ರಜನಿ ಹೊಸ ಚಿತ್ರದ ಟೀಸರ್‌ಗೆ ಒಂದು ಕೋಟಿ ಪ್ಲಸ್ ಹಿಟ್ಸ್: Watch
Team Udayavani, Sep 15, 2018, 12:58 PM IST
ಸೂಪರ್ ಸ್ಟಾರ್ ರಜನಿಕಾಂತ್, ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಬಹುಕೋಟಿ ವೆಚ್ಚದ ಬಹು ನಿರೀಕ್ಷಿತ ಚಿತ್ರ “2.0′ ಟೀಸರ್ ಬಿಡುಗಡೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಕತ್ ಹವಾ ಕ್ರಿಯೇಟ್ ಮಾಡಿದೆ. ಈ ಹಿಂದೆ ಎಂದಿರನ್(ರೋಬೊಟ್) ಚಿತ್ರ ನಿರ್ದೇಶಿಸಿ ಹಾಲಿವುಡ್ ಮಟ್ಟದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಶಂಕರ್ ಅವರೇ ಚಿತ್ರದ ಮುಂದುವರೆದ ಭಾಗವನ್ನು ನಿರ್ದೇಶಿಸಿದ್ದಾರೆ.
ಹೀಗಾಗಿ ಸಿನಿಪ್ರಿಯರಲ್ಲಿ ಈ ಚಿತ್ರ ಮತ್ತಷ್ಟು ಕುತೂಹಲ ಮೂಡಿಸಿದೆ. ಅಲ್ಲದೇ ಕೆಲವು ತಿಂಗಳ ಹಿಂದೆ ರಜನಿಕಾಂತ್ ಮತ್ತು ಅಕ್ಷಯ್ ಕುಮಾರ್ ಇಬ್ಬರೂ ಸಿನಿಮಾಗಾಗಿ ರೆಡಿಯಾಗುವ ಮೇಕಿಂಗ್ ವೀಡಿಯೋ ಬಿಡುಗಡೆ ಮಾಡಲಾಗಿತ್ತು. ಈ ಮೇಕಿಂಗ್ ವೀಡಿಯೋದಲ್ಲಿ ಎಲ್ಲ ತಂತ್ರಜ್ಞರು, ನಟರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದರು. ಇದೀಗ ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿದ್ದು, ಚಿತ್ರದ ಟೀಸರ್ ತುಂಬಾ ಇಂಟರೆಸ್ಟಿಂಗ್ ಆಗಿದೆ.
ಇದುವರೆಗೂ 1 ಕೋಟಿಗೂ ಹೆಚ್ಚು ಸಿನಿಪ್ರಿಯರು ವೀಕ್ಷಿಸಿದ್ದಾರೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಈ ಚಿತ್ರದಲ್ಲಿ ನೆಗೆಟಿವ್ ಪಾತ್ರದಲ್ಲಿ ಅಭಿನಯಿಸಿದ್ದು, ವಿಭಿನ್ನ ಗೆಟಪ್ನಲ್ಲಿ ಕಾಣಿಸಿಕೊಂಡಿರುವುದು ಮತ್ತಷ್ಟು ಥ್ರಿಲ್ ಮೂಡಿಸಿದೆ. ರೋಬೋಟ್ ಪಾತ್ರದಲ್ಲಿ ನಾಯಕ ರಜನಿಕಾಂತ್ ಮಿಂಚಿದ್ದು, ಎಂದಿನಂತೆ ಈ ಚಿತ್ರದಲ್ಲೂ ತಮ್ಮ ಸ್ಟೈಲ್ ತೋರಿಸಲಿದ್ದಾರೆ.
ಇನ್ನು ಚಿತ್ರವು ಸುಮಾರು 15 ಭಾಷೆಗಳಿಗೆ ಡಬ್ ಆಗಲಿದ್ದು, 3ಡಿ ರೂಪದಲ್ಲಿಯೂ ಸಹ ಸಿದ್ದಗೊಂಡಿದೆ. ಲೈಕಾ ಪ್ರೊಡಕ್ಷನ್ಸ್ನಲ್ಲಿ ಕರಣ್ ಜೋವರ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ 543 ಕೋಟಿ ಬಂಡವಾಳ ಹೂಡಿರುವುದು ಭಾರತೀಯ ಚಿತ್ರರಂಗದ ಹೊಸ ದಾಖಲೆಯಾಗಿದೆ. ಚಿತ್ರದ ನಾಯಕಿಯಾಗಿ ಕನ್ನಡದ ವಿಲನ್ ಖ್ಯಾತಿಯ ಆ್ಯಮಿ ಜಾಕ್ಸನ್ ನಟಿಸಿದ್ದು, ಎ.ಆರ್.ರೆಹಮಾನ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.