ಪ್ರತಿಭೆಗಳಿಗೆ ಪ್ರೋತ್ಸಾಹ ಅಗತ್ಯ: ಶಾಸಕ ಪಾಟೀಲ
Team Udayavani, Sep 8, 2018, 10:15 AM IST
ಅಫಜಲಪುರ: ಗ್ರಾಮೀಣ ಭಾಗದ ಮಕ್ಕಳಲ್ಲಿ ಸಾಕಷ್ಟು ಪ್ರತಿಭೆ ಇದ್ದು, ಯಾವುದೇ ತರಬೇತಿ ಇಲ್ಲದಿದ್ದರೂ ಎಲ್ಲದರಲ್ಲೂ ಪರಿಣಿತಿ ಪಡೆದಿರುತ್ತಾರೆ. ಅವರಲ್ಲಿ ಪ್ರತಿಭೆ ಕೊರತೆ ಇಲ್ಲ, ಪ್ರೋತ್ಸಾಹದ ಕೊರತೆ ಇದೆ ಎಂದು ಶಾಸಕ ಎಂ.ವೈ. ಪಾಟೀಲ ಹೇಳಿದರು.
ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಉನ್ನತ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ, ಕಲಾ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿನ ಮಕ್ಕಳಲ್ಲಿ ಬಹಳಷ್ಟು ಕ್ರಿಯಾಶೀಲತೆ, ಪ್ರತಿಭೆ ಇರುತ್ತದೆ. ಅವರಲ್ಲಿರುವ ಪ್ರತಿಭೆ ಗುರುತಿಸಿ
ಪ್ರೋತ್ಸಾಹಿಸಬೇಕು. ಪಾಲಕರು ಮತ್ತು ಶಿಕ್ಷಕರು ಮಕ್ಕಳಲ್ಲಿರುವ ಕ್ರಿಯಾತ್ಮಕತೆ ಗುರುತಿಸುವ ಕೆಲಸ ಮಾಡುವುದರ ಜೊತೆಗೆ ಮಕ್ಕಳು ಯಾವ ವಿಷಯದಲ್ಲಿ ಆಸಕ್ತಿ ಹೊಂದಿರುತ್ತಾರೋ ಅದರಲ್ಲಿ ಮುಂದುವರಿಯಲು ಸಹಕಾರ ನೀಡಿ ಎಂದು ಹೇಳಿದರು.
ಜಿ.ಪಂ ಉಪಾಧ್ಯಕ್ಷೆ ಶೋಭಾ ಸಿರಸಗಿ, ತಾ.ಪಂ ಉಪಾಧ್ಯಕ್ಷ ಭೀಮಾಶಂಕರ ಹೊನ್ನಕೇರಿ, ಮಳೇಂದ್ರ ಮಠದ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು, ಬಿಇಒ ವಸಂತ ರಾಠೊಡ ಮಾತನಾಡಿದರು. ತಾ.ಪಂ ಅಧ್ಯಕ್ಷೆ ರುಕ್ಮಿಣಿ ಜಮಾದಾರ ಅಧ್ಯಕ್ಷತೆ ವಹಿಸಿದ್ದರು. ಸ್ಥಾಯಿ ಸಮಿತಿ ಅಧ್ಯಕ್ಷ ಶಿವಶರಣಪ್ಪ ಪಡಶೆಟ್ಟಿ, ಸಿದ್ದಾರ್ಥ ಬಸರಿಗಿಡ, ಶರಣು ಕುಂಬಾರ, ದೇವೇಂದ್ರ ಜಮಾದಾರ, ಸಿದ್ದರಾಮ ಗುಣಾರಿ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್
Pro Kabaddi: ಯೋಧಾಸ್‌ಗೆ ತಲೈವಾಸ್ ಆಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.