ನವಜಾತ ಶಿಶುವಿನ ಶ್ರವಣ ಪರೀಕ್ಷೆ ಕಡ್ಡಾಯ
Team Udayavani, Sep 8, 2018, 11:19 AM IST
ಮೈಸೂರು: ನವಜಾತ ಶಿಶುಗಳು ಗಂಭೀರ ಸ್ವರೂಪದ ಶ್ರವಣದೋಷದಿಂದ ಬಳಲುವುದನ್ನು ತಪ್ಪಿಸಲು ಆರಂಭದಲ್ಲಿಯೇ ಸಮಸ್ಯೆಯನ್ನು ಗುರುತಿಸಬೇಕಾದ ಅಗತ್ಯತೆ ಇದೆ ಎಂದು ಕಾಕ್ಲಿಯರ್ ಗ್ಲೋಬಲ್ ಹಿಯರಿಂಗ್‌ನ ರಾಯಭಾರಿ, ಅಂತಾರಾಷ್ಟ್ರೀಯ ಕ್ರಿಕೆಟಿಗ ಬ್ರೆಟ್ ಲೀ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರವಣದೋಷದಿಂದ ಆಗುವ ನಷ್ಟದ ಅಂದಾಜು ಊಹೆಗೆ ನಿಲುಕದ್ದು, ಒಂದು ಅಂದಾಜಿನ ಪ್ರಕಾರ ಪ್ರಪಂಚದಲ್ಲಿ 466 ದಶಲಕ್ಷ ಜನರು ಶ್ರವಣದೋಷ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆ ಕುರಿತು ಗಮನಸೆಳೆಯಲು ನಾನು ತೊಡಗಿಕೊಂಡಿದ್ದೇನೆ. ಕಿವುಡುತನ ನಿವಾರಣೆಗೆ ಈಗ ತಂತ್ರಜ್ಞಾನ ನೆರವಾಗುತ್ತಿದೆ. ಕಾಕ್ಲಿಯರ್‌ನ ಒಟ್ಟು ಗುರಿ ಜನರಿಗೆ ಅವರ ಬದುಕನ್ನು ಮರಳಿಸುವುದೇ ಆಗಿದೆ ಎಂದರು.
ಪೋಷಕರು ಮತ್ತು ಕುಟುಂಬ ಸದಸ್ಯರು ಕಿವುಡುತನದ ಯಾವುದೇ ಸಣ್ಣ ಚಿಹ್ನೆಗಳನ್ನು ನಿರ್ಲಕ್ಷಿಸಬಾರದು ಮತ್ತು ಅತ್ಯಂತ ತುರ್ತುಕ್ರಮ ತೆಗೆದುಕೊಳ್ಳಬೇಕು. ಒಂದು ಇಂಪ್ಲಾಂಟ್ ಹೇಗೆ ಒಬ್ಬ ವ್ಯಕ್ತಿಯನ್ನು ಮೌನದಿಂದ ಶಬ್ದದೆಡೆಗೆ ಕೊಂಡೊಯ್ಯುತ್ತದೆ ಎಂಬುದನ್ನು ನಾನು ವೈಯಕ್ತಿಕವಾಗಿ ನೋಡಿದ್ದೇನೆ. ಇದೊಂದು ಜೀವನ ಬದಲಾಗುವ ಕ್ಷಣವಾಗಿದೆ ಎಂದರು.
ವಿಶ್ವ ಆರೋಗ್ಯ ಸಂಸ್ಥೆಯ ವರದಿ ಪ್ರಕಾರ ವಿಶ್ವದ ಜನಸಂಖ್ಯೆಯ ಶೇ.5ರಷ್ಟು ಮಂದಿ ಶ್ರವಣದೋಷದಿಂದ ಬಳಲುತ್ತಿದ್ದು, ಇವರಲ್ಲಿ 34 ದಶಲಕ್ಷ ಮಕ್ಕಳೂ ಸೇರಿದ್ದಾರೆ. ಇದೇ ಸ್ಥಿತಿ ಮುಂದುವರಿದರೆ 2050ರ ವೇಳೆಗೆ 900 ದಶಲಕ್ಷ ಜನರು ಶ್ರವಣದೋಷದ ತೊಂದರೆಗೆ ಒಳಗಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.
ಸಾಫ್ಟ್ವೇರ್ ಅಭಿವೃದ್ಧಿ: ಕೇರಳದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ 66 ಸರ್ಕಾರಿ ಹೆರಿಗೆ ಆಸ್ಪತ್ರೆಗಳಲ್ಲಿ ನವಜಾತ ಶಿಶುಗಳಿಗೆ ಶ್ರವಣದೋಷ ಪರೀಕ್ಷೆ ಮಾಡಲಾಗುತ್ತಿದೆ. ಕೇರಳ ಸಾಮಾಜಿಕ ಭದ್ರತಾ ಮಿಷನ್ ಇದಕ್ಕಾಗಿ ಸಾಫ್ಟ್ವೇರ್ ಅಭಿವೃದ್ಧಿ ಪಡಿಸಿದೆ. ಈ ಮಾಹಿತಿಯನ್ನು ಜಿಲ್ಲಾ ಮಟ್ಟದ ಸಮಿತಿಗಳು ಸೇರಿ ಇತರೆ ಸಂಸ್ಥೆಗಳ ಜೊತೆಗೆ ಹಂಚಿಕೆ ಮಾಡಿಕೊಳ್ಳಲು, ಮುಂದುವರಿದ ಚಿಕಿತ್ಸೆಯನ್ನು ನೀಡಲು ಸಹಕಾರಿಯಾಗಲಿದೆ ಎಂದರು.
ಡಾ.ದತ್ತಾತ್ರಿ ಮಾತನಾಡಿ, ಭಾರತದಲ್ಲಿ ಶ್ರವಣದೋಷ ಸಮಸ್ಯೆ ಕುರಿತಂತೆ ಸಾರ್ವಜನಿಕ ಅರಿವು ಕಡಿಮೆ ಇದೆ. ಈ ಹಿಂದೆ ಮಕ್ಕಳಲ್ಲಿ ಈ ದೋಷ ಕಂಡುಬಂದಾಗ, ಅವರು ಮೂಕಭಾಷೆ ಕಲಿತು ಅದರಲ್ಲಿ ಪರಿಣಿತಿ ಹೊಂದಿ ಧ್ವನಿಯಿಲ್ಲದ ಬದುಕಿಗೆ ಹೊಂದಿಕೊಳ್ಳಬೇಕಾಗಿತ್ತು.
ಆದರೆ, ಮುಂದಿನ ದಿನಗಳಲ್ಲಿ ಆ ಸಮಸ್ಯೆ ಇರುವುದಿಲ್ಲ. ಶಿಶುವಿನ ಜನನವಾದ ಮೊದಲ ತಿಂಗಳಲ್ಲೇ ಅಥವಾ 12 ತಿಂಗಳ ಒಳಗೆ ಪರೀಕ್ಷೆ ಮಾಡಿಸುವುದು ಉತ್ತಮ. ಈ ಹಂತದಲ್ಲಿ ಕಾಕ್ಲಿಯರ್ ಇಂಪ್ಲಾಂಟ್ ಮಾಡುವುದು ಕೂಡಾ ಸಮಸ್ಯೆಯನ್ನು ಪರಿಹರಿಸುವಲ್ಲಿ ಸಹಕಾರಿಯಾಗಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.