ಮರಳಿ ಸರ್ಕಾರಿ ಶಾಲೆಗೆ ಕರೆ ತರುವುದು ಕಾರ್ಯಸಾಧುವೇ?
Team Udayavani, Sep 12, 2018, 6:00 AM IST
ಬೆಂಗಳೂರು: ಖಾಸಗಿ ಶಾಲಾ ಮಕ್ಕಳನ್ನು ಮರಳಿ ಸರ್ಕಾರಿ ಶಾಲೆಗೆ ಕರೆ ತರುವ ಮುಖ್ಯಮಂತ್ರಿಯವರ ಘೋಷಣೆ, ಸರ್ಕಾರಿ ಶಾಲೆಗಳ ಉಳಿವಿಗೆ ಸ್ವಾಗತಾರ್ಹವಾದರೂ, ಉದ್ದೇಶ ಈಡೇರಲು ಬೇಕಾದ ನೀಲನಕ್ಷೆ ಸಿದಟಛಿಪಡಿಸದೇ ಘೋಷಣೆ ಮಾತ್ರ ಮಾಡಿರುವುದು ಸಾರ್ವಜನಿಕ ವಲಯದಲ್ಲಿ
ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪ್ರೊ. ಜಿ.ಎಸ್.ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶಿಕ್ಷಣ ತಜ್ಞರಾದ ಪ್ರೊ. ಚಂದ್ರಶೇಖರ ದಾಮ್ಲೆ, ಪ.ಮಲ್ಲೇಶ್, ಗಂಗಾಧರ ಕುಷ್ಠಗಿ, ಬಾನು ಮುಷ್ತಾಕ್ ಹಾಗೂ ಫಾ.ಅಂಬ್ರೋಸ್ ಪಿಂಟೋ ಒಳಗೊಂಡ ಸರ್ಕಾರಿ
ಶಾಲೆಗಳ ಸಬಲೀಕರಣ ಸಮಿತಿ ರಚನೆ ಮಾಡಲಾಗಿತ್ತು. ಸಮಿತಿಯು ಸರ್ಕಾರಿ ಶಾಲೆಗಳ ಸ್ಥಿತಿಗತಿ ಅಧ್ಯಯನ ನಡೆಸಿ ಸಮಗ್ರ ವರದಿಯನ್ನು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿತ್ತು. ಸಮಿತಿ ವರದಿ ಸಲ್ಲಿಸಿ ವರ್ಷ ಕಳೆದರೂ ಅನುಷ್ಠಾನದ ಬಗ್ಗೆ ಸರ್ಕಾರ ಕಿಂಚಿತ್ತೂ ಯೋಚಿಸಿಲ್ಲ.
ಸರ್ಕಾರಿ ಶಾಲೆಗಳ ಸಬಲೀಕರಣ ಸಮಿತಿ ನೀಡಿದ್ದ ವರದಿಯನ್ನೇ ಅನುಷ್ಠಾನ ಮಾಡಲು ಮೀನಮೇಷ ಎಣಿಸುತ್ತಿರುವ ಸರ್ಕಾರ ಖಾಸಗಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳನ್ನು ಮರಳಿ ಸರ್ಕಾರಿ ಶಾಲೆಗೆ ಕರೆತಲು ಸಾಧ್ಯವೇ ಎಂಬ ಪ್ರಶ್ನೆ ಸಾರ್ವಜನಿಕವಾಗಿ ಎದ್ದಿದೆ.
ಪ್ರಸಕ್ತ ಸಾಲಿನಿಂದ ರಾಜ್ಯದ ವಿವಿಧ ಭಾಗದಲ್ಲಿ 175 ಕರ್ನಾಟಕ ಪಬ್ಲಿಕ್ ಶಾಲೆ ತೆರೆಯಲಾಗಿದೆ. ಒಂದರಿಂದ 12ನೇ ತರಗತಿವರೆಗೂ ಒಂದೇ ಸೂರಿನಡಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದು ಇದರ ಉದ್ದೇಶವಾಗಿದೆ. ಎಲ್ಲ ಜಿಲ್ಲೆಗಳಲ್ಲೂ ಮಕ್ಕಳ ಸಂಖ್ಯೆ ಹೆಚ್ಚಿರುವ ಹಾಗೂ ಎಲ್ಲ ರೀತಿಯ
ಸೌಲಭ್ಯವಿರುವ ಸರ್ಕಾರಿ ಶಾಲೆಯೊಂದನ್ನು ಗುರುತಿಸಿ ಕರ್ನಾಟಕ ಪಬ್ಲಿಕ್ ಶಾಲೆ ಎಂದು ಮರು ನಾಮಕರಣ ಮಾಡಲಾಗಿದೆ. ಆದರೆ, ಇದರ ಅಭಿವೃದಿಟಛಿ ಮತ್ತು ಉನ್ನತೀಕರಣಕ್ಕೆ ಸಮಗ್ರವಾದ ಮಾರ್ಗಸೂಚಿ ಇನ್ನೂ ಪ್ರಕಟವಾಗಿಲ್ಲ.
