ಮಳೆ ಹಾನಿ ನಷ್ಟ ಪರಿಶೀಲನೆ: ಕರಾವಳಿಗೆ ಕೇಂದ್ರ ತಂಡ
Team Udayavani, Sep 13, 2018, 12:55 PM IST
ಉಡುಪಿ: ಕೇಂದ್ರ ಸರಕಾರದ ಹಿರಿಯ ಅಧಿಕಾರಿಗಳ ತಂಡವು ಬುಧವಾರ ಜಿಲ್ಲೆಗೆ ಆಗಮಿಸಿ ಅತಿವೃಷ್ಟಿ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿತು. ಕಾರ್ಕಳ, ಕಾಪು ತಾಲೂಕುಗಳಲ್ಲಿ ಹಾನಿಗೀಡಾದ ರಸ್ತೆ, ಬೆಳೆಹಾನಿ ಕುರಿತು ಮಾಹಿತಿ ಸಂಗ್ರಹಿಸಿತು.
ಕಾರ್ಕಳ ತಾಲೂಕಿನ ಕುಕ್ಕುಂದೂರು ಜಯಂತಿನಗರ ಶಾಲೆ, ಕಾರ್ಕಳ- ಉಡುಪಿ ರಸ್ತೆ, ಕೊಳೆರೋಗದಿಂದ ಹಾನಿಗೀಡಾದ ಮೀಯಾರು ಗ್ರಾಮದ ಅಡಿಕೆ ತೋಟ, ಹೊಸ್ಮಾರು ಈದು ಸೇತುವೆ, ರಸ್ತೆ, ನೂರಾಲ್‌ಬೆಟ್ಟು ಕಂಪೆಟ್ಟುವಿನ ಸೇತುವೆ, ಕೊಚ್ಚಿ ಹೋದ ಸಂಪರ್ಕ ರಸ್ತೆ, ಹಾನಿಗೊಳಗಾದ ಕಾಲು ಸಂಕ ವೀಕ್ಷಿಸಿದರು. ಅಡಿಕೆ ಬೆಳೆಗಾರರ ಜತೆ ಮಾತುಕತೆ ನಡೆಸಿದರು.
ಶಿರ್ವ ಸಮೀಪದ ಕಳತ್ತೂರು ಗುರ್ಮೆಗೆ ಭೇಟಿ ನೀಡಿ ಸೇತುವೆ ಸಂಪರ್ಕ ರಸ್ತೆಯನ್ನು ವೀಕ್ಷಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಕಾರ್ಕಳ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದರು. ಉಪ ವಿಭಾಗಾಧಿಕಾರಿ ಭೂಬಾಲನ್, ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ತೋಟಗಾರಿಕೆ ಉಪ ನಿರ್ದೇಶಕಿ ಭುವನೇಶ್ವರಿ, ಲೋಕೋಪ ಯೋಗಿ ಮತ್ತು ಪಂ.ರಾಜ್ ಎಂಜಿನಿಯರಿಂಗ್ ಇಲಾಖೆ ಅಧಿಕಾರಿಗಳು, ಕಾರ್ಕಳ ತಹಶೀಲ್ದಾರ್ ಮುಹಮ್ಮದ್ ಇಸಾಕ್, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಬೋಟ್‌ಗಳಿಗೂ ಹಾನಿ
ಪ್ರಸಕ್ತ ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪದಿಂದ ಉಡುಪಿ ಜಿಲ್ಲೆಯಲ್ಲಿ ಈಗಾಗಲೇ 150 ಕೋಟಿ ರೂ.ಗಳಿಗೂ ಅಧಿಕ ಹಾನಿ ಅಂದಾಜಿಸಲಾಗಿದೆ. ರಸ್ತೆ ಸೇರಿದಂತೆ ಮೂಲಸೌಕರ್ಯ, ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರದಲ್ಲಿ ಅಧಿಕ ಹಾನಿ ಉಂಟಾಗಿದೆ. ಮೀನುಗಾರರ ಬೋಟುಗಳು ಸಾಕಷ್ಟು ಸಂಖ್ಯೆಯಲ್ಲಿ ನಷ್ಟ ಅನುಭವಿಸಿವೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು. ಉಡುಪಿ ಜಿಲ್ಲೆಯಲ್ಲಿ 1,058 ಮನೆಗಳು ಹಾನಿಗೀಡಾಗಿ ಸುಮಾರು 10.06 ಕೋ.ರೂ. ನಷ್ಟ ಉಂಟಾಗಿದೆ ಎಂದು ತಿಳಿಸಿದರು. ಕೇಂದ್ರ ತಂಡದ ಅಧಿಕಾರಿಗಳು ಮೀನುಗಾರರ ಬೋಟುಗಳಿಗೆ ಕೇರಳದಲ್ಲಿ ಯಾವ ರೀತಿ ಪರಿಹಾರ ನೀಡಲಾಗಿದೆ ಎಂಬ ಬಗ್ಗೆ ಮಾಹಿತಿ ಪಡೆಯುವಂತೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.