23ಕ್ಕೆ ನಗರದಲ್ಲಿ ಸಂಗೊಳ್ಳಿರಾಯಣ್ಣ ಭವನ ಉದ್ಘಾಟನೆ


Team Udayavani, Sep 17, 2018, 11:24 AM IST

m5-23kke.jpg

ಕೆ.ಆರ್‌.ನಗರ: ಪಟ್ಟಣದ ಕನಕ ಗುರುಪೀಠದ ಆವಣರದಲ್ಲಿ ತಾಲೂಕು ಕುರುಬರ ಸಂಘದ ವತಿಯಿಂದ ನಿರ್ಮಿಸಿರುವ ಸಂಗೊಳ್ಳಿ ರಾಯಣ್ಣ ಸಮುದಾಯ ಭವನದ ಉದ್ಘಾಟನಾ ಸಮಾರಂಭವನ್ನು ಸೆ.23ರಂದು ಭಾನುವಾರ ಏರ್ಪಡಿಸಲಾಗಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಹೇಳಿದರು.

ಸಂಘದ ಪದಾಧಿಕಾರಿಗಳೊಂದಿಗೆ ಸುಮಾರು 2.5 ಕೋಟಿ ರೂಗಳಲ್ಲಿ ನಿರ್ಮಾಣ ಮಾಡಿರುವ ಭವನದ ಕಾಮಗಾರಿಯನ್ನು ಪರಿಶೀಲಿಸಿ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಅಂದು ಬೆಳಗ್ಗೆ 6ಕ್ಕೆ ಗೃಹ ಪ್ರವೇಶ, ಗಣಪತಿ ಹೋಮ ಸೇರಿದಂತೆ ಇತರ ದೇವತಾ ಕಾರ್ಯಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದರು. 

ಮಧ್ಯಾಹ್ನ 2ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಾಗಿನೆಲೆ ಕನಕ ಗುರು ಪೀಠದ ನಿರಂಜಾನಂದಸ್ವಾಮೀಜಿ, ಕೆ.ಆರ್‌.ನಗರ ಶಾಖಾ ಮಠದ ಶಿವಾನಂದಪುರಿ ಸ್ವಾವೀಜಿ ಮತ್ತು ಗಾವಡಗೆರೆ ಗುರುಲಿಂಗ ಜಂಗಮ ಮಠದ ನಟರಾಜಸ್ವಾವೀಜಿಗಳು ದಿವ್ಯ ಸಾನ್ನಿದ್ಯ ವಹಿಸಲಿದ್ದಾರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದು, ಸಂಘದ ಅಧ್ಯಕ್ಷ ಚೀರ್ನಹಳ್ಳಿ ಶಿವಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ಪ್ರಸ್ತಾವಿಕ ಭಾಷಣ ಮಾಡಲಿದ್ದು, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ, ಸಚಿವರಾದ ಬಂಡೆಪ್ಪಕಾಶಂಪುರ, ಆರ್‌.ಶಂಕರ್‌, ಪುಟ್ಟರಂಗಶೆಟ್ಟಿ, ಸಾ.ರಾ.ಮಹೇಶ್‌, ಮಾಜಿ ಸಚಿವರಾದ ಎಚ್‌.ಎಂ.ರೇವಣ್ಣ, ವರ್ತೂರು ಪ್ರಕಾಶ್‌, ಸಿ.ಹೆಚ್‌.ಜಯಶಂಕರ್‌, ಶಾಸಕರಾದ ಅನಿಲ್‌ಚಿಕ್ಕಮಾದು, ಆರ್‌.ಧರ್ಮಸೇನಾ, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್‌, ಕೆ.ಸಿ.ಪುಟ್ಟಸಿದ್ದಶೆಟ್ಟಿ, ಜಿ.ಪಂ. ಪಕ್ಷ ನಾಯಕ ಡಿ.ರಶಂಕರ್‌, ಸದಸ್ಯ ಅಮಿತ್‌.ವಿ.ದೇವರಹಟ್ಟಿ, ಕೆಪಿಸಿಸಿ ವಕ್ತಾರೆ ಐಶ್ವರ್ಯಮಹದೇವ್‌ ಮುಖ್ಯ ಅತಿಥಿಗಳಾಗಿ ಭಾಗವಹಿದಲಿದ್ದಾರೆ ಎಂದರು.

