ಶಾಲೆ ಕಾಲೇಜು ಸಂಪೂರ್ಣ ಬಂದ್
Team Udayavani, Sep 11, 2018, 6:35 AM IST
ಬೆಂಗಳೂರು : ಭಾರತ್ ಬಂದ್ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದರಿಂದ ವಿದ್ಯಾರ್ಥಿಗಳಿಗೆ ಅಥವಾ ಶಿಕ್ಷಣ ಸಂಸ್ಥೆಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ ಮತ್ತು ಶಿಕ್ಷಣ ಸಂಸ್ಥೆಗಳು ಪರೋಕ್ಷವಾಗಿ ಬಂದ್‌ಗೆ ಬೆಂಬಲ ನೀಡಿದಂತಾಗಿದೆ.
ಸರ್ಕಾರಿ ಶಾಲೆಗಳ ಸಹಿತವಾಗಿ ರಾಜ್ಯದ ಸಿಬಿಎಸ್‌ಇ ಹಾಗೂ ಐಸಿಎಸ್‌ಇ ಶಾಲಾಡಳಿತ ಮಂಡಳಿಗಳು ಭಾನುವಾರ ಸಂಜೆಯೇ ಸೋಮವಾರದ ರಜೆ ಖಚಿತಪಡಿಸಿದ್ದರಿಂದ ಪಾಲಕ-ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿಲ್ಲ. ಖಾಸಗಿ ಶಾಲಾಡಳಿತ ಮಂಡಳಿಗಳು ತರಗತಿ ಕೊಠಡಿ ಸಹಿತವಾಗಿ ಶಾಲೆಯ ಪರಿಕರಗಳ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಭಾನುವಾರವೇ ತೆಗೆದುಕೊಂಡಿದ್ದರು.
ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ, ಮಂಗಳೂರು, ರಾಯಚೂರು, ಬೆಳಗಾವಿ, ಬಳ್ಳಾರಿ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಚಾಮರಾಜನಗರ, ಶಿವಮೊಗ್ಗ ಸಹಿತವಾಗಿ ರಾಜ್ಯದ ಬಹುತೇಕ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಭಾನುವಾರ ಸಂಜೆಯೇ ಶಾಲಾ ಕಾಲೇಜುಗಳು ರಜೆ ಘೋಷಣೆ ಮಾಡಿದ್ದರು. ಹೀಗಾಗಿ ರಾಜ್ಯದ ಯಾವುದೇ ಶಾಲಾ, ಕಾಲೇಜು ಸೋಮವಾರ ತೆರೆದಿರಲಿಲ್ಲ. ಕೆಲವೊಂದು ಜಿಲ್ಲೆಯ ಸರ್ಕಾರಿ ಶಾಲಾ ಕಾಲೇಜುಗಳ ಶಿಕ್ಷಕ, ಉಪನ್ಯಾಸಕರು ಸೋಮವಾರವೂ ಶಾಲಾ ಕಾಲೇಜಿಗೆ ಹೋಗಿ ಆಡಳಿತಾತ್ಮಕ ಕೆಲಸ ನಡೆಸಿದ್ದಾರೆ. ಎಲ್ಲಿಯೂ ತರಗತಿಗಳು ನಡೆದಿಲ್ಲ ಎಂದು ಶಿಕ್ಷಣ ಇಲಾಖೆ ಖಚಿತ ಪಡಿಸಿದೆ.
ಖಾಸಗಿ ಶಾಲಾಡಳಿತ ಮಂಡಳಿಗಳು ಬಂದ್‌ನಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಬಹುದು ಅಥವಾ ಶಾಲೆಯ ಪರಿಕರಗಳ ನಾಶವಾಗ ಬಹುದು ಎಂಬ ಉದ್ದೇಶದಿಂದ ಜಿಲ್ಲಾಧಿಕಾರಿಗಳು ರಜಾ ಘೋಷಣೆ ಮಾಡುವ ಮೊದಲೇ ತಮ್ಮ ಶಾಲೆಗಳಿಗೆ ರಜೆ ನೀಡಿ, ಪಾಲಕ, ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಇದರ ಮಾಹಿತಿ ನೀಡಿದ್ದರು. ಹೀಗಾಗಿ ಸೋಮವಾರ ಖಾಸಗಿ ಶಾಲೆಗಳಲ್ಲೂ ಯಾವುದೇ ಶೈಕ್ಷಣಿಕ ಚಟುವಟಿಕೆ ನಡೆದಿಲ್ಲ.
ಖಾಸಗಿ ಶಾಲೆಗಳು ಸೋಮವಾರ ತರಗತಿಯನ್ನು ಶನಿವಾರ ಮಧ್ಯಾಹ್ನ ಅಥವಾ ಬೇರ್ಯಾವುದಾದರು ಸರ್ಕಾರಿ ರಜಾ ದಿನದಲ್ಲಿ ನಡೆಸುವ ಸಾಧ್ಯತೆ ಇದೆ. ಆದರೆ, ಸರ್ಕಾರಿ ಶಾಲಾ ಮಕ್ಕಳಿಗೆ ದಸರಾ ರಜಾ ಕಡಿತಗೊಳಿಸಿ, ಅದರಲ್ಲೇ ಸೋಮವಾರದ ತರಗತಿಯನ್ನು ಸೇರಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.