ಗಣಪತಿ ವಾಹನ ಇಲಿಗೂ ಇಲ್ಲಿ ವಿಶೇಷ ಪೂಜೆ-ನೈವೇದ್ಯ

Team Udayavani, Sep 15, 2018, 5:01 PM IST

15-seoctember-18.jpg

ಕೊಪ್ಪಳ: ದೇಶದೆಲ್ಲೆಡೆ ಚೌತಿಯ ದಿನದಂದು ವಿಘ್ನ ವಿನಾಶಕನಿಗೆ ವಿಶೇಷ ಪೂಜೆ ನೆರವೇರುತ್ತದೆ. ಆದರೆ ತಾಲೂಕಿನ ಭಾಗ್ಯನಗರದ ಹಲವು ಕುಟುಂಬಗಳು ಚೌತಿಯ ಮರುದಿನ ಶುಕ್ರವಾರ ವಿನಾಯಕನ ವಾಹನ ಇಲಿರಾಯನಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಿಯಿಂದ ಬೇಡಿಕೊಳ್ಳುವ ಸಂಪ್ರದಾಯವು ಈ ಹಿಂದಿನಿಂದಲೂ ನಡೆದು ಬಂದಿದೆ.

ಹೌದು, ಭಾಗ್ಯನಗರದ ನೂರಾರು ಕುಟುಂಬಗಳು ಗಣಪತಿಯ ವಾಹನಕ್ಕೆ ವಿಶೇಷ ಪೂಜೆ ಸಲ್ಲಿಸಿ ನಮ್ರತೆಯಿಂದ ಬೇಡಿಕೊಳ್ಳುತ್ತವೆ. ಪಟ್ಟಣದಲ್ಲಿ ಹಲವು ಕೈ ಮಗ್ಗಗಳು ಸೇರಿದಂತೆ ಯಂತ್ರಚಾಲಿತ ಮಗ್ಗಗಳು ಇವೆ. ಇಲ್ಲಿನ ಹಲವು ವೈವಿದ್ಯಮ ಬಟ್ಟೆಗಳು ದೇಶ ವಿವಿಧ ರಾಜ್ಯಗಳು ಸೇರಿದಂತೆ ವಿದೇಶಗಳಿಗೂ ರಫ್ತಾಗುತ್ತವೆ.

ಕೈ ಮಗ್ಗಗಳ ಕುಟುಂಬದವರು ಚೌತಿ ದಿನದಂದು ಗಣೇಶನಿಗೆ ಪೂಜೆ ಸಲ್ಲಿಸುತ್ತಾರೆ. ನಂತರ ಪಂಚಮಿಯಂದು ಇಲಿಗೆ ಪೂಜೆ ಸಲ್ಲಿಸುತ್ತಾರೆ. ಇಲಿಗಳು ಯಾವುದೇ ದಾರ ಸೇರಿದಂತೆ ಮಗ್ಗಗಳಲ್ಲಿ ಹಾನಿಯನ್ನುಂಟು ಮಾಡದಿರಲಿ. ಇಲಿಗಳಿಂದ ನಮ್ಮ ವೃತ್ತಿಗೆ ಯಾವುದೇ ಅಡೆ ತಡೆ ಬಾರದಿರಲಿ. ಕೈ ಮಗ್ಗಗಳ ದುಡಿಮೆಯು ಚೆನ್ನಾಗಿ ನಡೆಯಲಿ. ಇಲಿಗಳು ದಾರ ಕಡಿದರೆ, ಬಟ್ಟೆಗಳನ್ನು ಕಡಿದರೆ, ನಮ್ಮ ವ್ಯಾಪಾರದಲ್ಲಿ ನಷ್ಟವಾಗಲಿದೆ. ಹಾಗಾಗಿ ಇಲಿಗಳು ಯಾವುದೇ ಹಾನಿ ಮಾಡದಿರಲಿ ಎನ್ನುವ ಉದ್ದೇಶದಿಂದ ಹಲವು ಕುಟುಂಬಗಳು ಇಲಿಗೆ ಪೂಜೆ ಸಲ್ಲಿಸುತ್ತಾ ಬಂದಿವೆ.

