ಮುಖ್ಯಮಂತ್ರಿ ಬಳಿಗೆ ನಿಯೋಗ ತೆರಳಲು ತುರ್ತು ಸಭೆ ನಿರ್ಣಯ
Team Udayavani, Sep 8, 2018, 6:05 AM IST
ಮಡಿಕೇರಿ: ಪ್ರಾಕೃತಿಕ ಕೋಪದಿಂದ ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ಆಸ್ತಿಪಾಸ್ತಿಗಳಿಗೆ ವ್ಯಾಪಕ ಹಾನಿಯಾಗಿದ್ದು, ಪರಿಹಾರ ಕಾರ್ಯಗಳಿಗಾಗಿ ಹೆಚ್ಚಿನ ಅನುದಾನ ಒದಗಿಸುವಂತೆ ಸರ್ಕಾರವನ್ನು ಕೋರಲು ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಲು ನಗರಸಭೆಯ ತುರ್ತು ಸಭೆಯಲ್ಲಿ ನಿರ್ಧರಿಸಲಾಯಿತು.
ನಗರಸಭೆಯ ಸಭಾಂಗಣದಲ್ಲಿ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಅಧ್ಯಕ್ಷತೆಯಲ್ಲಿ ಆಯೋಜಿತ ತುರ್ತು ಸಭೆಯಲ್ಲಿ, ನಗರ ವ್ಯಾಪ್ತಿಯಲ್ಲಿ ನಡೆದ ಹಾನಿಯ ಬಗ್ಗೆ ಗಂಭೀರವಾಗಿ ಚರ್ಚಿಸಲಾುತಲ್ಲದೆ, ಭಷ್ಯದಲ್ಲಿ ಇಂತಹ ದುರ್ಘಟನೆಗಳು ಸಂಭಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಲಾಯಿತು.
ಕುಸಿದ 80 ಮನೆಗಳು- ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಅವರು, ಪ್ರಾಕೃತಿಕ ಕೋಪದಿಂದ ನಗರ ವ್ಯಾಪ್ತಿಯಲ್ಲಿ ಸಂಭಸಿರುವ ಆಸ್ತಿಪಾಸ್ತಿ ಹಾನಿಯ ಕುರಿತು ಸಭೆಗೆ ಮಾತಿ ನೀಡಿ, ನಗರದಲ್ಲಿ 80 ಮನೆಗಳು ಸಂಪೂರ್ಣ ಕುಸಿದಿದ್ದು, 380 ಮನೆಗಳು ವಾಸ ಮಾಡಲು ಸಾಧ್ಯವಾಗದಷ್ಟು ಹಾನಿಗೊಳಗಾಗಿದೆ ಎಂದು ತಿಳಿಸಿದರು.
ಈ ಸಂದರ್ಭ ಪ್ರಬಾರ ಪೌರಾಯುಕ್ತ ಗೋಪಾಲಕೃಷ್ಣ, ನಗರ ವ್ಯಾಪ್ತಿಯಲ್ಲಿ 10 ಕೋಟಿ ರೂ. ಆಸ್ತಿ ಪಾಸ್ತಿ ಹಾನಿಯಾಗಿರುವ ಬಗ್ಗೆ ಪ್ರಾಥುಕ ವರದಿ ಸಲ್ಲಿಸಲಾಗಿದೆಯೆಂದು ತಿಳಿಸಿದರು, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸದಸ್ಯರು, ಹತ್ತು ಕೋಟಿಯಷ್ಟೆ ಹಾನಿಯಾಗಿದೆಯೆಂದು ವರದಿ ಸಲ್ಲಿಸುವುದು ಸಮಂಜಸವಲ್ಲ. ಇದಕ್ಕೂ ಹಾನಿ ಸಂಭಸಿದೆ. ಈ ನ್ನೆಲೆಯಲ್ಲಿ ಹಾನಿಯ ಸಮಗ್ರ ವರದಿ ತಯಾರಿಸಿ, ನಷ್ಟದ ಅಂದಾಜು ಪಟ್ಟಿಯೊಂದಿಗೆ ಮುಖ್ಯ ಮಂತ್ರಿಗಳನ್ನು ನಿಯೋಗ ತೆರಳಿ ಭೇಟಿಯಾಗಿ ಅನುದಾನಕ್ಕೆ ಕೋರಿಕೆ ಸಲ್ಲಿಸುವುದು ಅತ್ಯವಶ್ಯವೆಂದರು. ಕೇಂದ್ರದ ರಾಷ್ಟ್ರೀಯ ಪತ್ತು ನಿರ್ವಹಣಾ ಮಂಡಳಿುಂದಲೂ ನಗರ ವ್ಯಾಪ್ತಿಯಲ್ಲಿನ ಅತಿವೃ ಹಾನಿಗೆ ಸೂಕ್ತ ಪರಿಹಾರವನ್ನು ಪಡೆಯುವ ಮೂಲಕ ಕಾಯೋನ್ಮುಖವಾಗುವಂತೆ ಸಲಹೆ ನೀಡಿದರು.
