ಸ್ವತಂತ್ರ ಸದಸ್ಯರಿಗೆ ಸ್ಥಾಯಿ ಸಮಿತಿ


Team Udayavani, Sep 17, 2018, 12:23 PM IST

bbmp.jpg

ಬೆಂಗಳೂರು: ಬಿಬಿಎಂಪಿ ಮೇಯರ್‌ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಗೆ ಬೆಂಬಲ ನೀಡಲು ಒಪ್ಪಿರುವ 8 ಜನ ಪಕ್ಷೇತರರ ಪೈಕಿ 4 ಜನರಿಗೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡಲು ಕಾಂಗ್ರೆಸ್‌ ತೀರ್ಮಾನಿಸಿದೆ.

ಬಿಬಿಎಂಪಿ ಮೇಯರ್‌ ಮತ್ತು ಉಪಮೇಯರ್‌ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷೇತರ ಸದಸ್ಯರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್‌ ಮತ್ತು ಬಿಜೆಪಿ ಕಸರತ್ತು ನಡೆಸಿವೆ. ಶುಕ್ರವಾರ ರಾತ್ರಿ ಬಿಜೆಪಿ ನಾಯಕರು ಪಕ್ಷೇತರರೊಂದಿಗೆ ಸಭೆ ನಡೆಸಿದರೆ, ಶನಿವಾರ ಕಾಂಗ್ರೆಸ್‌ ನಾಯಕರು ಸಭೆ ನಡೆಸಿ ಪಕ್ಷೇತರರ ಬೆಂಬಲ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ಪಾಲಿಕೆಯ ಆಡಳಿತ ಚುಕ್ಕಾಣಿ ಹಿಡಿಯಲು ಮುಂದಾದ ಬಿಜೆಪಿ ಪಕ್ಷೇತರರನ್ನು ಸೆಳೆಯಲು ಮುಂದಾಗಿದೆ. ಅದಕ್ಕೆ ಪ್ರತಿತಂತ್ರ ರೂಪಿಸಿರುವ ಕಾಂಗ್ರೆಸ್‌ ಈಗಾಗಲೇ ಎರಡು ಬಾರಿ ಪಕ್ಷೇತರ ಸದಸ್ಯರೊಂದಿಗೆ ಸಭೆ ನಡೆಸಿ ಮಾತುಕತೆ ನಡೆಸಿ, ಸೆ. 28ರಂದು ನಡೆಯಲಿರುವ ಮೇಯರ್‌ ಮತ್ತು ಉಪಮೇಯರ್‌ ಚುನಾವಣೆ ವೇಳೆ ಮೈತ್ರಿ ಪಕ್ಷಗಳಿಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

ಅದಕ್ಕೆ ಬದಲಾಗಿ ನಾಲ್ವರು ಪಕ್ಷೇತರರಿಗೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡುವುದಾಗಿಯೂ ಭರವಸೆ ನೀಡಿದ್ದಾರೆ.ಇನ್ನು ಕಳೆದ ವರ್ಷ ಪಕ್ಷೇತರರ ಬೆಂಬಲ ಅಗತ್ಯವಿಲ್ಲದಿದ್ದರೂ ಪಕ್ಷೇತರರನ್ನು ಕಡೆಗಣಿಸಬಾರದೆಂಬ ಉದ್ದೇಶದಿಂದ ಸ್ಥಾಯಿ ಸಮಿತಿ ನೀಡಲಾಗಿತ್ತು. ಹೀಗಾಗಿ ಈ ಬಾರಿಯೂ 4 ಜನರಿಗೆ ಧ್ಯಕ್ಷ ಸ್ಥಾನ ನೀಡಲಾಗುತ್ತಿದ್ದು, ಈ ಬಾರಿ ಅವಕಾಶ ದೊರೆಯದವರಿಗೆ ಮುಂದಿ ಅವಧಿಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ನೀಡುವ ಬಗ್ಗೆಯೂ ತಿಳಿಸಿದ್ದಾರೆ ಎನ್ನಲಾಗಿದೆ.

