ಎಲೆಕ್ಟ್ರಿಕ್ ವಾಹನಕ್ಕೆ ಪ್ರತ್ಯೇಕ ನೀತಿ
Team Udayavani, Sep 8, 2018, 6:00 AM IST
ನವದೆಹಲಿ: ದೇಶದ ಸಾರಿಗೆ ನೀತಿಯಲ್ಲಿ ಮಹತ್ವದ ಬದಲಾವಣೆ ಮುನ್ಸೂಚನೆಯನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದು, ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳಿಗೆ ಸಂಬಂಧಿಸಿದಂತೆ ನೀತಿ ರೂಪಿಸಲಾಗುತ್ತದೆ ಎಂದಿದ್ದಾರೆ. ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಜಾಗತಿಕ ಸಾರಿಗೆ ಸಮ್ಮೇಳನ ಮೂವ್ ಉದ್ದೇಶಿಸಿ ಮಾತನಾಡಿದ ಮೋದಿ, ಹವಾಮಾನ ವೈಪರೀತ್ಯದ ವಿರುದ್ಧ ನಮ್ಮ ಹೋರಾಟದಲ್ಲಿ ಶುದ್ಧ ಇಂಧನ ಬಳಸಿ ಸ್ವತ್ಛ ಸಾರಿಗೆ ಸೌಲಭ್ಯ ಒದಗಿಸುವುದೇ ಆದ್ಯತೆಯದ್ದಾಗಿದೆ. ಇದರಿಂದಾಗಿ ನಮ್ಮ ಜನರ ಜೀವನ ಮಟ್ಟವೂ ಸುಧಾರಿಸಲಿದೆ. ಇದಕ್ಕಾಗಿ ಸಾರ್ವಜನಿಕ ಸಾರಿಗೆಗೆ ಒತ್ತು ನೀಡಬೇಕಿದೆ ಎಂದಿದ್ದಾರೆ.
ನಮ್ಮ ಆರ್ಥಿಕತೆ ವೃದ್ಧಿಸುತ್ತಿದೆ. ಅದಕ್ಕೆ ಅನುಗುಣವಾಗಿ ನಾವು ಕ್ಲೀನ್ ಕಿಲೋಮೀಟರ್ ಎಂಬ ಕಲ್ಪನೆಯನ್ನು ಹುಟ್ಟುಹಾಕುತ್ತಿದ್ದೇವೆ ಎಂದು ಮೋದಿ ಹೇಳಿದ್ದಾರೆ. ನೀತಿ ಆಯೋಗ ಇದೇ ಮೊದಲ ಬಾರಿಗೆ ಜಾಗತಿಕ ಸಾರಿಗೆ ಸಮ್ಮೇಳನವನ್ನು ನಡೆಸುತ್ತಿದ್ದು, ಸಾರಿಗೆ ವಲಯದಲ್ಲಿ ಮಾಲಿನ್ಯ ನಿರ್ಮೂಲನೆ ಕುರಿತ ಚರ್ಚೆಯೇ ಇದರ ಪ್ರಮುಖ ಆದ್ಯತೆಯಾಗಿದೆ. ಅಲ್ಲದೆ ಮುಂದಿನ ಐದು ವರ್ಷಗಳಲ್ಲಿ ಶೇ. 15ರಷ್ಟು ಎಲೆಕ್ಟ್ರಿಕ್ ವಾಹನ ಮಾರಾಟ ಹೆಚ್ಚಳ ಗುರಿಯನ್ನು ಸರ್ಕಾರ ಹಾಕಿಕೊಂಡಿದೆ. ಕಳೆದ ವರ್ಷ ಕೇವಲ 2 ಸಾವಿರ ಎಲೆಕ್ಟ್ರಿಕ್ ವಾಹನಗಳ ಮಾರಾಟವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.