ವಿಶೇಷ ಆಹ್ವಾನಿತರಾಗಿ ಟಿಎಪಿಸಿಎಂಎಸ್‌ ಎಸ್‌.ಸಿದ್ದೇಗೌಡ, ಜಿ.ಪಂ. ಸದಸ್ಯರಾದ ಅಚ್ಚುತಾನಂದ, ನಾಗರತ್ನ, ತಾಪಂ ಅಧ್ಯಕ್ಷ ಎಚ್‌.ಟಿ.ಮಂಜುನಾಥ್‌, ಪುರಸಭಾಧ್ಯಕ್ಷೆ ಹರ್ಷಲತಾ, ಉಪಾಧ್ಯಕ್ಷೆ ಪಾರ್ವತಿ, ತಾಪಂ ಸಾಯಿ§ ಸಮಿತಿ ಅಧ್ಯಕ್ಷ ಕೆ.ಪಿ.ಯೋಗೇಶ್‌, ಸದಸ್ಯರಾದ ಜಿ.ಎಸ್‌.ಮಂಜುನಾಥ್‌, ಲೋಕೇಶ್‌, ಸಾಕಮ್ಮ, ರತ್ನಮ್ಮ, ಮಹದೇವ್‌, ಜಿಪಂ ಮಾಜಿ ಅಧ್ಯಕ್ಷ ಸಿ.ಜೆ.ದ್ವಾರಕೀಶ್‌ ಭಾಗವಹಿಸಲಿದ್ದಾರೆ ಎಂದರು.

ಕೆಪಿಸಿಸಿ ವಕ್ತಾರೆ ಐಶ್ವರ್ಯ, ನಿವೃತ್ತ ಆರೋಗ್ಯಾ ಧಿಕಾರಿ ಡಾ.ಎಸ್‌.ಎಂ.ಮಾಲೇಗೌಡ ತಲಾ 2ಲಕ್ಷ ರೂ. ಆರ್ಥಿಕ ಸಹಕಾರ ನೀಡಿದರು. ಕುರುಬರ ಸಂಘದ ತಾಲೂಕು ಅಧ್ಯಕ್ಷ ಜೆ.ಶಿವಣ್ಣ, ಪದಾ ಧಿಕಾರಿಗಳಾದ ಕೋಳಿಪ್ರಕಾಶ್‌, ರಾಮಕೃಷ್ಣೇಗೌಡ, ಕೆ.ಎಂ.ಶ್ರೀನಿವಾಸ್‌, ಎಂ.ಎಸ್‌.ಅನಂತು, ರಂಗೇಶ್‌ಕುಮಾರ್‌, ಬಿ.ಎಂ.ನಾಗರಾಜು, ಅಪ್ಪಾಜಿಗೌಡ, ಬಿ.ಎಂ.ಗಿರೀಶ್‌, ಪುರಸಭಾ ಸದಸ್ಯ ಕೆ.ಪಿ.ಪ್ರಭುಶಂಕರ್‌ ಹಾಜರಿದ್ದರು.

ಸರ್ಕಾರ ಮತ್ತು ಸಮುದಾಯದ ಸಹಕಾರದಿಂದ ಭವನವನ್ನು ನಿರ್ಮಾಣ ಮಾಡಲಾಗಿದ್ದು, ಕಾರ್ಯಕ್ರಮಕ್ಕೆ ತಾಲೂಕಿನ ಎಲ್ಲಾ ಸಮುದಾಯದ ಅಧ್ಯಕ್ಷರನ್ನು ಸಂಘದ ವತಿಯಿಂದ ಆಹ್ವಾನಿಸಲಾಗಿದ್ದು, ಮದುವೆ ಸೇರಿದಂತೆ ಇತರ ಶುಭ ಸಮಾರಂಭಗಳಿಗೆ ಕಡಿಮೆ ದರದಲ್ಲಿ ಭವನವನ್ನು ಬಾಡಿಗೆಗೆ ನೀಡಲಾಗುತ್ತದೆ.
-ಎಚ್‌.ವಿಶ್ವನಾಥ್‌, ಜೆಡಿಎಸ್‌ ರಾಜ್ಯಾಧ್ಯಕ್ಷ 

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.