ಸರ್ಕಾರಿ ಶಾಲೆಯನ್ನೇ ಸಮಗ್ರವಾಗಿ ಅಭಿವೃದ್ಧಿ ಪಡಿಸಿಕೊಳ್ಳದೇ ಖಾಸಗಿ ಶಾಲೆಯಲ್ಲಿ ಈಗ ಓದುತ್ತಿರುವ ಮಕ್ಕಳನ್ನು ಮರಳಿ ಸರ್ಕಾರಿ ಶಾಲೆಗೆ ಕರೆತರಲು ಸಾಧ್ಯವೇ? ಹಾಗಾದರೆ, ಮುಖ್ಯಮಂತ್ರಿಗಳು ಈ ಹೇಳಿಕೆ ನೀಡುವ ಮೊದಲ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ ಎಂಬ ಪ್ರಶ್ನೆಯೂ ಉದ್ಭವಿಸುವುದು ಸಹಜ. ಆರ್‌ಟಿಇ ಅಡಿ ಖಾಸಗಿ ಶಾಲೆಗೆ ಸೇರಿದ ಮಕ್ಕಳನ್ನು ವಾಪಸ್ ಸರ್ಕಾರಿ ಶಾಲೆಗೆ ಕರೆತರಲು ಕಾನೂನು ಅಡ್ಡಿಯಾಗಬಹುದು. ಅಂತಹ ಸಂದರ್ಭದಲ್ಲಿ ಆರ್‌ಟಿಇ ಅಲ್ಲದ ಮಕ್ಕಳನ್ನು ಪಾಲಕರ ಮನವೊಲಿಸಿ ಸರ್ಕಾರಿ ಶಾಲೆಗೆ ಕರೆತರಲು ಸಾಧ್ಯವೇ ಎಂದು ಶಿಕ್ಷಣ ತಜ್ಞರು ಪ್ರಶ್ನಿಸಿದ್ದಾರೆ.
ಕಲಿಕಾ ಮಾಧ್ಯಮ ಪಾಲಕರ ಆಯ್ಕೆ : ಮಕ್ಕಳ ಕಲಿಕಾ ಮಾಧ್ಯಮ ಆಯ್ಕೆ ಪಾಲಕರಿಗೆ ಸೇರಿದ್ದು ಎಂಬುದನ್ನು ಸಂಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.
ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮವಿಲ್ಲ. ಇಂಗ್ಲಿಷ್ ಒಂದು ಭಾಷೆಯಾಗಿ ಕಲಿಸಲಾಗುತ್ತಿದೆ. ಖಾಸಗಿ ಶಾಲೆಗಳಲ್ಲಿ ಇರುವಷ್ಟು ಸೌಲಭ್ಯ
ಸಹಿತವಾದ ಗುಣಮಟ್ಟದ ಶಿಕ್ಷಣವೂ ಸರ್ಕಾರಿ ಶಾಲೆಯಲ್ಲಿ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಶಿಕ್ಷಣ ತಜ್ಞರೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪರಿಶ್ರಮ ಅಗತ್ಯ
ಸರ್ಕಾರಿ ಶಾಲೆ ಬಲವರ್ಧನೆಯಾದರೆ, ತಾನಾಗಿಯೇ ಮಕ್ಕಳ ಸಂಖ್ಯೆ ಹೆಚ್ಚಾಗುತ್ತದೆ. ಖಾಸಗಿ ಶಾಲೆಯೇ ಬೇಕೆಂಬ ಅನಿವಾರ್ಯತೆ ಈಗ ಸೃಷ್ಟಿಯಾಗಿದೆ. ರಾಮನಗರ ಜಿಲ್ಲೆಯಲ್ಲಿ ಈ ವರ್ಷ ಸಾವಿರಕ್ಕೂ ಅಧಿಕ ಮಕ್ಕಳು ಸರ್ಕಾರಿ ಶಾಲೆ ಸೇರಿದ್ದಾರೆ. ಮುಖ್ಯಮಂತ್ರಿ ಹೇಳಿಕೆಯ ಉದ್ದೇಶ ಚೆನ್ನಾಗಿದೆ. ಆದರೆ ಅದನ್ನು ಕಾರ್ಯರೂಪಕ್ಕೆ ತರಲು ಪರಿಶ್ರಮ ಅಗತ್ಯವಿದೆ ಎಂದು ಶಿಕ್ಷಣ ತಜ್ಞ ಡಾ.ವಿ.ಪಿ.ನಿರಂಜನಾರಾಧ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
ಖಾಸಗಿ ಶಾಲೆಯಲ್ಲಿರುವ ಮಕ್ಕಳನ್ನು ಸರ್ಕಾರಿ ಶಾಲೆಗೆ ಮರಳಿ ಕರೆಯುವುದು ಅಷ್ಟು ಸುಲಭವಲ್ಲ. ವಾಸ್ತವಾಂಶ ಬೇರೆ ಇದೆ. ಕಾನೂನು ಬಾಹಿರವಾಗಿ ಅಥವಾ ಸಂವಿಧಾನಕ್ಕೆ ವಿರುದ್ಧವಾಗಿ ಈ ಕಾರ್ಯ ಮಾಡಲು ಸಾಧ್ಯವಿಲ್ಲ. ಮುಖ್ಯಮಂತ್ರಿಗಳ ಹೇಳಿಕೆ ವಾಸ್ತವಕ್ಕೆ ದೂರವಿದೆ.
● ಡಿ.ಶಶಿಕುಮಾರ್, ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಖಾಸಗಿ ಶಾಲಾಡಳಿತ ಮಂಡಳಿಗಳ ಸಂಘಟನೆ.
● ರಾಜು ಖಾರ್ವಿ ಕೊಡೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Arrested: ಬಿಹಾರದ ಬೆಡ್‌ಶೀಟ್ ಗ್ಯಾಂಗ್‌ನ 8 ಮಂದಿ ಸೆರೆ
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.