತಿಯಿಂದ ಅನ್ನಪ್ರಸಾದ ವಿತರಣೆ ನಡೆಯಿತು.

ದೇವಾಲಯದ ಪ್ರಧಾನ ಅರ್ಚಕರಾದ ಗುರುಪ್ರಸಾದ್‌ ಭಟ್‌ ಅವರ ಪೌರೋಹಿತ್ಯದಲ್ಲಿ ದೇವತ ಕಾರ್ಯ ಜರಗಿತು. ದಿವಾಕರ್‌ ಶೆಟ್ಟಿ ಮತ್ತು ಬಳಗದವರು ಶ್ರೀ ಕೃಷ್ಣ ದೇವರ ಮಂಟಪವನ್ನು ಶೃಂಗರಿಸಿದರು. ದೇವಾಲಯದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರ ಮುಂದಾಳತ್ವದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಸಮಿತಿಯ ಸದಸ್ಯರು, ಶ್ರೀ ಮೂಕಾಂಬಿಕಾ ಚಾರಿಟೇಬಲ್‌ ಮಂಡಳ, ಶ್ರೀ ಮೂಕಾಂಬಿಕಾ ಧರ್ಮಶಾಸ್ತ ಸೇವಾ ಸಂಸ್ಥೆ, ಉಪ ಸಮಿತಿಯ ಸದಸ್ಯರು, ಮಹಿಳಾ ವಿಭಾಗದವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು.

ಟಾಪ್ ನ್ಯೂಸ್

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.