ಮಾದಕ ವಸ್ತು ಮಾರಾಟ: ಮೂವರು ವಿದೇಶಿಗರ ಸೆರೆ
Team Udayavani, Sep 15, 2018, 12:05 PM IST
ಬೆಂಗಳೂರು: ಮಾದಕ ವಸ್ತುಗಳ ಮಾರಾಟಕ್ಕೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ವಿದೇಶಿ ಪ್ರಜೆಗಳನ್ನು ಸಿಸಿಬಿಯ ಮಹಿಳೆ ಮತ್ತು ಮಾದಕ ದ್ರವ್ಯ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ನೈಜೀರಿಯಾದ ಹೆನ್ರಿ ಚಿಗ್ಬೋ (34), ಕಾಂಗೋ ದೇಶದ ಕೇವಿನ್ (30) ಮತ್ತು ಅಜಂ ನೈಜರ್ (21) ಬಂಧಿತರು.
ವಿದ್ಯಾರ್ಥಿ ವೀಸಾದಡಿ ನಗರಕ್ಕೆ ಬಂದಿರುವ ಈ ಮೂವರು ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದು, ಐಷಾರಾಮಿ ಜೀವನಕ್ಕಾಗಿ ನೆರೆ ರಾಜ್ಯಗಳ ಮಧ್ಯವರ್ತಿಗಳಿಂದ ಗಾಂಜಾ ಹಾಗೂ ಕೊಕೇನ್ ತರಿಸಿ ಇಲ್ಲಿನ ಕಾಲೇಜು ವಿದ್ಯಾರ್ಥಿಗಳು, ತಮ್ಮ ಪರಿಚಿತ ವ್ಯಕ್ತಿಗಳಿಗೆ ಗ್ರಾಂ. ಲೆಕ್ಕದಲ್ಲಿ ಮಾರಾಟ ಮಾಡುತ್ತಿದ್ದರು ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
ಮೂರು ವರ್ಷಗಳ ಹಿಂದೆ ವಿದ್ಯಾರ್ಥಿ ವೀಸಾದಡಿ ನಗರಕ್ಕೆ ಬಂದಿರುವ ನೈಜೀರಿಯಾದ ಹೆನ್ರಿ ಚಿಗ್ಬೋ ಖಾಸಗಿ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದು, ಕೆ.ಆರ್.ಪುರದಲ್ಲಿ ವಾಸವಾಗಿದ್ದ. ಐಷಾರಾಮಿ ಜೀವನಕ್ಕಾಗಿ ವಿದೇಶದಿಂದ ಕೊಕೇನ್ ತರಿಸಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ.
ಸೆ.12ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಕೆ.ಆರ್.ಪುರ ಠಾಣೆ ವ್ಯಾಪ್ತಿಯ ಟಿ.ಸಿ.ಪಾಳ್ಯದ ಗಾರ್ಡ್ನ್ ಸಿಟಿ ಕಾಲೇಜು ರಸ್ತೆಯಲ್ಲಿ ಕೊಕೇನ್ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿಸಲಾಗಿದೆ.
ಆರೋಪಿಯಿಂದ 8.50 ಲಕ್ಷ ರೂ. ಮೌಲ್ಯದ 80 ಗ್ರಾಂ ಕೊಕೇನ್, ಒಂದು ಬೈಕ್, ಮೂರು ಮೊಬೈಲ್ ಹಾಗೂ 1 ಸಾವಿರ ನಗದು, ತೂಕದ ಯಂತ್ರ ಹಾಗೂ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಅದೇ ರೀತಿ 2017ರಲ್ಲಿ ವಿದ್ಯಾರ್ಥಿ ವೀಸಾದಡಿ ನಗರಕ್ಕೆ ಬಂದಿರುವ ಕಾಂಗೋ ದೇಶದ ಕೇವಿನ್ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು,
ಹೆಣ್ಣೂರಿನಲ್ಲಿ ವಾಸವಾಗಿದ್ದ. ನೆರೆ ರಾಜ್ಯಗಳಿಂದ ಗಾಂಜಾ ತರಿಸಿ ಅವುಗಳನ್ನು ಸಣ್ಣ-ಸಣ್ಣ ಪ್ಯಾಕೇಟ್ಗಳನ್ನಾಗಿ ಮಾಡಿ ವಿದಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸೆ.13ರಂದು ಆರೋಪಿಯನ್ನು ಹೆಣ್ಣೂರಿನ ಚಿನ್ನಪ್ಪ ಲೇಔಟ್ನಲ್ಲಿ ಬಂಧಿಸಿದ್ದು, ಆರೋಪಿಯಿಂದ 40 ಸಾವಿರ ರೂ. ಮೌಲ್ಯದ 1 ಕೆ.ಜಿ. ಗಾಂಜಾ, 1 ಮೊಬೈಲ್, ಪ್ಲಾಸ್ಟಿಕ್ ಕವರ್ ಮತ್ತು 500 ರೂ. ವಶಕ್ಕೆ ಪಡೆಯಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದ್ದಾರೆ.
ಮತ್ತೂಂದು ಪ್ರಕರಣದಲ್ಲಿ ಅಜಂ ನೈಜರ್ (21) ಎಂಬಾತನನ್ನು ಬಂಧಿಸಿದ್ದು, ಈತನಿಂದ 1 ಲಕ್ಷ ರೂ. ಮೌಲ್ಯದ 1 ಕೆ.ಜಿ. ಗಾಂಜಾ, 1 ಮೊಬೈಲ್, 1 ಬೈಕ್, ನಗದು ಹಾಗೂ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿ ಹೆಣ್ಣೂರು ಬಂಡೆ ಬಳಿಯ ಶ್ರೀಭೈರವೇಶ್ವರ ಕಾಂಡಿಮೆಂಟ್ಸ್ ಮುಂಭಾಗ ಸಣ್ಣ-ಸಣ್ಣ ಪ್ಯಾಕೆಟ್ಗಳಲ್ಲಿ ಸಾರ್ವಜನಿಕವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ದೊರೆತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ. ಸಿಸಿಬಿಯ ಮಹಿಳೆ ಮತ್ತು ಮಾದಕ ದ್ರವ್ಯ ದಳದ ಎಸಿಪಿ ಮೋಹನ್ ಕುಮಾರ್ ನೇತೃತ್ವದಲ್ಲಿ ಈ ದಾಳಿಗಳು ನಡೆದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.