ದೊಡ್ಡ ಮಟ್ಟದ ಬದಲಾವಣೆ ಅಗತ್ಯವಿಲ್ಲ: ಕೊಹ್ಲಿ
Team Udayavani, Sep 13, 2018, 6:25 AM IST
ಲಂಡನ್: ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ 1-4 ಅಂತರದಿಂದ ಸೋತ ಬಳಿಕ ನಾಯಕ ವಿರಾಟ್ ಕೊಹ್ಲಿ ತಂಡದ ದೌರ್ಬಲ್ಯಗಳ ಬಗ್ಗೆ ಪಟ್ಟಿ ಮಾಡಿದ್ದಾರೆ. ಆದರೆ ಈ ಸೋಲನ್ನು ಗಂಭೀರವಾಗಿ ಪರಿಗಣಿಸುವ ಮತ್ತು ಇದಕ್ಕಾಗಿ ತಂಡದಲ್ಲಿ ದೊಡ್ಡ ಮಟ್ಟದ ಬದಲಾವಣೆ ಮಾಡುವುದು ಅಗತ್ಯವಿಲ್ಲ ಎಂದು ಕೊಹ್ಲಿ ಹೇಳಿದ್ದಾರೆ.
ಭಾರತಕ್ಕೆ ಹೋಲಿಸಿದರೆ ಇಂಗ್ಲೆಂಡ್ ಸ್ವಲ್ಪಮಟ್ಟಿಗೆ ದುರ್ಬಲ ತಂಡ. ಆದರೂ ಭಾರತವು ಇಂಗ್ಲೆಂಡ್ ವಿರುದ್ಧ ಮೇಲುಗೈ ಸಾಧಿಸಲು ಒದ್ದಾಡಿದೆ ಮತ್ತು ಸರಣಿಯುದ್ದಕೂಕ್ಕ ಬ್ಯಾಟಿಂಗ್‌ನಲ್ಲಿ ವೈಫಲ್ಯ ಅನುಭವಿಸಿದೆ. ಈ ಸರಣಿಯಲ್ಲಿ ನಮ್ಮ ಆಟದ ರೀತಿಯನ್ನು ಗಮನಿಸಿದರೆ ದೊಡ್ಡ ಮಟ್ಟದ ಬದಲಾವಣೆ ಮಾಡುವ ಅಗತ್ಯ ಕಾಣುವುದಿಲ್ಲ. ಪ್ರತಿಯೊಂದು ಪಂದ್ಯದಲ್ಲಿ ನಾವು ಸ್ಪರ್ಧಿಸುವಾಗ ಪಂದ್ಯದ ಯಾವುದಾದರೊಂದು ಘಟದಲ್ಲಿ ಮೇಲುಗೈ ಸಾಧಿಸಿದ್ದರೆ ನಾವು ಸರಿಯಾದ ರೀತಿಯಲ್ಲಿ ಆಡುತ್ತಿದ್ದೇವೆ ಎಂಬುದು ಸ್ಪಷ್ಟ ಎಂದು ಕೊಹ್ಲಿ ಐದನೇ ಟೆಸ್ಟ್‌ನಲ್ಲಿ 118 ರನ್ನುಗಳಿಂದ ಸೋತ ಬಳಿಕ ನುಡಿದರು.
ಇಂಗ್ಲೆಂಡ್ ವಿರುದ್ಧದ ಸೋಲಿನಿಂದಾಗಿ ವಿದೇಶಿ ನೆಲದಲ್ಲಿ ಭಾರತದ ಕಳಪೆ ಅಂಕಿಅಂಶ ಮುಂದುವರಿಯಿತು. ದಕ್ಷಿಣ ಆಫ್ರಿಕಾ ಸರಣಿ ವೇಳೆಯೂ ಭಾರತ ನೀರಸ ಪ್ರದರ್ಶನ ನೀಡಿತ್ತು. ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿ ಸೋಲನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಯಾಕೆಂದರೆ ನಾವು ಯಾವ ರೀತಿಯ ಕ್ರಿಕೆಟ್ ಆಡುತ್ತೇವೆ ಎಂಬುದರ ಮೇಲೆ ನಮ್ಮ ಸಾಮರ್ಥ್ಯ ನಿಂತಿದೆ. ಭಾರತ ಸರಣಿ ಸೋತಿರಬಹುದು. ಆದರೆ ಪಂದ್ಯದ ಕೆಲವೊಂದು ಘಟದಲ್ಲಿ ಇಂಗ್ಲೆಂಡಿಗೆ ಒತ್ತಡ ಹೇರುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಕೊಹ್ಲಿ ತಿಳಿಸಿದರು.
ನಾವು ಒತ್ತಡ ಹೇರಿದ್ದೆವು. ಆದರೆ ಆ ಒತ್ತಡವನ್ನು ದೀರ್ಘ ಹಂತದವರೆಗೆ ಬ್ಯಾಟ್ ಮತ್ತು ಬೌಲಿಂಗ್ ಮೂಲಕ ಹಿಡಿದಿಟ್ಟುಕೊಳ್ಳಲು ವಿಫಲರಾದೆವು. ಆದರೆ ಅವರು (ಇಂಗ್ಲೆಂಡ್) ಇಂತಹ ಪರಿಸ್ಥಿತಿಯ ಲಾಭವನ್ನು ನಮಗಿಂತ ಹೆಚ್ಚು ಪಡೆದಿರುವುದು ಸೋಲಿಗೆ ಕಾರಣವಾಯಿತು ಎಂದು ಕೊಹ್ಲಿ ವಿವರಿಸಿದರು.
ಸರಣಿ ಸಾಗಿದ ರೀತಿಗೆ ಬೇಸರ
ಕೇವಲ ಒಂದು ಟೆಸ್ಟ್ ಗೆಲ್ಲುವುದು ಮುಖ್ಯವಾಗಿರಲಿಲ್ಲ. ಆದರೆ ಸರಣಿ ಗೆಲ್ಲುವುದು ನಮ್ಮ ಗುರಿಯಾಗಿತ್ತು. ಸರಣಿ ಸಾಗಿದ ರೀತಿಯಿಂದ ನಮಗೆ ಬೇಸರವಾಗಿದೆ. ಆದರೆ ನಾವು ಛಲದಿಂದ ಆಡಿದ್ದೇವೆ ಮತ್ತು ಪ್ರತಿಯೊಂದು ಪಂದ್ಯವನ್ನು ಗೆಲ್ಲಲೇಬೇಕೆಂಬ ಉದ್ದೇಶದಿಂದ ಶಕ್ತಿಮೀರಿ ಹೋರಾಡಿದ್ದೇವೆ ಎಂದು ಕೊಹ್ಲಿ ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.