ವಾರಾಂತ್ಯದ ಮೋಜಿಗೆ ಅಡ್ಡಿಯಾದ ಮಳೆ
Team Udayavani, Sep 17, 2018, 12:23 PM IST
ಬೆಂಗಳೂರು: ನಗರದಲ್ಲಿ ಸತತ ಮೂರನೇ ದಿನವೂ ಮಳೆಯಾಗಿದ್ದು, ವಾರಾಂತ್ಯದ ಮೋಜು-ಮಸ್ತಿಗೆ ಭಾನುವಾರದ ಮಳೆ ತಣ್ಣೀರೆರಚಿತು. ಶಾಪಿಂಗ್ ಮಾಲ್‌ಗಳು, ಚಿತ್ರಮಂದಿರಗಳು, ಪ್ರಮುಖ ಮಾರುಕಟ್ಟೆಗಳಲ್ಲಿ ಜನದಟ್ಟಣೆ ವಿರಳವಾಗಿತ್ತು. ಸೋಮವಾರ ಕೂಡ ಮುಂದುವರಿಯುವ ಸಾಧ್ಯತೆ ಇದೆ.
ಭಾನುವಾರ ಮಧ್ಯಾಹ್ನ ಆರಂಭವಾದ ಮಳೆ, ಧಾರಾಕಾರವಾಗಿ ಸುರಿಯಿತು. ಹಿಂದಿನ ಎರಡು ದಿನಗಳಿಗೆ ಹೋಲಿಸಿದರೆ ಮಳೆ ಅಬ್ಬರ ತುಸು ಕಡಿಮೆ. ನಗರದ ಶಿವಕೋಟೆಯಲ್ಲಿ ಗರಿಷ್ಠ 34.5 ಮಿ.ಮೀ. ಮಳೆ ದಾಖಲಾಗಿದೆ.
ಚಂಡಮಾರುತದ ಪರಿಚಲನೆ ಮತ್ತು ಕಡಿಮೆ ಒತ್ತಡದ ತಗ್ಗು (ಟ್ರಫ್) ಜತೆಗೆ, ಒಂದು ವಾರದಿಂದ ಬಿಸಿಲಿನ ಧಗೆ ಹೆಚ್ಚಿತ್ತು. ಪರಿಣಾಮ ನಗರದಲ್ಲಿ ಮಳೆಯಾಗುತ್ತಿದೆ. ಇನ್ನೂ ಒಂದು ದಿನ ಇದೇ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಮಧ್ಯೆ ನಗರದ ಗರಿಷ್ಠ ತಾಪಮಾನ 2 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗಿದೆ. ಭಾನುವಾರ ಸಂಜೆ ಗರಿಷ್ಠ ಉಷ್ಣಾಂಶ 28.9 ಡಿಗ್ರಿ ಇತ್ತು.
ಎಲ್ಲೆಲ್ಲಿ ಎಷ್ಟು ಮಳೆ?: ಎಚ್‌ಎಸ್‌ಆರ್ ಲೇಔಟ್‌ನಲ್ಲಿ 7.5 ಮಿ.ಮೀ., ರಾಜರಾಜೇಶ್ವರಿ ನಗರ 1.5, ಬಸವನಗುಡಿ 7.5, ಬೊಮ್ಮನಹಳ್ಳಿ 11, ಹೆಸರಘಟ್ಟ 10 ಮಿ.ಮೀ. ಮಳೆ ಆಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.