ಗಣಪತಿಗೆ ನೈವೇದ್ಯ ಮಾಡಿದಂತೆ ಇಲಿರಾಯನಿಗೂ ಸಹಿತ ಹೋಳಿಗೆ, ಕಡುಬು ಸೇರಿದಂತೆ ಸಿಹಿ ಪದಾರ್ಥಗಳನ್ನು ನೈವೇದ್ಯ ಮಾಡಿ ವಿಶೇಷ ಪೂಜೆ ಸಲ್ಲಿಸಿ ಕುಟುಂಬ ಸಮೇತ ಭಕ್ತಿಯಿಂದ ಬೇಡಿಕೊಳ್ಳುತ್ತಾರೆ. ನಮ್ಮ ಕುಟುಂಬವನ್ನು ಸಾಕುವ ಮಗ್ಗಳಿಗೆ ಯಾವುದೇ ತೊಂದರೆ ನೀಡದಿರು. ವರ್ಷ ಪೂರ್ತಿ ಕೈಮಗ್ಗಗಳ ಕೆಲಸ-ಕಾರ್ಯ ಸಾಂಘವಾಗಿ ನೆರವೇರಲಿ ಎಂದು ಇಲಿಗೆ ಬೇಡಿಕೊಳ್ಳುತ್ತಾರೆ.

ಅದರಂತೆ ಶುಕ್ರವಾರವೂ ಭಾಗ್ಯನಗರದಲ್ಲಿ ಮೂಶಿಕ ವಾಹನನಿಗೆ ವಿಶೇಷ ಪೂಜೆ ಸಲ್ಲಿಸಿದ್ದು ಕಂಡು ಬಂದಿತು. ಈ ಆಚರಣೆ ಪೂರ್ವಜರ ಕಾಲದಿಂದಲೂ ನಡೆದುಕೊಂಡು ಬಂದಿದೆ. ಅವರ ಕುಟುಂಬವು ಈಗಲೂ ಇಲಿಗೆ ಪೂಜೆ ಸಲ್ಲಿಸುವ ಸಂಪ್ರದಾಯ ಮುಂದುವರಿದಿದೆ. 

ನಮ್ಮ ಪೂರ್ವಜರ ಸಂಪ್ರದಾಯದಂತೆ ಪ್ರತಿ ವರ್ಷ ಚೌತಿಯ ದಿನದಂದು ಗಣೇಶನಿಗೆ ಪೂಜೆ ಸಲ್ಲಿಸುತ್ತೇವೆ. ಪಂಚಮಿಯ ದಿನದಂದು ಇಲಿಗಳನ್ನು ಸಿದ್ಧಡಿಸಿ ಪೂಜೆ ಸಲ್ಲಿಸುತ್ತೇವೆ. ನಮ್ಮ ಮಗ್ಗಗಳಿಗೆ ಇಲಿಗಳು ಯಾವುದೇ ತೊಂದರೆ ಕೊಡದಿರಲಿ ಎಂದು ಬೇಡಿಕೊಳ್ಳುತ್ತೇವೆ. ಗಣೇಶನಿಗೆ ಅರ್ಪಿಸಿದಂತೆ ಇಲಿರಾಯನಿಗೂ ನೈವೇದ್ಯ ಅರ್ಪಿಸಿ ಪೂಜೆ ಸಲ್ಲಿಸುತ್ತೇವೆ. 
ನಾಗೂಸಾ ಬಿ. ಮೇಘರಾಜ, ಭಾಗ್ಯನಗರ ನಿವಾಸಿ

ಟಾಪ್ ನ್ಯೂಸ್

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.