ಜಾರಕಿಹೊಳಿ ಬ್ರದರ್ಸ್ ಜೊತೆ ಸಂಧಾನಕ್ಕೆ ಸಿದ್ದು?:ವೇಣು ಹೇಳಿದ್ದೇನು?
Team Udayavani, Sep 16, 2018, 2:29 PM IST
ಬೆಂಗಳೂರು: ಜಾರಕಿಹೊಳಿ ಸಹೋದರರ ಅಸಮಾಧಾನದ ವಿಚಾರ ಸರ್ಕಾರದ ಅಸ್ಥಿತ್ವದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳ ಹಿನ್ನಲೆಯಲ್ಲಿ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ವಿದೇಶ ಪ್ರವಾಸದಿಂದ ವಾಪಾಸಾಗಿರುವ ಮಾಜಿ ಸಿಎಂ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರೊಂದಿಗೆ ಭಾನುವಾರ ಮಹತ್ವದ ಮಾತುಕತೆ ನಡೆಸಿದ್ದಾರೆ.
ಸಿದ್ದರಾಮಯ್ಯ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ , ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಭಾಗಿಯಾಗಿದ್ದರು.
ಸಭೆಯಲ್ಲಿ ಪ್ರಮುಖವಾಗಿ ಜಾರಕಿಹೊಳಿ ಸಹೋದರರ ವಿಚಾರವೇ ಚರ್ಚೆಯಾಗಿದ್ದು, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಿದ್ದರಾಮಯ್ಯ ಅವರಿಗೆ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಬಿಜೆಪಿಗೆ ಕಪ್ಪು ಹಣದ ಬಲ
ಸಭೆಯ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ವೇಣುಗೋಪಾಲ್ ಅವರು ಬೆಳಗಾವಿಯ ಪಿಎಲ್‌ಡಿ ಬ್ಯಾಂಕ್ ಚುನಾವಣೆ ವಿಚಾರ ದೊಡ್ಡ ಸಮಸ್ಯೆ ಅಲ್ಲ. ಅದು ಸರ್ಕಾರದ ಮೇಲೆ ಪರಿಣಾಮ ಬೀರುವುದಿಲ್ಲ. ಅದನ್ನು ರಾಜ್ಯ ನಾಯಕರು ಪರಿಹರಿಸಿದ್ದಾರೆ ಎಂದರು.
ಬಿಜೆಪಿ ಕಪ್ಪು ಹಣದ ಬಲ ಮತ್ತು ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಸರ್ಕಾರ ಪತನಗೊಳಿಸಲು ಮುಂದಾಗಿದೆ. ಯಾವುದೇ ಕಾರಣಕ್ಕೂ ಸರ್ಕಾರ ಪತನಗೊಳಿಸುವುದು ಸಾಧ್ಯವಿಲ್ಲ, ನಮ್ಮ ಪಕ್ಷದ ಶಾಸಕರ ಬಗ್ಗೆ ನಂಬಿಕೆ ಇದೆ. ಯಾರನ್ನೂ ಸೆಳೆಯುವುದು ಬಿಜೆಪಿಗೆ ಅಸಾಧ್ಯವಾದ ಮಾತು ಎಂದರು.
ಕರೆದರೆ ಮಾತುಕತೆಗೆ ಬರುತ್ತೇವೆ
ಸತೀಶ್ ಜಾರಕಿಹೊಳಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ ನಾವು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ. ಸರ್ಕಾರ ಪತನವಾಗುವುದಿಲ್ಲ. ಸಿದ್ದರಾಮಯ್ಯ ಅವರು ಕರೆದರೆ ಮಾತುಕತೆಗೆ ತೆರಳುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು