ಕೇಂದ್ರ ಅಧಿಕಾರಿಗಳಿಂದ ವೀಕ್ಷಣೆ
Team Udayavani, Sep 15, 2018, 11:59 AM IST
ಸುಬ್ರಹ್ಮಣ್ಯ : ಅತಿವೃಷ್ಟಿ ಪೀಡಿತ ಪ್ರದೇಶಗಳ ಸಮೀಕ್ಷೆ ನಡೆಸುತ್ತಿರುವ ಕೇಂದ್ರದ ಅಧಿಕಾರಿಗಳ ತಂಡ ಗುರುವಾರ ಸುಬ್ರಹ್ಮಣ್ಯ-ಜಾಲ್ಸೂರು-ಸುಳ್ಯ-ಮಡಿಕೇರಿ ರಾಜ್ಯ ಹೆದ್ದಾರಿಯ ಕಲ್ಲಾಜೆ ಬಳಿ ರಸ್ತೆ ಕುಸಿತ ನಡೆದ ಸ್ಥಳವನ್ನು ವೀಕ್ಷಿಸಿತು.
ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಈ ರಸ್ತೆಯ ಪ್ರಾಮುಖ್ಯ, ಈ ರಸ್ತೆ ಮೇಲಿರುವ ಸಂಚಾರ ಒತ್ತಡದ ಕುರಿತು ಅಧಿಕಾರಿಗಳ ಗಮನಕ್ಕೆ ತಂದರು. ವೀಕ್ಷಣ ತಂಡದಲ್ಲಿ ಕೇಂದ್ರ ಹಣಕಾಸು ಸಚಿವಾಲಯದ ವೆಚ್ಚ ಉಪಕಾರ್ಯದರ್ಶಿ ಭರತೇಂದು ಕುಮಾರ್ ಸಿಂಗ್, ಗ್ರಾಮೀಣಾಭಿವೃದ್ಧಿ ಸಚಿವಾಲಯದ ಉಪಕಾರ್ಯದರ್ಶಿ ಮಾಣಿಕ್ ಚಂದ್ ಪಂಡಿತ್, ರಸ್ತೆ ಸಾರಿಗೆ, ಹೆದ್ದಾರಿ ಇಲಾಖೆಯ ಪ್ರಾದೇಶಿಕ ಅಧಿಕಾರಿ ಸದಾನಂದ ಬಾಬು, ಪುತ್ತೂರು ಸಹಾಯಕ ಆಯುಕ್ತ ಕೃಷ್ಣಮೂರ್ತಿ, ಸುಳ್ಯ ತಹಶೀಲ್ದಾರ್ ಕುಂಞಮ್ಮ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಅಧಿಕಾರಿಗಳ ತಂಡ ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಅನ್ನಪ್ರಸಾದ ಸ್ವೀಕರಿಸಿದ ಬಳಿಕ ಶಿರಾಡಿ ಘಾಟಿ ರಾ. ಹೆದ್ದಾರಿ ವೀಕ್ಷಣೆಗೆ ತೆರಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್’
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್ ಆಕರ್ಷಣೆ!
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.