ಕಬ್ಬಿನ ಜೊಲ್ಲೆಯಲ್ಲಿ ಮೈದಳೆದ ಗಣಪ


Team Udayavani, Sep 12, 2018, 12:28 PM IST

kabbina.jpg

ಬೆಂಗಳೂರು: ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ದೃಷ್ಟಿಯಿಂದ ಈ ಬಾರಿ ಜೆಪಿ ನಗರದ ಪುಟ್ಟೇನಹಳ್ಳಿಯ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದ ಆಡಳಿತ ಮಂಡಳಿ, ಸುಮಾರು 30 ಅಡಿ ಎತ್ತರದ ಗಣಪನನ್ನು ಕಬ್ಬಿನ ಜೊಲ್ಲೆಯಿಂದ ನಿರ್ಮಿಸಿ ಹಲವರ ಪ್ರಶಂಸೆಗೆ ಪಾತ್ರವಾಗಿದೆ. 

ಪರಿಸರ ಉಳಿವಿನ ಜತೆಗೆ ಜಲ ಮಾಲಿನ್ಯದ ಬಗ್ಗೆಯೂ ಸಾರ್ವಜನಿಕರಿಗೆ ತಿಳಿವಳಿಕೆ ನೀಡುವ ದೃಷ್ಟಿಯಿಂದ ಕಬ್ಬಿನಿಂದ ಗಣಪತಿಯನ್ನು ವಿನ್ಯಾಸ ಮಾಡಲಾಗಿದೆ. ಸುಮಾರು 50 ಟನ್‌ ಕಬ್ಬನ್ನು ಗಣಪತಿ ನಿರ್ಮಿಸಲು ಬಳಕೆ ಮಾಡಿಕೊಳ್ಳಲಾಗಿದ್ದು, ಗಣಪನ ವಾಹನ ಮೂಷಕಕ್ಕೂ ಕಬ್ಬಿನ ಜೊಲ್ಲೆ ಬಳಸಲಾಗಿದೆ.

ಗಣಪನ ಅಲಂಕಾರಕ್ಕೆ ತಮಿಳುನಾಡಿನ ಕಬ್ಬುಗಳನ್ನು ಬಳಕೆ ಮಾಡಿಕೊಳ್ಳಲಾಗಿದ್ದು, ಉತ್ತರಪ್ರದೇಶ, ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ಸುಮಾರು 50 ಮಂದಿ ವೃತ್ತಿಪರ ಕಾರ್ಮಿಕರು ಒಂದೂವರೆ ತಿಂಗಳಿನಿಂದ ಗಣಪತಿ ವಿನ್ಯಾಸದಲ್ಲಿ ನಿರತರಾಗಿ¨ªಾರೆ ಎಂದು ದೇವಸ್ಥಾನದ ಟ್ರಸ್ಟಿ ರಾಮ್‌ ಮೋಹನ ರಾಜ್‌ ತಿಳಿಸಿದ್ದಾರೆ.

ಕಬ್ಬು ಭಕ್ತರಿಗೆ: ಗುರುವಾರ ಗಣಪತಿ ಪ್ರತಿಷ್ಠಾಪಿಸಲಾಗುತ್ತಿದ್ದು ,15 ದಿನ ಶ್ರೀಸತ್ಯ ಸಾಯಿ ಗಣಪತಿ ದೇವಸ್ಥಾನದ ಆವರಣದಲ್ಲಿ ಗಣಪನನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ಗಣಪತಿ ದೇವಸ್ಥಾನದ ಒಳಾಂಗಣವನ್ನು ಕಬ್ಬಿನ ಜೊಲ್ಲೆ ಜತೆಗೆ ಬಿಲ್ವಪತ್ರೆ ಕಾಯಿ, ಹಾಗೂ ತೆಂಗಿನ ಕಾಯಿಗಳಿಂದ ಅಲಂಕೃತಗೊಳಿಸಲಾಗಿದ್ದು, ಸುಮಾರು 50 ಸಾವಿರ ಮಂದಿ ದೇವಸ್ಥಾನಕ್ಕೆ ಭೇಟಿ ನೀಡುವ ನಿರೀಕ್ಷೆ ಇದೆ. ಗಣಪತಿ ಹಬ್ಬ ಮುಗಿದ ತಕ್ಷಣ ಅಲಂಕಾರಿಕ ಕಬ್ಬುಗಳನ್ನು ಭಕ್ತರಿಗೆ ಹಂಚಲಾಗುವುದು ಎಂದು ರಾಮ್‌ಮೋಹನ ರಾಜ್‌ ಹೇಳಿದ್ದಾರೆ.

4 ಸಾವಿರ ಕೆ.ಜಿ. ಬೃಹತ್‌ಲಾಡು: ಇದೇ ವೇಳೆ ಗಣೇಶ ಚತುರ್ಥಿ ಅಂಗವಾಗಿ ಸಿದ್ಧಪಡಿಸಲಾಗಿರುವ 4 ಸಾವಿರ ಕೆ.ಜಿ. ತೂಕದ ಬೃಹದಾಕಾರದ ಲಾಡನ್ನು ಮಂಗಳವಾರ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದ ಆವರಣದಲ್ಲಿ ಸಾರ್ವಜನಿಕರ ವೀಕ್ಷಣೆಗೆ ಅನಾವರಣಗೊಳಿಸಲಾಯಿತು.

ಗೌರಿ -ಗಣೇಶ ಹಬ್ಬದ ವಿಶೇಷವಾಗಿ ದೇವಸ್ಥಾನದ ಆಡಳಿತ ಮಂಡಳಿ ಲಾಡನ್ನು ಸಿದ್ಧಪಡಿಸಿದ್ದು, ಭಕ್ತರಿಗೆ ಪ್ರಸಾದ ರೂಪದಲ್ಲಿ ವಿತರಿಸಲಾಗುವುದು. ಲಾಡು ತಯಾರಿಸಲು 1000 ಕೆ.ಜಿ. ಕಡಲೆ ಹಿಟ್ಟು, 2000 ಕೆ.ಜಿ. ಸಕ್ಕರೆ, 700 ಕೆ.ಜಿ. ಸನ್‌ ಪ್ಯೂರ್‌ಎಣ್ಣೆ, 300 ಕೆ.ಜಿ. ತುಪ್ಪ, 50 ಕೆ.ಜಿ. ಗೋಡಂಬಿ, 50 ಕೆ.ಜಿ. ಒಣ ದ್ರಾಕ್ಷಿ, 5 ಕೆ.ಜಿ. ಏಲಕ್ಕಿಯನ್ನು ಬಳಕೆ ಮಾಡಿಕೊಳ್ಳಲಾಗಿದೆ.

ಟಾಪ್ ನ್ಯೂಸ್

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

5-bng

Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ

4-bng

Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

13

Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

11

Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.