ಬೆಟ್ಟದ ಮೇಲೆ ಮನೆ ನಿರ್ಮಾಣಕ್ಕೆ ನಿರ್ಬಂಧ- ಮಡಿಕೇರಿ ನಗರ ವ್ಯಾಪ್ತಿಯ ಬೆಟ್ಟ ಪ್ರದೇಶಗಳ ಮೇಲೆ ಮುಂಜಾಗ್ರತಾ ಕ್ರಮವಾಗಿ ಮನೆಗಳ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡದಂತೆ ಹಾಗೂ ಅನಧಿಕೃತ ಮನೆಗಳ ನಿರ್ಮಾಣಕ್ಕೆ ತಡೆಯೊಡ್ಡುವ ಮಹತ್ವದ ನಿರ್ಣಯಗಳನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.
ಪ್ರಸ್ತುತ ನಗರ ವ್ಯಾಪ್ತಿಯಲ್ಲಿ ಇರುವ ಅನಧಿಕೃತ ಮನೆಗಳನ್ನು ಗುರುತಿಸಿ, ಮುಂಬರುವ ದಿನಗಳಲ್ಲಿ ಅವುಗಳಲ್ಲಿ ಯಾರೂ ವಾಸಿಸದಂತೆ ನೋಡಿಕೊಳ್ಳುವ ಸಲುವಾಗಿ ಅವುಗಳನ್ನು ತೆರವುಗೊಳಿಸುವ ನಿರ್ಧಾರವನ್ನ ಸಭೆಯಲ್ಲಿ ತಳೆಯಲಾಯಿತು.
ಸದಸ್ಯರ ಅಸಮಾಧಾನ-ಮಳೆಹಾನಿಂದ ಸಂಕಷ್ಟಕ್ಕೊಳಗಾದ ಮಂದಿಗೆ ಅಗತ್ಯ ನೆರನೊಂದಿಗೆ, ಪರಿಹಾರ ಕಾರ್ಯಗಳನ್ನು ನಡೆಸಬೇಕಾಗಿದ್ದ ನಗರಸಭೆ ಸಂತ್ರಸ್ತರಿಗೆ ಪರಿಹಾರದ ಕಿಟ್‌ಗಳನ್ನು ತರಿಸುವ ಹೊಣೆಯನ್ನು ವಹಿಸಿಕೊಂಡು, ಅದನ್ನು ಸಮರ್ಪಕವಾಗಿ ನಿಭಾುಸದಿರುವ ಬಗ್ಗೆ ಸದಸ್ಯರು ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದರಲ್ಲದೆ, ನಿರಾತರಿಗೆ ಒದಗಿಸುವ ತಾತ್ಕಾಲಿಕ ಶೆಡ್‌ನ ಗುಣಮಟ್ಟದ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದರು. ಸಭೆಯಲ್ಲಿ ಉಪಾಧ್ಯಕ್ಷ ಟಿ.ಎಸ್.ಪ್ರಕಾಶ್, ಸ್ಥಾಯಿ ಸಮಿತಿ ಅಧ್ಯಕ್ಷ ಪಿ.ಟಿ.ಉಣ್ಣಿಕೃಷ್ಣ, ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ
Kasaragod: ನಗ-ನಗದು ಕಳವು; ಆರೋಪಿ ಬಂಧನ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್ ಮೂಲಕ ನಕ್ಸಲ್ ಸೋಮನ್ ವಿಚಾರಣೆ
Kasaragod: 300 ಪವನ್ ಚಿನ್ನ, 1 ಕೋಟಿ ರೂ. ಕಳವು ಕರ್ನಾಟಕ, ತಮಿಳುನಾಡಿಗೆ ತನಿಖೆ ವಿಸ್ತರಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು
BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು
Adani ವಿದ್ಯುತ್ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್ ರೆಡ್ಡಿ
Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ
IFFI 2024; ಟಾಕ್ಸಿಕ್ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್ ಮಸ್ಸೆಗೆ ವಾರ್ಷಿಕ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.