ರೆಸರ್ಟ್‌ಗೆ ಪಕ್ಷೇತರರು?: ಮೊದಲ ಮೇಯರ್‌ ಚುನಾವಣೆಯಲ್ಲಿ ಪಕ್ಷೇತರರನ್ನು ಬಿಜೆಪಿ ಹೈಜಾಕ್‌ ಮಾಡಲಿದೆ ಎಂಬ ಕಾರಣದಿಂದಾಗಿ ಪಕ್ಷೇತರರನ್ನು ಗೋವಾ ಸೇರಿದಂತೆ ವಿವಿಧ ರೆಸಾರ್ಟ್‌ಗಳಿಗೆ ಕರೆದುಕೊಂಡು ಹೋಗಲಾಗಿತ್ತು.

ಇದೀಗ ಮತ್ತೆ ಬಿಜೆಪಿ ಪಕ್ಷೇತರ ಸದಸ್ಯರನ್ನು ತನ್ನತ್ತ ಸೆಳೆಯಲು ಮುಂದಾಗಿರುವ ಹಿನ್ನೆಲೆಯಲ್ಲಿ ಮತ್ತೂಮ್ಮೆ ರೆಸಾರ್ಟ್‌ ರಾಜಕೀಯ ಶುರುವಾಗುವ ಸಾಧ್ಯತೆಯಿದೆ. ಅದರಂತೆ ಪಕ್ಷೇತರ 8 ಸದಸ್ಯರ ಪೈಕಿ 7 ಸದಸ್ಯರನ್ನು ಸೆ. 27ರವರೆಗೆ ಗೋವಾದ ರೆಸಾರ್ಟ್‌ ಒಂದಕ್ಕೆ ಕಳುಹಿಸಲು ನಿರ್ಧರಿಸಲಾಗಿದ್ದು, ಎರಡು ದಿನಗಳಲ್ಲಿ ಇಬ್ಬರು ಕಾಂಗ್ರೆಸ್‌ ಶಾಸಕರೊಂದಿಗೆ ಪಕ್ಷೇತರ ಸದಸ್ಯರು ಗೋವಾಗೆ ತೆರಳಲಿದ್ದಾರೆ ಎನ್ನಲಾಗಿದೆ.

ಪ್ರಮುಖ ಸಮಿತಿಗಳ ಮೇಲೆ ಪಕ್ಷೇತರರ ಕಣ್ಣು: ಪಕ್ಷೇತರ ಸದಸ್ಯರಿಗೆ ಕಳೆದ ಮೂರು ವರ್ಷಗಳಲ್ಲಿ ಪ್ರಮುಖ ಸ್ಥಾಯಿ ಸಮಿತಿಗಳು ದೊರಕಿಲ್ಲ. ಹೀಗಾಗಿ ಈ ಬಾರಿಯಾದರೂ ಪ್ರಮುಖ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡುವಂತೆ ಪಕ್ಷೇತರರು ಬೇಡಿಕೆ ಇಟ್ಟಿದ್ದಾರೆ. ಅದರಂತೆ ನಗರಯೋಜನೆ, ಬೃಹತ್‌ ಯೋಜನೆ, ವಾರ್ಡ್‌ ಮಟ್ಟದ ಕಾಮಗಾರಿಯಂತಹ ಸ್ಥಾಯಿ ಸಮಿತಿಗಳು ಪಕ್ಷೇತರರ ಪಾಲಾಗಲಿವೆ.

ಪಕ್ಷೇತರರಿಗೆ ನಾಲ್ಕು ಸ್ಥಾಯಿ ಸಮಿತಿ ನೀಡಿದ ನಂತರ ಉಳಿಯುವ 8 ಸ್ಥಾಯಿ ಸಮಿತಿಗಳ ಪೈಕಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ತಲಾ ನಾಲ್ಕು ಸ್ಥಾಯಿ ಸಮಿತಿಗಳನ್ನು ಹಂಚಿಕೊಳ್ಳಲು ನಿರ್ಧರಿಸಲಾಗಿದೆ. ಅದರಲ್ಲೂ ಕಳೆದ ಬಾರಿ ಜೆಡಿಎಸ್‌ ಪಾಲಾಗಿದ್ದ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಈ ಬಾರಿ ಕಾಂಗ್ರೆಸ್‌ ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

UTK

Speaker ಯು.ಟಿ.ಖಾದರ್‌ ವ್ಯಾಟಿಕನ್‌ ಸಿಟಿಗೆ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.